ಜಿಲ್ಲೆಯ ಅಭಿವೃದ್ಧಿಗೆ ಪೊನ್ನಣ್ಣಗೆ ಮಂತ್ರಿ ಸ್ಥಾನ ನೀಡಿ

22 vtp 3 Press meet
ಸುದ್ದಿಗೋಷ್ಠಿಯಲ್ಲಿ ಪಡಿಞರಂಡ ಅಯ್ಯಪ್ಪ ಮಾತನಾಡಿದರು.
Published on

ವಿರಾಜಪೇಟೆ: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿದ್ದು, ಜಿಲ್ಲೆಯ ಎರಡೂ ವಿಧಾನಸಭಾ ಕ್ಷೇತ್ರಗಳು ಕಾಂಗ್ರೆಸ್ ಪಾಲಾಗಿರುವುದರಿಂದ ವಿರಾಜಪೇಟೆ ಶಾಸಕ ಎ.ಎಸ್ ಪೊನ್ನಣ್ಣ ಅವರಿಗೆ ಮಂತ್ರಿ ಸ್ಥಾನ ನೀಡಿ ಅವರನ್ನು ಜಿಲ್ಲೆಯ ಉಸ್ತುವಾರಿ ಸಚಿವರನ್ನಾಗಿ ಮಾಡಬೇಕೆಂದು ಕೊಡಗು ಹೆಗ್ಗಡೆ ಅಭಿವೃದ್ಧಿ ಸಂಘ ಮತ್ತು ಸಮಾಜದ ಅಧ್ಯಕ್ಷ ಪಡಿಞರಂಡ ಅಯ್ಯಪ್ಪ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಒತ್ತಾಯಿಸಿದ್ದಾರೆ.

20 ವರ್ಷಗಳಿಂದ ಹೊರಜಿಲ್ಲೆಯವರೇ ಕೊಡಗಿನ ಉಸ್ತುವಾರಿ ಸಚಿವರಾಗುತ್ತಿದ್ದು, ಜಿಲ್ಲೆಯಿಂದ ಶಾಸಕರಾಗಿ ಆಯ್ಕೆಯಾದವರಿಗೆ ಯಾವುದೇ ಸ್ಥಾನಮಾನ ನೀಡುತ್ತಿಲ್ಲ. ಬಿಜೆಪಿ ಸರ್ಕಾರ ಇದ್ದಾಗ ಒಂದು ವರ್ಷ ಅಪ್ಪಚ್ಚು ರಂಜನ್ ಅವರಿಗೆ ನೀಡಲಾಗಿತ್ತು. ಜಿಲ್ಲೆಯವರಾದ ವಿರಾಜಪೇಟೆ ಶಾಸಕ ಪೊನ್ನಣ್ಣ ಅವರಿಗೆ ಮಂತ್ರಿಸ್ಥಾನ ನೀಡಿ ಅವರನ್ನು ಉಸ್ತವಾರಿ ಸಚಿವರನ್ನಾಗಿ ಮಾಡಿದರೆ ಜಿಲ್ಲೆಯ ಅಭಿವೃದ್ಧಿಗೆ ಸಹಕಾರಿಯಾಗಲಿದೆ ಎಂದು ಸುದ್ದಿಗೋಷ್ಠಿಯಲ್ಲಿ ಹೇಳಿದರು.

ಕೊಡಗು ಜಿಲ್ಲಾ ಅಹಿಂದ ಒಕ್ಕೂಟದ ಅಧ್ಯಕ್ಷ ತೋರೆರ ಮುದ್ದಯ್ಯ ಮಾತನಾಡಿ, ಜಿಲ್ಲೆಯ ಜ್ವಲಂತ ಸಮಸ್ಯೆಗಳಾದ ಜಮ್ಮಾ ಬಾಣೆ, ವನ್ಯಮೃಗಗಳ ಹಾವಳಿ, ಕೋವಿಯ ಹಕ್ಕು ಇತ್ಯಾದಿಗಳ ಬಗ್ಗೆ ಅರಿವಿರುವ ವಿರಾಜಪೇಟೆ ಶಾಸಕ ಎ.ಎಸ್ ಪೊನ್ನಣ್ಣ ಅವರಿಗೆ ಮಂತ್ರಿ ಸ್ಥಾನ ನೀಡಿ, ಉಸ್ತುವಾರಿ ಸಚಿವರನ್ನಾಗಿ ಮಾಡಿದರೆ ಅಭಿವೃದ್ಧಿಗೆ ಸಹಕಾರಿಯಾಗಲಿದೆ ಎಂದು ಹೇಳಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net