ಜಿಲ್ಲೆಯ ಪ್ರಗತಿಗೆ ಪಿಡಿಒಗಳು ಶ್ರಮಿಸಿ

ಜಿಪಂ ಸಭೆ
ಸೋಮವಾರಪೇಟೆಯ ತಾಪಂ ಸಭಾಂಗಣದಲ್ಲಿ ಆಯೋಜಿಸಿದ್ದ ಗ್ರಾಮ ಪಂಚಾಯಿತಿಗಳ ಮಾಸಿಕ ಪ್ರಗತಿ ಪರಿಶೀಲನಾ ಸಭೆ ನಡೆಯಿತು. ವರ್ಣಿತ್‌ನೇಗಿ, ಜಯಣ್ಣ, ರಾಜಗೋಪಾಲ್ ಇದ್ದರು.
Published on

ಸೋಮವಾರಪೇಟೆ: ಕೊಡಗು ಜಿಲ್ಲೆ ಅಭಿವೃದ್ಧಿಯಲ್ಲಿ ತೀರಾ ಹಿಂದುಳಿದಿದ್ದು, ಪಿಡಿಒಗಳು ವೈಯಕ್ತಿಕವಾಗಿ ಗಮನಹರಿಸಿ ಸರ್ಕಾರದಿಂದ ನೀಡಲಾಗುವ ಸೂಚನೆಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕೆಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ವರ್ಣಿತ್ ನೇಗಿ ಹೇಳಿದರು.

ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಗುರುವಾರ ಆಯೋಜಿಸಿದ್ದ ಸೋಮವಾರಪೇಟೆ ಹಾಗೂ ಕುಶಾಲನಗರ ತಾಲೂಕಿನ ಗ್ರಾಮ ಪಂಚಾಯಿತಿಗಳ ಮಾಸಿಕ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಗ್ರಾಮೀಣ ಭಾಗದಲ್ಲಿ ಕಾಡುತ್ತಿರುವ ಸಮಸ್ಯೆಗಳ ಬಗ್ಗೆ ಗಮನ ಹರಿಸಬೇಕು. ತಳಮಟ್ಟದಲ್ಲಿ ಕೆಲಸ ಮಾಡಿ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಬೇಕು. ಹಳ್ಳಿಗಳಿಗೆ ಭೇಟಿ ನೀಡಿ ಅಲ್ಲಿನ ಜನರ ಕಷ್ಟಸುಖ ವಿಚಾರಿಸಿ ಅವರಿಗೆ ದೊರಕಬೇಕಾದ ಸೌಲಭ್ಯಗಳನ್ನು ಒದಗಿಸಬೇಕು ಎಂದು ಸೂಚನೆ ನೀಡಿದರು.

ಇದೇ ಸಂದರ್ಭದಲ್ಲಿ ಎನ್‌ಆರ್‌ಇಜಿ, ವಸತಿ, ಎಸ್.ಬಿ.ಎಂ, ಡಿಜಿಟಲ್ ಲೈಬ್ರರಿ, ದೂರದೃಷ್ಟಿಯೋಜನೆ, ಜಲಜೀವನ್ ಮಿಷನ್, ಡಿಸಿಬಿ, ಗೃಹಲಕ್ಷ್ಮೀ ಯೋಜನೆ, ಸಕಾಲ ಸೇರಿದಂತೆ ಇತರ ಇಲಾಖೆಗಳ ಪ್ರಗತಿ ಪರಿಶೀಲನೆ ನಡೆಸಲಾಯಿತು. ಜಿಪಂ ಯೋಜನಾಧಿಕಾರಿ ರಾಜ್‌ಗೋಪಾಲ್, ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಜಯಣ್ಣ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net