ಜಿಲ್ಲೆಯ ಪುಣ್ಯಕ್ಷೇತ್ರಗಳ ಅಭಿವೃದ್ಧಿಗೆ ಬದ್ಧ

11Kakkeri1
ಕಕ್ಕೇರಿ ಗ್ರಾಮದ ಬಿಷ್ಠಾದೇವಿ ಮಂದಿರಕ್ಕೆ ಭೇಟಿ ನೀಡಿದ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರನ್ನು ದೇವಸ್ಥಾನದ ವತಿಯಿಂದ ಸನ್ಮಾನಿಸಲಾಯಿತು. ಕಾರ್ತಿಕ ಅಂಬೋಜಿ, ಶಂಕರ ಮಾಡಲಗಿ ಇತರರು ಇದ್ದರು.
Published on

ಕಕ್ಕೇರಿ: ಮುಂಬರುವ ಚುನಾವಣೆಯಲ್ಲಿ ಅಧಿಕಾರ ಪಡೆದು ಮುಖ್ಯಮಂತ್ರಿಯಾದರೆ ಬೆಳಗಾವಿ ಜಿಲ್ಲೆಯ ಎಲ್ಲ ಪುಣ್ಯಕ್ಷೇತ್ರಗಳನ್ನು ಅಭಿವದ್ಧಿ ಮಾಡುವ ಗುರಿ ಹೊಂದಿದ್ದೇನೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಹೇಳಿದರು. ಗ್ರಾಮದ ಬಿಷ್ಠಾದೇವಿ ಮಂದಿರಕ್ಕೆ ಶುಕ್ರವಾರ ಭೇಟಿ ನೀಡಿ ಆಶೀರ್ವಾದ ಪಡೆದು ಮಾತನಾಡಿದ ಅವರು, ಕಕ್ಕೇರಿ ಗ್ರಾಮ 12ನೇ ಶತಮಾನದ ಶಿವಶರಣ ಡೋಹರ ಕಕ್ಕಯ್ಯ, ಶಿವಶರಣೆ ಬಿಷ್ಠಾದೇವಿಯ ಪುಣ್ಯಕ್ಷೇತ್ರ ಹಾಗೂ ಶಿವಶರಣ ಚನ್ನಬಸವೇಶ್ವರರು ಲಿಂಗಪೂಜೆ ಮಾಡಿರುವ ಪವಿತ್ರ ಸ್ಥಳವಾಗಿದೆ. ಈ ಭಾಗಕ್ಕೆ ಭೇಟಿ ನೀಡಿ ವಾಸ್ತವ್ಯ ಮಾಡಿರುವುದು ಸಂತಸ ಎಂದರು. ತಮ್ಮೆಲ್ಲರ ಆಶೀರ್ವಾದ ಹಾಗೂ ಹೆಚ್ಚಿನ ಸಂಖ್ಯೆಯಲ್ಲಿ ಜೆಡಿಎಸ್ ಅಭ್ಯರ್ಥಿಗಳನ್ನು ಆಯ್ಕೆ ಮಾಡಿ ಸುಗಮವಾಗಿ ಐದು ವರ್ಷ ಆಡಳಿತ ಮಾಡಲು ಅವಕಾಶ ಮಾಡಿಕೊಡಿ ಎಂದು ಮನವಿ ಮಾಡಿದರು. ಮಂದಿರದ ಕಮಿಟಿ ಅಧ್ಯಕ್ಷ ಕಾರ್ತಿಕ ಅಂಬೋಜಿ ಕುಮಾರಸ್ವಾಮಿ ಅವರನ್ನು ಸನ್ಮಾನಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net