ಜಿಲ್ಲೆಯ ಬಾಲ ತಾಯಂದಿರ ಮಾಹಿತಿ ಸಲ್ಲಿಕೆಗೆ ಗುಡುವು

bkt-24-6
ಬಾಗಲಕೋಟೆ ಜಿಲ್ಲಾ ಪಂಚಾಯಿತಿ ನೂತನ ಸಭಾಭವನದಲ್ಲಿ ಗುರುವಾರ ಸಂಜೆ ಆರ್.ಟಿ.ಇ, ಪೋಕ್ಸೋ-೨೦೧೨, ಬಾಲ ನ್ಯಾಯ ಕಾಯ್ದೆ-೨೦೧೫ರ ಅನುಷ್ಠಾನ ಕುರಿತ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷೆ ವಹಿಸಿ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ಕೆ.ನಾಗಣ್ಣ ಗೌಡ ಮಾತನಾಡಿದರು. ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರಾದ ಶೇಖರಗೌಡ ರಾಮತ್ನಾಳ, ಶಶಿಧರ ಕೋಸುಂಬೆ, ತಿಪ್ಪೆಸ್ವಾಮಿ, ಮಂಜುಳಾ, ಜಿಲ್ಲಾ ಪೊಲೀಸ್ ವರಿಷ್ಠಾಽಕಾರಿ ಸಿದ್ದಾರ್ಥ ಗೋಯಲ್, ಹೆಚ್ಚುವರಿ ಪೊಲೀಸ್ ವರಿಷ್ಠಾಽಕಾರಿ ಮಹಾಂತೇಶ್ವರ ಜಿದ್ದಿ ಇದ್ದರು.
Published on

ಬಾಗಲಕೋಟೆ: ಜಿಲ್ಲೆಯ ಕಳೆದ ಮೂರು ವರ್ಷಗಳಲ್ಲಿ ಬಾಲ ತಾಯಂದಿರ ಸಂಬAಽಸಿದ ಪ್ರಕರಣಗಳ ಕುರಿತ ವಿವರವಾದ ಮಾಹಿತಿಯನ್ನು ಎರಡು ವಾರಗಳಲ್ಲಿ ಸಲ್ಲಿಸುವಂತೆ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ಕೆ.ನಾಗಣ್ಣ ಗೌಡ ಅಽಕಾರಿಗಳಿಗೆ ಗಡುವು ನೀಡಿದರು.

ಜಿಲ್ಲಾ ಪಂಚಾಯಿತಿ ನೂತನ ಸಭಾಭವನದಲ್ಲಿ ಗುರುವಾರ ಸಂಜೆ ಆರ್.ಟಿ.ಇ, ಪೋಕ್ಸೋ-೨೦೧೨, ಬಾಲ ನ್ಯಾಯ ಕಾಯ್ದೆ-೨೦೧೫ರ ಅನುಷ್ಠಾನ ಕುರಿತ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷೆ ವಹಿಸಿ ಮಾತನಾಡಿದ ಅವರು, ಜಿಲ್ಲಾಸ್ಪತ್ರೆಗಳಲ್ಲಿ ಮಕ್ಕಳಿಗಾಗಿ ಸ್ಥಾಪಿಸಿರುವ ವಿಶೇಷ ಘಟಕಗಳಿಗೆ ಅಗತ್ಯ ಮೂಲಸೌಕರ್ಯ ಒದಗಿಸಲು ಆರೋಗ್ಯ ಇಲಾಖೆಗೆ ಸೂಚನೆ ನೀಡಿದರು. ಜೊತೆಗೆ ಜಿಲ್ಲಾಽಕಾರಿ ಹಾಗೂ ಜಿಪಂ ಸಿಇಒ ಜಿಲ್ಲಾ ಆಸ್ಪತ್ರೆಗೆ ಭೇಟಿ ನೀಡಿ, ಆಸ್ಪತ್ರೆಯೊಳಗಿನ ಸಮಸ್ಯೆಗಳಿಗೆ ತ್ವರಿತ ಪರಿಹಾರಕ್ಕೆ ಕ್ರಮ ಕೈಗೊಳ್ಳಬೇಕು ಎಂದರು.

ಕೆಲವೊಂದು ಪೊಲೀಸ್ ಸಿಬ್ಬಂದಿಗಳಿಗೆ ಪೋಕ್ಸೋ ಕಾಯ್ದೆ ಸೇರಿದಂತೆ ಮಕ್ಕಳ ರಕ್ಷಣಾ ಕಾಯ್ದೆಯ (೨೦೧೬) ಕುರಿತು ತಿಳುವಳಿಕೆ ಕೊರತೆಯಿರುವ ಹಿನ್ನೆಲೆಯಲ್ಲಿ, ಎಲ್ಲ ಪೊಲೀಸ್ ಸಿಬ್ಬಂದಿಗಳಿಗೆ ಪೂರ್ಣ ಮಾಹಿತಿ ಮತ್ತು ತರಬೇತಿ ನೀಡುವಂತೆ ಆದೇಶ ನೀಡಲಾಗಿದೆ. ಕಾಣೆಯಾದ ಮಕ್ಕಳ ಪತ್ತೆ ಹಾಗೂ ಬಾಕಿ ಉಳಿದ ಪ್ರಕರಣಗಳ ಸಮರ್ಪಕ ತನಿಖೆ ನಡೆಸಿ ಪತ್ತೆ ಹಚ್ಚುವಂತೆ ಸೂಚಿಸಲಾಗಿದೆ. ಶಾಲಾ ರಜೆ ದಿನಗಳಲ್ಲಿ ಶಾಲಾ ಆವರಣದಲ್ಲಿ ಅನಽಕೃತ ಪ್ರವೇಶವನ್ನು ನಿಷೇಽಸಿ, ಉಲ್ಲಂಘನೆ ಮಾಡಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಸೂಚನೆ ನೀಡಿದರು.

ತಾಲೂಕು ಪಂಚಾಯಿತಿ ಮಟ್ಟದಲ್ಲಿ ಬಾಲ್ಯ ವಿವಾಹ ನಿಷೇಧ ಸಮಿತಿಯನ್ನು ರಚಿಸುವುದು ಮತ್ತು ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಬಾಲ್ಯ ವಿವಾಹ ಕುರಿತು ಮಾಹಿತಿ ಹಂಚಿಕೊಳ್ಳಬೇಕು. ಆಶಾ ಕಾರ್ಯಕರ್ತರು ಹಾಗೂ ಪಂಚಾಯಿತಿ ಸಿಬ್ಬಂದಿಗಳ ಮೂಲಕ ಬಾಲ್ಯ ವಿವಾಹದ ಮಾಹಿತಿ ಸಂಗ್ರಹಿಸಿ ತಡೆಗಟ್ಟುವಂತೆ ಕ್ರಮವಹಿಸಲು ಸೂಚಿಸಲಾಗಿದೆ. ಪ್ರತಿಯೊಂದು ಗ್ರಾಮ ಪಂಚಾಯಿತಿಯ ವ್ಯಾಪ್ತಿಯಲ್ಲಿ ಮಕ್ಕಳ ಗ್ರಾಮಸಭೆ ನಡೆಸಿ, ಮಕ್ಕಳ ಕಾವಲು ಸಮಿತಿಯನ್ನು ರಚಿಸಬೇಕು. ಇದರಲ್ಲಿ ಗ್ರಾಮದ ಪೊಲೀಸ್ ಬೀಟ್ ಅಽಕಾರಿ ಪಾಲ್ಗೊಳ್ಳಬೇಕು ಎಂದರು.

೯ನೇ ತರಗತಿಯ ಹೊರಗಿನ ಹಾಗೂ ದೀರ್ಘಕಾಲದ ಗೈರುಹಾಜರಾತಿ ವಿದ್ಯಾರ್ಥಿನಿಯರ ಮಾಹಿತಿ ಸಂಗ್ರಹಿಸಿ, ಬಾಲ್ಯ ವಿವಾಹಕ್ಕೆ ಒಳಗಾಗುತ್ತಿರುವುದಾಗಿ ತೋರಿದರೆ ತಕ್ಷಣಲೇ ರಕ್ಷಣೆ ನೀಡಬೇಕೆಂದು ಸೂಚನೆ ನೀಡಲಾಗಿದೆ. ಕ್ರಮ ಕೈಗೊಳ್ಳದ ಅಽಕಾರಿಗಳ ವಿರುದ್ಧ ನೋಟಿಸ್ ನೀಡಲಾಗುವುದು. ಅಲ್ಲದೇ, ಎಲ್ಲಾ ಸರ್ಕಾರಿ ಕಟ್ಟಡಗಳ ಮೇಲೆ ಮಕ್ಕಳ ಸಹಾಯವಾಣಿ ಮಾಹಿತಿ ಪ್ರದರ್ಶಿಸಲು ಸೂಚನೆ ನೀಡಿದರು.

ಇತ್ತೀಚೆಗೆ ಲೋಕಾಪುರ ಖಾಸಗಿ ಶಾಲೆಯಲ್ಲಿ ನಡೆದ ಬಸ್ಪಲ್ಟಿ ಪ್ರಕರಣ ಸಂಬAಧವಾಗಿ ಶಾಲೆಗೆ ನೋಟಿಸ್ ನೀಡಿ ಅದರ ವರದಿಯನ್ನು ಆಯೋಗಕ್ಕೆ ಕಳುಹಿಸಬೇಕೆಂದು ಸೂಚನೆ ನೀಡಲಾಗಿದೆ. ಕೆಲವು ಶಾಲೆ ಹಾಗೂ ಹಾಸ್ಟೆಲ್‌ಗಳಲ್ಲಿ ಆಹಾರದ ಗುಣಮಟ್ಟ ಕಳಪೆಯಾಗಿರುವ ಬಗ್ಗೆ ತಕ್ಷಣ ಕ್ರಮ ಕೈಗೊಳ್ಳಿ. ಶೂನ್ಯ ಅಥವಾ ಐದಕ್ಕಿಂತ ಕಡಿಮೆ ಮಕ್ಕಳ ದಾಖಲಾತಿ ಇರುವ ಹಾಗೂ ಮುಚ್ಚಿದ ಶಾಲೆಗಳ ಪಟ್ಟಿ ಆಯೋಗಕ್ಕೆ ಸಲ್ಲಿಸಲು ತಿಳಿಸಿದರು.

ಅತಿಥಿ ಶಿಕ್ಷಕರ ನೇಮಕಾತಿಗೆ ಮೊದಲು ಅವರ ಪೊಲೀಸ್ ಪರಿಶೀಲನೆ ನಡೆಸಬೇಕು. ಬಾದಾಮಿ ತಾಲೂಕಿನ ಕೆಲವು ಶಾಲೆಗಳಲ್ಲಿ ಪಠ್ಯಪುಸ್ತಕ ಕೊರತೆಯಿದ್ದು, ತಕ್ಷಣ ಪೂರೈಕೆ ಮಾಡಬೇಕೆಂದು ಸೂಚಿಸಲಾಗಿದೆ. ದೀರ್ಘಕಾಲದ ಗೈರು ಹಾಜರಾತಿ ಇರುವ ವಿದ್ಯಾರ್ಥಿಗಳ ಹಾಜರಾತಿ ವಿವರಗಳನ್ನು ಹಾಜರಾತಿ ಪ್ರಾಽಕಾರಕ್ಕೆ ಕಳುಹಿಸಬೇಕು. ಎಲ್ಲಾ ವಿದ್ಯಾರ್ಥಿಗಳ ಆಧಾರ್ ಸೀಡಿಂಗ್ ಪ್ರಕ್ರಿಯೆ ಪೂರ್ಣಗೊಳಿಸಬೇಕು. ಪಿಯುಸಿ ಕಾಲೇಜುಗಳಲ್ಲಿ ಮಕ್ಕಳ ರಕ್ಷಣಾ ಕಾಯ್ದೆಯ ಕುರಿತು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಬೇಕು. ಶಾಲಾ ಆವರಣದ ವಿದ್ಯುತ್ ವೈರ್ ಮತ್ತು ಟ್ರಾನ್ಸ-Áರ್ಮರಗಳನ್ನು ತೆರವುಗೊಳಿಸಿ, ಕೃಷಿ ಹಾಗೂ ತೋಟಗಾರಿಕೆ ಇಲಾಖೆಯ ಸಹಯೋಗದಲ್ಲಿ ಪರಿಸರ ಸುಧಾರಣಾ ಕಾರ್ಯ ಕೈಗೊಳ್ಳಬೇಕು. ಶಾಲಾ ಆವರಣವನ್ನು ಸಮರ್ಪಕವಾಗಿ ಸದುಪಯೋಗಪಡಿಸಿಕೊಳ್ಳಬೇಕು ಎಂದು ತಿಳಿಸಿದರು.

ಶಕ್ತಿ ಯೋಜನೆಯು ಆರಂಭವಾದ ಬಳಿಕ ವಿದ್ಯಾರ್ಥಿಗಳಿಗೆ ಸಾರಿಗೆ ಸೌಲಭ್ಯ ಕೊರತೆಯಾಗಿ, ವಿದ್ಯಾರ್ಥಿಗಳು ಬಸ್ಸು ಬಾಗಿಲುಗಳಲ್ಲಿ ನಿಂತು ಪ್ರಯಾಣಿಸುವ ದೃಶ್ಯಗಳು ಹೆಚ್ಚಾಗಿವೆ. ಇದನ್ನು ಗಮನಿಸಿ ಬಸ್ ನಿರ್ವಾಹಕರಿಗೆ ಮಕ್ಕಳ ರಕ್ಷಣಾ ಕಾಯ್ದೆಯ ಕುರಿತು ತರಬೇತಿ ನೀಡಿ, ಬಸ್ಸಿನಲ್ಲಿ ಪ್ರಯಾಣಿಸುವ ಮಕ್ಕಳಿಗೆ ಸೂಕ್ತ ಮಾಹಿತಿ ನೀಡುವ ಕ್ರಮ ಕೈಗೊಳ್ಳಬೇಕೆಂದು ಸೂಚಿಸಲಾಗಿದೆ. ಬಸ್ ನಿಲ್ದಾಣಗಳಲ್ಲಿ ಅಗತ್ಯ ಮೂಲಸೌಕರ್ಯ ಒದಗಿಸುವಂತೆಯೂ ಸೂಚನೆ ನೀಡಿದರು.

ಜಾಲಿಹಾಳ್ ಬಿಸಿಎಂ ಹಾಸ್ಟೆಲ್‌ನಲ್ಲಿ ಮೂಲಸೌಕರ್ಯಗಳ ಕೊರತೆಯಿದ್ದು, ತಕ್ಷಣ ಸೂಕ್ತ ವ್ಯವಸ್ಥೆ ಮಾಡಬೇಕೆಂದು ಸೂಚನೆ ಇದೆ. ಚಿಕ್ಕ ಮುಚ್ಚಳ ಗುಡ್ಡ ವಸತಿ ನಿಲಯದ ಸಿಬ್ಬಂದಿ ಸಮಯ ಪಾಲನೆ ಮಾಡದಿರುವುದು, ಶೌಚಗೃಹ ಸ್ವಚ್ಛತೆ ಕೊರತೆಯಿರುವುದು ಹಾಗೂ ಆಹಾರದ ಗುಣಮಟ್ಟ ದುರ್ಬಲವಾಗಿದೆ. ಒಂದು ಕೋಣೆಯಲ್ಲಿ ೧೦-೧೨ ವಿದ್ಯಾರ್ಥಿಗಳನ್ನು ಇರಿಸಲಾಗುತ್ತಿದೆ. ಈ ಎಲ್ಲಾ ಸಮಸ್ಯೆಗಳಿಗೆ ತಕ್ಷಣ ಪರಿಹಾರ ಕಂಡುಕೊಳ್ಳಲು ತಿಳಿಸಿದರು.

ಜಿಲ್ಲಾಽಕಾರಿ ಸಂಗಪ್ಪ ಎಂ., ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಽಕಾರಿ ಶಶಿಧರ ಕುರೇರ ಮಾತನಾಡಿ, ಮಕ್ಕಳ ಹಕ್ಕುಗಳ ರಕ್ಷಣೆಯಲ್ಲಿ ಬೇಜವಾಬ್ದಾರಿ ಸಲ್ಲದು. ಮಕ್ಕಳ ರಕ್ಷಣೆ ಇರುವ ಕಾಯ್ದೆಗಳು ಸಮರ್ಪಕವಾಗಿ ಅನುಷ್ಠಾನಗೊಳಿಸಲು ಅಽಕಾರಿಗಳು ಶ್ರಮಿಸಬೇಕಿದೆ. ಇಂದಿನ ಸೈಬರ್ ಕ್ರೆÊಮ್ ಮತ್ತು ಮಾದಕ ವ್ಯಸನದಿಂದ ಹಾಳಾಗುತ್ತಿದ್ದು, ಈ ಬಗ್ಗೆ ಹೆಚ್ಚಿನ ಗಮನ ಹರಿಸಲು ಸೂಚಿಸಿದರು.

ಸಭೆಯಲ್ಲಿ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರಾದ ಶೇಖರಗೌಡ ರಾಮತ್ನಾಳ, ಶಶಿಧರ ಕೋಸುಂಬೆ, ತಿಪ್ಪೆಸ್ವಾಮಿ, ಮಂಜುಳಾ, ಜಿಲ್ಲಾ ಪೊಲೀಸ್ ವರಿಷ್ಠಾಽಕಾರಿ ಸಿದ್ದಾರ್ಥ ಗೋಯಲ್, ಹೆಚ್ಚುವರಿ ಪೊಲೀಸ್ ವರಿಷ್ಠಾಽಕಾರಿ ಮಹಾಂತೇಶ್ವರ ಜಿದ್ದಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಕೆ.ಪ್ರಭಾಕರ, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಅಽಕಾರಿ ಡಾ.ವೀಣಾ ಎಂ ಸೇರಿದಂತೆ ಇತರರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net