ಜಿಲ್ಲೆಯ ಅಭಿವೃದ್ಧಿಗೆ ಶಕ್ತಿ ಮೀರಿ ಪ್ರಯತ್ನ

Sumalatha
Published on

ಮದ್ದೂರು: ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ನನ್ನ ಶಕ್ತಿ ಮೀರಿ ಕೆಲಸ ಮಾಡುತ್ತಿರುವುದಾಗಿ ಸಂಸದೆ ಸುಮಲತಾ ಅಂಬರೀಷ್ ತಿಳಿಸಿದರು.

ಕೊಪ್ಪ ಹೋಬಳಿಯ ವಿವಿಧ ಗ್ರಾಮಗಳಲ್ಲಿ ಬುಧವಾರ ಪ್ರವಾಸ ಕೈಗೊಂಡು ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿ ಮಾತನಾಡಿ, ಜಿಲ್ಲೆಯ ಅಭಿವೃದ್ಧಿ ಮಾಡುವ ಉದ್ದೇಶದಿಂದ ಕೆಲಸ ಮಾಡುತ್ತಿದ್ದು, ಕೇಂದ್ರ ಸರ್ಕಾರದಿಂದ ಹೆಚ್ಚಿನ ಅನುದಾನ ತಂದು ಮತ್ತಷ್ಟು ಅಭಿವೃದ್ಧಿ ಮಾಡಲು ಶ್ರಮಿಸುತ್ತೇನೆ ಎಂದು ಭರವಸೆ ನೀಡಿದರು.

ಇದೇ ವೇಳೆ ಸಂಸದರ ನಿಧಿ 50 ಲಕ್ಷ ರೂ. ವೆಚ್ಚದಲ್ಲಿ ಚಾಪುರದೊಡ್ಡಿ ಗ್ರಾಮದಲ್ಲಿ ನಿರ್ಮಾಣಗೊಂಡಿರುವ ಬಸ್ ತಂಗುದಾಣ ಉದ್ಘಾಟಿಸಿದರು. ಅರೆಕಲ್ಲುದೊಡ್ಡಿ ಗ್ರಾಮದಲ್ಲಿ ನಿರ್ಮಾಣಗೊಳ್ಳುತ್ತಿರುವ ಮುಳ್ಳಕಟ್ಟಮ್ಮ ದೇವಿ ಸಮುದಾಯ ಭವನದ ಕಾಮಗಾರಿ ವೀಕ್ಷಿಸಿದರು.

ಕೌಡ್ಲೆ ಗ್ರಾಪಂ ವ್ಯಾಪ್ತಿಯ ಕೆ.ಮಲ್ಲಿಗೆರೆ, ತರೀಕೆರೆ ಕಾಲನಿ ಹಾಗೂ ಅವ್ವೇರಹಳ್ಳಿ ಗ್ರಾಮದಲ್ಲಿ ನಿರ್ಮಿಸಿರುವ ಶುದ್ಧ ಕುಡಿಯುವ ನೀರಿನ ಘಟಕವನ್ನು ಉದ್ಘಾಟಿಸಿದರು. ಕೌಡ್ಲೆ ಗ್ರಾಮದಲ್ಲಿ ನಿರ್ಮಾಣ ಮಾಡಿರುವ ಬಸ್ ತಂಗುದಾಣವನ್ನು ಸೇವೆಗೆ ಮುಕ್ತ ಗೊಳಿಸಿದರು. ವಿಧಾನ ಪರಿಷತ್ ಸದಸ್ಯ ದಿನೇಶ್ ಗೂಳಿಗೌಡ, ಬಿಜೆಪಿ ಜಿಲ್ಲಾಧ್ಯಕ್ಷ ಸಿ.ಪಿ.ಉಮೇಶ್, ಜಿಪಂ ಮಾಜಿ ಅಧ್ಯಕ್ಷ ಬಿ.ವಿವೇಕಾನಂದ, ಜಯರಾಮು ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net