ಜಿಲ್ಲೆಯ ಅಭಿವೃದ್ಧಿಗೆ ಬಲ

Raghumurthy
Published on

ಚಿತ್ರದುರ್ಗ: ಸಾಮಾಜಿಕ ನ್ಯಾಯ, ಆರ್ಥಿಕ ಅಭಿವೃದ್ಧಿ, ಕೈಗಾರಿಕಾ ಬೆಳವಣಿಗೆ, ಶಿಕ್ಷಣ, ಆರೋಗ್ಯ, ಕೃಷಿ, ಆಧುನಿಕ ಉದ್ಯಮ ಸೇರಿ ಎಲ್ಲಾ ಕ್ಷೇತ್ರಗಳಿಗೆ ನ್ಯಾಯ ಒದಗಿಸುವ ಮೂಲಕ ಪರಿಪೂರ್ಣವಾದ ಜನಪ್ರಿಯ ಬಜೆಟ್ ಇದಾಗಿದೆ ಎಂದು ರಾಜ್ಯ ಸಣ್ಣ ಕೈಗಾರಿಕೆ ಅಭಿವೃದ್ಧಿ ನಿಗಮದ ಅಧ್ಯಕ್ಷ ಟಿ.ರಘುಮೂರ್ತಿ ತಿಳಿಸಿದ್ದಾರೆ.

ಜಿಲ್ಲೆಯಲ್ಲಿ ವೈದ್ಯಕೀಯ ಕಾಲೇಜು ಕಟ್ಟಡ, ವಸತಿ ನಿಲಯ, ಸಿಬ್ಬಂದಿ ವಸತಿ ಗೃಹಕ್ಕೆ ಮೂಲಸೌಕರ್ಯ, ಇನ್ನೊಂದು ಜಿಟಿಟಿಸಿ ತರಬೇತಿ ಕೇಂದ್ರ, ಮೀನುಗಾರಿಕೆ ಅಭಿವೃದ್ಧಿ ಕುರಿತು ಪ್ರಸ್ತಾಪಿಸಿರುವುದು ಸಂತಸದ ವಿಚಾರ. 5 ಗ್ಯಾರಂಟಿ ಯೋಜನೆಗಳ ಜೊತೆಗೆ ಅಭಿವೃದ್ಧಿ ಜೊತೆಗೆ ಯಾವುದೇ ಕೊರತೆ ಉಂಟಾಗದಂತೆ ರಾಜ್ಯದ ಅಭಿವೃದ್ಧಿಗೆ ಪೂರಕವಾದ ಬಜೆಟ್ ಸಿಎಂ ಮಂಡಿಸಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net