

ಚಿತ್ರದುರ್ಗ: ನಗರದ ವಿವಿಧ ಶಾಲಾ-ಕಾಲೇಜುಗಳಲ್ಲಿ, ಮಠಗಳಲ್ಲಿ, ಸಂಘ-ಸಂಸ್ಥೆಗಳಲ್ಲಿ, ಪಕ್ಷಗಳ ಕಚೇರಿಗಳಲ್ಲಿ ಶುಕ್ರವಾರ 75ನೇ ಗಣರಾಜ್ಯೋತ್ಸವ ಆಚರಿಸಲಾಯಿತು.
ವಿದ್ಯಾವಿಕಾಸ ವಿದ್ಯಾಸಂಸ್ಥೆಯಲ್ಲಿ 75ನೇ ಗಣರಾಜ್ಯೋತ್ಸವ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು. ಸಂಸ್ಥೆಯ ಕಾರ್ಯದರ್ಶಿ ಬಿ.ವಿಜಯಕುಮಾರ್ ಧ್ವಜಾರೋಹಣ ನೆರವೇರಿಸಿದರು. ನಿರ್ದೇಶಕ ಎಸ್.ಎಂ.ಪೃಥ್ವೀಶ್, ಶೈಕ್ಷಣಿಕ ಆಡಳಿತಾಧಿಕಾರಿ ಡಾ.ಕೆ.ಎನ್.ಸ್ವಾಮಿ, ಮುಖ್ಯ ಶಿಕ್ಷಕ ಸಿ.ಡಿ.ಸಂಪತ್ ಕುಮಾರ್, ಐಸಿಎಸ್‌ಸಿ ಪ್ರಾಚಾರ್ಯ ಪಿ.ಬಸವರಾಜಯ್ಯ, ಶಿಕ್ಷಕಿಯರಾದ ತ್ರಿವೇಣಿ, ಎಲ್.ಆರ್.ಉಷಾ, ಎಸ್.ವಿ.ಭಾಗೀರಥಿ, ಎನ್.ಕವಿತಾ, ಎಚ್.ಪಿ.ಜ್ಯೋತಿ, ಮಹೇಶ್ ಪಿಯು ಕಾಲೇಜಿನ ಪ್ರಾಚಾರ್ಯ ಕೆಂಚನ ಗೌಡ ಇತರರಿದ್ದರು.
ನಗರದ ಎಸ್‌ಜೆಎಂ ಕಲಾ ಮತ್ತು ವಾಣಿಜ್ಯ ಮಹಾವಿದ್ಯಾಲಯದಲ್ಲಿ ಗಣರಾಜ್ಯೋತ್ಸವ ಆಚರಿಸಲಾಯಿತು. ಪ್ರಾಚಾರ್ಯ ಡಾ.ಎಲ್.ಈಶ್ವರಪ್ಪ ಧ್ವಜಾರೋಹಣ ನೆರವೇರಿಸಿದರು. ಎಸ್‌ಜೆಎಂ ಪಾಲಿಟೆಕ್ನಿಕ್ ಕಾಲೇಜಿನ ಆವರಣದಲ್ಲಿ ಗಣರಾಜ್ಯೋತ್ಸವ ಆಚರಿಸಲಾಯಿತು. ಪ್ರಾಚಾರ್ಯ ಎಸ್.ವಿ.ರವಿಶಂಕರ್ ಧ್ವಜಾರೋಹಣ ನೆರವೇರಿಸಿದರು.
ಗಣರಾಜ್ಯೋತ್ಸವದ ಅಂಗವಾಗಿ ಜಿಲ್ಲಾ ಮದಕರಿನಾಯಕ ವಿದ್ಯಾಸಂಸ್ಥೆ ಆವರಣದಲ್ಲಿ ಸಂಸ್ಥೆಯ ಅಧ್ಯಕ್ಷ ಎಸ್.ಸಂದೀಪ್ ಧ್ವಜಾರೋಹಣ ನೆರವೇರಿಸಿದರು. ಆಡಳಿತಾಧಿಕಾರಿ ಎಸ್.ಸಾಗರ್ ಇತರರಿದ್ದರು.
ಕೋಡಿಹಳ್ಳಿ: ಚಳ್ಳಕೆರೆ ತಾಲೂಕಿನ ತಳಕು ಹೋಬಳಿ ಕೋಡಿಹಳ್ಳಿ ಗ್ರಾಮದ ಸ.ಹಿ.ಪ್ರಾ.ಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಿಸಲಾಯಿತು. ಎಸ್‌ಡಿಎಂಸಿ ಅಧ್ಯಕ್ಷ ಡಿ.ನಾಗರಾಜು, ಉಪಾಧ್ಯಕ್ಷ ಕೆ.ಬಿ.ಶಿವಾರೆಡ್ಡಿ, ಸದಸ್ಯ ವಿಜಯ್‌ಕುಮಾರ್, ಮುಖ್ಯ ಶಿಕ್ಷಕ ಎಚ್.ಜಗನ್ನಾಥ್, ಸಹ ಶಿಕ್ಷಕಿಯರಾದ ಸುಶೀಲಮ್ಮ, ಜಿ.ಟಿ. ಬಸವರಾಜ, ಎಲ್.ರತ್ನಮ, ಆರ್.ಆಶಾ, ಜೆ.ಸುಪ್ರಿಯಾ ಇತರರಿದ್ದರು.