ಜಿಲ್ಲೆಯನ್ನು ಬಾಲ್ಯವಿವಾಹ ಮುಕ್ತಗೊಳಿಸಲು ಪ್ರತಿಜ್ಞೆ

21rajesh3
Published on

ಚಾಮರಾಜನಗರ: ಜಿಲ್ಲೆಯನ್ನು ಬಾಲ್ಯವಿವಾಹ ಮುಕ್ತ ಚಾಮರಾಜನಗರವಾಗಿ ೋಷಣೆ ಮಾಡುವ ಅಭಿಯಾನದ ಭಾಗವಾಗಿ ಸೋಮವಾರ ಪ್ರತಿಜ್ಞಾವಿಧಿ ೋಷಣೆ ಸ್ವೀಕಾರ ಮಾಡಲಾಯಿತು.

ಜಿಲ್ಲಾ ಕೇಂದ್ರದಲ್ಲಿ ಜಿಲ್ಲಾಡಳಿತ ಭವನದ ಮುಂಭಾಗ ಬೃಹತ್ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿತ್ತು. ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶ ಈಶ್ವರ್ ಅವರು ಬಾಲ್ಯವಿವಾಹ ಮುಕ್ತ ಜಿಲ್ಲೆಯನ್ನಾಗಿಸಲು ಪ್ರತಿಜ್ಞಾ ವಿಧಿ ಬೋಧಿಸಿದರು. ಜಿಲ್ಲಾ ಮಟ್ಟದ ಅಧಿಕಾರಿಗಳು, ಅಂಗನವಾಡಿ ಮತ್ತು ಆಶಾ ಕಾರ್ಯಕರ್ತರು ಹಾಗೂ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು. ಅದಲ್ಲದೇ ಚಾಮರಾಜನಗರ, ಹನೂರು, ಗುಂಡ್ಲುಪೇಟೆ, ಕೊಳ್ಳೇಗಾಲ ಹಾಗೂ ಯಳಂದೂರು ತಾಲೂಕು ಕೇಂದ್ರಗಳಲ್ಲೂ ಪ್ರತಿಜ್ಞಾವಿಧಿ ಸ್ವೀಕರಿಸಲಾಯಿತು. ಬಹುಮುಖ್ಯವಾಗಿ ಜಿಲ್ಲೆಯ 130 ಗ್ರಾಮ ಪಂಚಾಯಿತಿಗಳಲ್ಲಿ, ಸರ್ಕಾರಿ ಶಾಲಾ-ಕಾಲೇಜುಗಳಲ್ಲಿ ಹಾಗೂ ಸರ್ಕಾರಿ ಕಚೇರಿಗಳಲ್ಲಿ ಏಕಕಾಲಕ್ಕೆ ಪ್ರತಿಜ್ಞಾವಿಧಿಯನ್ನು ಸ್ವೀಕಾರ ಮಾಡುವ ಮೂಲಕ ಜಿಲ್ಲೆಯನ್ನು ಬಾಲ್ಯವಿವಾಹ ಮುಕ್ತಗೊಳಿಸಲು ಪ್ರತಿಯೊಬ್ಬರು ಬೆಂಬಲ ನೀಡಿದರು.

ಬಾಲ್ಯವಿವಾಹ ಮುಕ್ತಗೊಳಿಸಲು ಸಂಕಲ್ಪ ಮಾಡೋಣ:

ಜಿಲ್ಲೆಯ 130 ಗ್ರಾಮ ಪಂಚಾಯಿತಿಗಳನ್ನು ನ.14 ರವರೆಗೆ ಬಾಲ್ಯವಿವಾಹ ಮುಕ್ತ ಗ್ರಾಮ ಪಂಚಾಯಿತಿಗಳಾಗಿ ೋಷಣೆ ಮಾಡುವ ನಿಟ್ಟಿನಲ್ಲಿ ನಾವೆಲ್ಲರೂ ಸಂಕಲ್‌ಷಪ ಮಾಡಬೇಕಿದೆ ಎಂದು ಜಿಲ್ಲಾಧಿಕಾರಿ ಸಿ.ಟಿ.ಶಿಲ್ಪಾನಾಗ್ ಹೇಳಿದರು.

ನಗರದ ಜಿಲ್ಲಾಡಳಿತ ಭವನದ ಮುಂಭಾಗ ಮಕ್ಕಳ ರಕ್ಷಣಾ ನಿರ್ದೇಶನಾಲಯ, ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ, ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಪೊಲೀಸ್ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ರಕ್ಷಣಾ ಅಭಿವೃದ್ಧಿ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಹಾಗೂ ವಿವಿಧ ಇಲಾಖೆ ಸಹಯೋಗದಲ್ಲಿ ಬಾಲ್ಯವಿವಾಹ ಮುಕ್ತ ಚಾಮರಾಜನಗರ ಜಿಲ್ಲೆ ಅಭಿಯಾನದ ಅಂಗವಾಗಿ ಆಯೋಜಿಸಿದ್ದ ಪ್ರತಿಜ್ಞಾವಿಧಿ ಸ್ವೀಕಾರ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

ಜಿಲ್ಲೆ ಶೈಕ್ಷಣಿಕ ಮತ್ತು ಆರ್ಥಿಕವಾಗ ಅಲ್ಲದೇ ಸಾಮಾಜಿಕವಾಗಿಯೂ ಸಾಕಷ್ಟು ಹಿಂದುಳಿದಿದೆ. ಶಾಲೆಬಿಟ್ಟ ಹೆಣ್ಣು ಮಕ್ಕಳನ್ನು 18 ವರ್ಷ ತುಂಬುವ ಮುಂಚಿತವಾಗಿಯೇ ಮದುವೆ ಮಾಡುತ್ತಿದ್ದು, ಇದೊಂದು ಸಾಮಾಜಿಕ ಪಿಡುಗಾಗಿ ಪರಿಣಮಿಸಿದೆ. ಜಿಲ್ಲೆಯಲ್ಲಿ ಬಾಲ್ಯವಿವಾಹವನ್ನು ತಡೆಯಲು ಕಠಿಣ ಕ್ರಮಗಳನ್ನು ಜಗುರಿಸಬೇಕಿದೆ ಎಂದು ಹೇಳಿದರು.

ಜಿಲ್ಲೆಯನ್ನು ಬಾಲ್ಯ ವಿವಾಹ ಮುಕ್ತವಾಗಿಸಲು ನಿರಂತರವಾಗಿ ಕಾರ್ಯಕ್ರಮಗಳನ್ನು ಆಯೋಜನೆ ಮಾಡಿಕೊಂಡು ಬರಲಾಗುತ್ತಿದೆ. ನ.14 ರವರೆಗ ಜಿಲ್ಲೆಯ 130 ಗ್ರಾಮ ಪಂಚಾಯಿತಿಗಳನ್ನು ಬಾಲ್ಯ ವಿವಾಹ ಮುಕ್ತಗೊಳಿಸುವ ಉದ್ದೇಶದಿಂದ ಪ್ರತಿಯೊಂದು ಗ್ರಾ.ಪಂ ಗಳಲ್ಲಿ ಏಕಕಾಲದಲ್ಲಿ ಪ್ರತಿಜ್ಞಾವಿಧಿ ಸ್ವೀಕರಿಸಲಾಗುತ್ತಿದೆ. ಈ ನಿಟ್ಟಿನಲ್ಲಿ ಒಂದು ಬಾಲ್ಯವಿವಾಹವೂ ಕೂಡ ನಡೆಯದ ರೀತಿಯಲ್ಲಿ ನಾವೆಲ್ಲರೂ ಎಚ್ಚರಿಕೆ ವಹಿಸಬೇಕಿದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯಕಾರ್ಯನಿರ್ವಹಣಾಧಿಕಾರಿ ಮೋನಾರೋತ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಬಿ.ಟಿ.ಕವಿತಾ, ಅಪರ ಜಿಲ್ಲಾಧಿಕಾರಿ ಟಿ.ಜವರೇಗೌಡ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಎಚ್.ಆರ್.ಸುರೇಶ್, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಬಿ.ಮಂಜುಳಾ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶಕ ಎ.ರಮೇಶ್ ಹಾಗೂ ಇತರರು ಹಾಜರಿದ್ದರು.

ಜಿಲ್ಲೆಯಲ್ಲಿ ದಿಟ್ಟ ನಿರ್ಧಾರ:

ಬಾಲ್ಯವಿವಾಹ ಮುಕ್ತ ಚಾಮರಾಜನಗರ ಅಭಿಯಾನದ ಮೂಲಕ ಜಿಲ್ಲೆಯನ್ನು ಸಂಪೂರ್ಣ ಬಾಲ್ಯವಿವಾಹ ಮುಕ್ತವಾಗಿಸಲು ಜಿಲ್ಲಾಧಿಕಾರಿ ಶಿಲ್ಪಾನಾಗ್ ಅವರ ನೇತೃತ್ವದಲ್ಲಿ ದಿಟ್ಟ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ವೆಂಕಟೇಶ್ ಹೇಳಿದರು.

ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಹಲವಾರು ಯೋಜನೆಗಳನ್ನು ರೂಪಿಸಿದ್ದರು. ಒಂದಲ್ಲಾ ಒಂದು ವಿಧದಲ್ಲಿ ಮಕ್ಕಳ ಮೇಲೆ ಕಿರುಕುಳ ಮಾಡಲಾಗುತ್ತಿದೆ. ಬಾಲ್ಯವಿವಾಹ ನಿಷೇಧ ಮಾಡುವ ಸಂಬಂಧ ಕಠಿಣ ಕಾನೂನುಗಳನ್ನು ಜಾರಿಗೊಳಿಸಲಾಗಿದೆ. ಅದಾಗ್ಯೂ ಬಾಲ್ಯವಿವಾಹ, ಮಕ್ಕಳ ಮೇಲಿನ ಕಿರುಕುಳ, ಅಪ್ರಾಪ್ತ ಗರ್ಭಿಣಿ ಪ್ರಕರಣಗಳು ಬೆಳಕಿಗೆ ಬರುತ್ತಿದೆ. ಇದು ಸಂಪೂರ್ಣವಾಗಿ ನಿಲ್ಲಬೇಕಾದರೇ ನಿರ್ದಾಕ್ಷಿಣ್ಯವಾಗಿ ಕಾನೂನು ಜಾರಿಗೊಳಿಸಲು ಅಧಿಕಾರಿಗಳು ಬದ್ಧತೆಯಿಂದ ಕರ್ತವ್ಯ ನಿರ್ವಹಿಸಬೇಕಿದೆ ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net