ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಕ್ರಮವಹಿಸಿ

Vijayasene
Published on

ಚಿತ್ರದುರ್ಗ: ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಕ್ರಮವಹಿಸುವುದು ಸೇರಿ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಆಗ್ರಹಿಸಿ ಕರುನಾಡ ವಿಜಯಸೇನೆ ಕಾರ್ಯಕರ್ತರು, ಮುಖಂಡರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಶುಕ್ರವಾರ ಮನವಿ ಸಲ್ಲಿಸಿದರು

ಭದ್ರಾ ಮೇಲ್ದಂಡೆ ಯೋಜನೆಗೆ ವೇಗ, ಕವಾಡಿಗರಹಟ್ಟಿ ಜನರಿಗೆ ಅಗತ್ಯ ಮೂಲಸೌಕರ್ಯ, ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಗೆ ಅಗತ್ಯ ಅನುದಾನ ಬಿಡುಗಡೆ ಸೇರಿ ಜಿಲ್ಲೆಯನ್ನು ಸರ್ವಾಂಗೀಣವಾಗಿ ಅಭಿವೃದ್ಧಿಪಡಿಸಬೇಕು ಎಂದು ಸಿಎಂಗೆ ಕೋರಿದರು.

ಮುಖಂಡರಾದ ಕೆ.ಟಿ.ಶಿವಕುಮಾರ್, ವೀಣಾ ಗೌರಮ್ಮ, ಅಭಿಷೇಕ್‌, ಅಭಿಲಾಶ್‌ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net