ಜಿಲ್ಲೆಯನ್ನು ಬರಗಾಲ ಪೀಡಿತವೆಂದು ಘೋಷಿಸಿ

Declare the district drought prone
ಬಸವನಬಾಗೇವಾಡಿಯಲ್ಲಿ ರಾಷ್ಟ್ರೀಯ ಬಸವಸೈನ್ಯದ ಪದಾಧಿಕಾರಿಗಳು, ರೈತರು ಶಿರಸ್ತೆದಾರ್ ಮಹೇಶ ಬಳಗಾರ ಅವರಿಗೆ ಮನವಿ ಸಲ್ಲಿಸಿದರು. ಶಂಕರಗೌಡ ಬಿರಾದಾರ, ಶೇಖರ ಗೊಳಸಂಗಿ, ಶ್ರೀಕಾಂತ ಕೊಟ್ರಶೆಟ್ಟಿ, ಸಂಜು ಬಿರಾದಾರ ಇತರರಿದ್ದರು.
Published on

ಬಸವನಬಾಗೇವಾಡಿ: ಮುಂಗಾರು ಮಳೆ ಕೊರತೆ ಹಿನ್ನೆಲೆಯಲ್ಲಿ ವಿಜಯಪುರ ಜಿಲ್ಲೆಯನ್ನು ಬರಗಾಲ ಜಿಲ್ಲೆಯೆಂದು ಘೋಷಿಸುವಂತೆ ರಾಷ್ಟ್ರೀಯ ಬಸವಸೈನ್ಯದ ಪದಾಧಿಕಾರಿಗಳು ಹಾಗೂ ರೈತರು ತಹಸೀಲ್ದಾರ್ ಮೂಲಕ ರಾಜ್ಯ ಸರ್ಕಾರಕ್ಕೆ ಮಂಗಳವಾರ ಮನವಿ ಸಲ್ಲಿಸಿದರು.

ಪಟ್ಟಣದ ಬಸವೇಶ್ವರ ದೇವಸ್ಥಾನದಿಂದ ಘೋಷಣೆ ಕೂಗುತ್ತ ಬಸವೇಶ್ವರ ವೃತ್ತದ ಮೂಲಕ ಮಿನಿ ವಿಧಾನಸೌಧದ ತಹಸೀಲ್ದಾರ್ ಕಚೇರಿವರೆಗೆ ರ‌್ಯಾಲಿ ನಡೆಸಿ ತಾಲೂಕಾಡಳಿತ ಕಚೇರಿ ಮುಂದೆ ಕೆಲ ಹೊತ್ತು ಪ್ರತಿಭಟನೆ ನಡೆಸಿದರು.

ರಾಷ್ಟ್ರೀಯ ಬಸವಸೈನ್ಯದ ಸಂಸ್ಥಾಪಕ ಅಧ್ಯಕ್ಷ ಶಂಕರಗೌಡ ಬಿರಾದಾರ, ಎಪಿಎಂಸಿ ಮಾಜಿ ಅಧ್ಯಕ್ಷ ಶೇಖರ ಗೊಳಸಂಗಿ ಮಾತನಾಡಿ, ಜಿಲ್ಲೆಯಲ್ಲಿ ಅಲ್ಪ ಸ್ವಲ್ಪ ಮುಂಗಾರು ಮಳೆಯಾದ ಹಿನ್ನೆಲೆಯಲ್ಲಿ ಬೆಳೆ ಹಾಳಾಗಿ ರೈತರು ಸಂಕಷ್ಟಕ್ಕೆ ಸಿಲುಕ್ಕಿದ್ದಾರೆ. ಹಿಂಗಾರಿ ಮಳೆಯೂ ಸಮರ್ಪಕವಾಗಿ ಆಗುವ ಲಕ್ಷಣಗಳಿಲ್ಲ ಎಂದರು.

ಈಗಾಗಲೇ ರಾಜ್ಯ ಸರ್ಕಾರ ರಾಜ್ಯದ ನೂರಕ್ಕೂ ಅಧಿಕ ತಾಲೂಕುಗಳನ್ನು ಬರಪಟ್ಟಿಗೆ ಸೇರಿಸಲು ಮುಂದಾಗಿದೆ. ಅದರಲ್ಲಿ ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ, ತಾಳಿಕೋಟೆ ಸೇರಿದಂತೆ ಅನೇಕ ತಾಲೂಕುಗಳನ್ನು ಕೈಬಿಟ್ಟಿರುವುದರಿಂದ ರೈತರಿಗೆ ತೊಂದರೆಯಾಗುತ್ತದೆ. ಜಿಲ್ಲೆಯಲ್ಲಿ ಕೃಷಿ ಇಲಾಖೆ ಮತ್ತು ಸಂಬಂಧ ಪಟ್ಟ ಇಲಾಖೆಯವರು ಸಮಗ್ರ ಸಮೀಕ್ಷೆ ಮಾಡಿ ಸರ್ಕಾರಕ್ಕೆ ವರದಿ ಸಲ್ಲಿಸಬೇಕು. ಮುಂಗಾರು ಬಿತ್ತನೆ ಮಾಡಿದ ಬೆಳೆ ಸಂಪೂರ್ಣ ಹಾಳಾಗಿದ್ದು, ರಾಜ್ಯ ಸರ್ಕಾರ ರೈತರ ಖಾತೆಗೆ ಪರಿಹಾರ ಧನ ಹಾಕಬೇಕು. ಒಂದು ವೇಳೆ ರಾಜ್ಯ ಸರ್ಕಾರ ಹಿಂದೇಟು ಹಾಕಿದಲ್ಲಿ ರೈತರೊಂದಿಗೆ ಬೀದಿಗಿಳಿದು ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಶಿರಸ್ತೆದಾರ್ ಮಹೇಶ ಬಳಗಾರ ಮನವಿ ಸ್ವೀಕರಿಸಿದರು. ಶ್ರೀಕಾಂತ ಕೊಟ್ರಶೆಟ್ಟಿ, ಸಂಜು ಬಿರಾದಾರ, ಮುನ್ನನ್ ಶಾಬಾದಿ, ಜಟಿಂಗರಾಯ ಮಾಲಗಾರ, ಮಹಾಂತೇಶ ಆದಿಗೊಂಡ, ಸಂಕನಗೌಡ ಪಾಟೀಲ, ಶ್ರೀಧರ ಕುಂಬಾರ, ಸಿದ್ಧಲಿಂಗ ಒಡೆಯರ, ವಿನೋದ ಗಬ್ಬೂರ, ಮಹಾಂತೇಶ ಹೆಬ್ಬಾಳ, ಶ್ರವಣ ಕೊಡೆಕಲ್ಲಮಠ, ಮಹಾದೇವ ನಾಯ್ಕೋಡಿ, ವೀರೇಶ ಗಬ್ಬೂರ, ಸಚೀನ ಗಂಜಾಳ, ಬಸವರಾಜ ಹೂಗಾರ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net