

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಇದುವರೆಗೆ ಐದು ಗ್ಯಾರಂಟಿ ಯೋಜನೆಗಳಿಂದ ೯ ಲಕ್ಷ ಫಲಾನುಭವಿಗಳಿಗೆ ೨ ಸಾವಿರ ಕೋಟಿ ರೂ. ಸಂದಾಯವಾಗಿದೆ ಎಂದು ಜಿಲ್ಲಾ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಎಂ.ಸಿ.ಶಿವಾನAದಸ್ವಾಮಿ ತಿಳಿಸಿದರು.
ನಗರದ ಜಿಪಂ ಮಿನಿ ಸಭಾಂಗಣದಲ್ಲಿ ಬುಧವಾರ ಜಿಲ್ಲಾಮಟ್ಟದ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವÀಹಿಸಿ ಮಾತನಾಡಿದ ಅವರು, ಐದು ಇಲಾಖೆಗಳಿಗೆ ಸಂಬAಧಪಟ್ಟAತೆ ಯೋಜನೆಗಳು ಕಾರ್ಯಗತವಾಗಿರುವ ಬಗ್ಗೆ ಯಾವುದಾದರೂ ಕುಂಠಿತ ವಿಚಾರಗಳನ್ನು ಸುದೀರ್ಘವಾಗಿ ಚರ್ಚೆ ಮಾಡುವಂತೆ ತಿಳಿಸಿದರು. ಅಲ್ಲದೆ ಜಿಲ್ಲೆಯಲ್ಲಿ ಗ್ಯಾರಂಟಿ ಯೋಜನೆಗಳು ಶೇ. ೯೭ರಷ್ಟು ಯಶಸ್ವಿಯಾಗಿವೆ ಎಂದು ಹೇಳಿದರು.
ಇದುವರೆಗೆ ಜಿಲ್ಲೆಯಲ್ಲಿ ೨,೬೨,೯೪೪ ಯಜಮಾನಿಯರಿಗೆ ಗೃಹಲಕ್ಷ್ಮೀ ಮೂಲಕ ಮಾಸಿಕ ಸುಮಾರು ೫೩ ಕೋಟಿ ರೂ.ಗಳನ್ನು ೨೧ ಕಂತುಗಳ ಮೂಲಕ ನೀಡಲಾಗಿದೆ. ಮಾಸಿಕವಾಗಿ ಇದುವರೆಗೂ ೧ ಸಾವಿರ ಕೋಟಿ ರೂ.ಗಳನ್ನು ರಾಜ್ಯ ಸರ್ಕಾರ ನೇರವಾಗಿ ಫಲಾನುಭವಿಗಳ ಖಾತೆಗೆ ತಲಾ ೨೦೦೦ ರೂ. ಜಮಾ ಮಾಡಿದೆ ಎಂದು ಹೇಳಿದರು.
ಶಕ್ತಿ ಯೋಜನೆಯಡಿ ೬೦ ಸಾವಿರ ಜನ ಪ್ರತಿದಿನ ಮಹಿಳಾ ಫಲಾನುಭವಿಗಳು ಪ್ರಯಾಣ ಮಾಡುತ್ತಿದ್ದಾರೆ. ೨೪ ತಿಂಗಳಲ್ಲಿ ೪ ಕೋಟಿ ೬೭ ಟ್ರಿಪ್ ಬಸ್‌ಗಳು ಓಡಾಡಿವೆ. ಅದಕ್ಕೆ ಸಂಬAಧಪಟ್ಟAತೆ ೧೮೮ ಕೋಟಿ ರೂ.ಗಳನ್ನು ರಾಜ್ಯ ಸರ್ಕಾರ ಮಹಿಳೆಯರ ಪ್ರಯಾಣಕ್ಕೆ ಒದಗಿಸಿದೆ. ಮಲೆನಾಡು ಭಾಗದಲ್ಲಿ ಅದರಲ್ಲೂ ವಿಶೇಷವಾಗಿ ನರಸಿಂಹರಾಜಪುರ, ಬಾಳೆಹೊನ್ನೂರಿಗೆ ಸದಾ ಓಡಾಡಲು ಅನುಕೂಲವಾಗುವಂತೆ ಸಾರಿಗೆ ವ್ಯವಸ್ಥೆ ಮಾಡುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಯುವನಿಧಿ ಯೋಜನೆಯಡಿ ಒಟ್ಟು ಜಿಲ್ಲೆಯಲ್ಲಿ ೩,೫೦೬ ಜನ ಪದವೀಧರÀರಿಗೆ ೧ ಕೋಟಿ ೫ ಲಕ್ಷ ೧೨ ಸಾವಿರ ರೂ. ನೀಡಲಾಗಿದೆ. ೩೬ ಜನ ಡಿಪ್ಲೊಮಾ ವಿದ್ಯಾರ್ಥಿಗಳಿಗೆ ೫೪ ಸಾವಿರ ರೂ. ನೀಡಲಾಗಿದೆ. ೪,೪೮೮ ವಿದ್ಯಾರ್ಥಿಗಳು ಹೊಸದಾಗಿ ನೋಂದಣಿಯಾಗಿದ್ದು, ಅದರಲ್ಲಿ ೪,೪೩೧ ವಿದ್ಯಾರ್ಥಿಗಳು ಪದವೀಧÀರರಾಗಿದ್ದು, ಡಿಪ್ಲೊಮಾ ಆಗಿರುವ ೫೭ ವಿದ್ಯಾರ್ಥಿಗಳು ಸೇರ್ಪಡೆಯಾಗಿದ್ದಾರೆ. ಈಗಾಗಲೇ ಎಲ್ಲ ತಾಲೂಕಿನ ಕಾಲೇಜಿನಲ್ಲಿ ವ್ಯಾಪಕವಾಗಿ ಪ್ರಚಾರ ಮಾಡಲಾಗಿದೆ. ಜೊತೆಗೆ ಎಲ್ಲಾ ಕಡೆ ತರಬೇತಿ ಶಿಬಿರಗಳು ಪ್ರಾರಂಭವಾಗಿದ್ದು, ಅದನ್ನು ಮುಂದುವರಿಸಲಾಗುವುದು ಎಂದು ತಿಳಿಸಿದರು.
ಜಿಲ್ಲೆಯಲ್ಲಿ ಅನ್ನಭಾಗ್ಯ ಯೋಜನೆಯಡಿ ೨.೪೯ ಲಕ್ಷ ಬಿಪಿಎಲ್ ಕಾರ್ಡ್ಗಳ ೮ ಲಕ್ಷಕ್ಕೂ ಅಧಿಕ ಫಲಾನುಭವಿಗಳಿಗೆ ೫ ಕೆ.ಜಿ. ಅಕ್ಕಿನೀಡಲಾಗಿದ್ದು, ಆಗಸ್ಟ್ ಮಾಹೆಗೆ ೪೩,೪೨೦ ಕ್ವಿಂಟಾಲ್ ಅಕ್ಕಿ ಬಿಡುಗಡೆಯಾಗಿದೆ. ಇದಕ್ಕೆ ಅಂದಾಜು ೯ ಕೋಟಿ ರೂ. ವೆಚ್ಚವಾಗಿದೆ ಎಂದು ಹೇಳಿದರು. ಯೋಜನೆ ಆರಂಭದಿAದ ಇಲ್ಲಿಯವರೆಗೆ ಜಿಲ್ಲೆಯಲ್ಲಿ ೨೯೪ ಕೋಟಿ ರೂಪಾಯಿ ಹಣ ಸಲ್ಲಿಕೆಯಾಗಿದೆ ಎಂದು ಅಧಿಕಾರಿ ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆಯ ಉಪನಿರ್ದೇಶಕರಾದ ಯೋಗಾನಂದ್ ತಿಳಿಸಿದರು.
ಅನ್ನಭಾಗ್ಯ ಯೋಜನೆಯಡಿ ನಮ್ಮ ಜಿಲ್ಲೆಯಲ್ಲಿ ಫಲಾನುಭವಿಗಳಿಗೆ ಅನ್ಯಾಯವಾಗದಂತೆ ನೋಡಿಕೊಳ್ಳಬೇಕು. ಇನ್ನು ಮುಂದೆ ನ್ಯಾಯಬೆಲೆ ಅಂಗಡಿಯಲ್ಲಿ ಐರೀಷ್ ತಂತ್ರಜ್ಞಾನದ ಮೂಲಕ ಫಲಾನುಭವಿಗಳನ್ನು ಗುರುತಿಸಿ ಪಡಿತರ ಅಕ್ಕಿ ವಿತರಣೆ ಮಾಡಲು ರಾಜ್ಯ ಸರ್ಕಾರ ಮುಂದಾಗಿದೆ. ನಮ್ಮ ಜಿಲ್ಲೆಯಲ್ಲೂ ಕೂಡ ಈ ತಂತ್ರಜ್ಞಾನದ ಮೂಲಕ ಫಲಾನುಭವಿಗಳನ್ನು ಗುರುತಿಸಿ ವಿತರಿಸಬೇಕು ಎಂದು ಅಧಿಕಾರಿಗಳಿಗೆ ಶಿವಾನಂದ ಸ್ವಾಮಿ ಸೂಚನೆ ನೀಡಿದರು.
ಗೃಹಜ್ಯೋತಿ ಯೋಜನೆಯಡಿ ಜಿಲ್ಲೆಯ ೩.೧೨ ಲಕ್ಷ ಮೀಟರ್‌ಗಳಿಗೆ ಸಂಬAಧಿಸಿದAತೆ ಸುಮಾರು ೯ ಲಕ್ಷ ಜನರಿಗೆ ಪ್ರತಿ ತಿಂಗಳಿಗೆ ಉಚಿತ ವಿದ್ಯುತ್ ಒದಗಿಸುವ ಸಲುವಾಗಿ ೧೨ ಕೋಟಿ ರೂ.ಗಳನ್ನು ಸರ್ಕಾರ ಮೆಸ್ಕಾಂಗೆ ಸಂದಾಯ ಮಾಡುತ್ತಿದೆ. ೩೦೦ ಕೋಟಿ ರೂ. ವಿನಿಯೋಗವಾಗಿದೆ ಎಂದು ಮೆಸ್ಕಾಂ ಅಧೀಕ್ಷಕ ಅಭಿಯಂತರ ಪ್ರದೀಪ್ ಸಭೆಗೆ ಮಾಹಿತಿ ನೀಡಿದರು.
ಸಭೆಯಲ್ಲಿ ಗ್ಯಾರಂಟಿ ಯೋಜನೆ ಉಪಾಧ್ಯಕ್ಷರಾದ ಎಸ್.ಎನ್. ಮಂಜುನಾಥ್, ಎಚ್.ಎಸ್.ಕೃಷ್ಣೇಗೌಡ, ಹೇಮಾವತಿ ಹಾಗೂ ಚಂದ್ರಮೌಳಿ, ಪ್ರಾಧಿಕಾರದ ಸದಸ್ಯರು, ಹಾಗೂ ಎಲ್ಲಾ ತಾಲೂಕುಗಳ ಅಧ್ಯಕ್ಷರುಗಳು, ಜಿಪಂ ಮುಖ್ಯ ಯೋಜನಾಧಿಕಾರಿಗಳಾದ ರಾಜ್‌ಗೋಪಾಲ್ ಉಪಸ್ಥಿತರಿದ್ದರು.