ಜಿಲ್ಲೆಯಲ್ಲಿ 26,55,988 ಮತದಾರರು

2be55b5a-811f-4e7d-962b-6d443196242d
Published on

ಜಿಲ್ಲೆಯ ಅಂತಿಮ ಮತದಾರರ ಪಟ್ಟಿ ಶನಿವಾರ ಬಿಡುಗಡೆ ಮಾಡಿದ್ದು, 11 ವಿಧಾನಸಭಾ ಕ್ಷೇತ್ರಗಳಲ್ಲಿ 26,55,988 ಮತದಾರರು ಇದ್ದಾರೆ.


ಅಂತಿಮ ಮತದಾರರ ಪಟ್ಟಿ-2023ರ ಸಂಬಂಧ ಜಿಲ್ಲಾಧಿಕಾರಿ ಕೆ.ವಿ.ರಾಜೇಂದ್ರ ಅವರು ತಮ್ಮ ಕಚೇರಿಯಲ್ಲಿ ರಾಜಕೀಯ ಪಕ್ಷಗಳ ಮುಖಂಡರ ಸಭೆ ನಡೆಸಿದರು. ಜಿಲ್ಲೆಯ 11 ವಿಧಾನಸಭಾ ಕ್ಷೇತ್ರಗಳ ಅಂತಿಮ ಮತದಾರರ ಪಟ್ಟಿ ಪ್ರಕಟಿಸಲಾಗಿದ್ದು, ಅದರ ಒಂದು ಪ್ರತಿಯನ್ನು ನೋಂದಾಯಿತ ರಾಜಕೀಯ ಪಕ್ಷಗಳ ಮುಖಂಡರಿಗೆ ನೀಡಲಾಯಿತು.


ಚುನಾವಣೆ ಹಿನ್ನೆಲೆಯಲ್ಲಿ ಭಾರತ ಚುನಾವಣಾ ಆಯೋಗವು ಅಗತ್ಯ ಸೇವೆಗಳ ಇಲಾಖೆ ಎಂದು ಗುರುತಿಸಿದ್ದು, ಈ ಇಲಾಖೆಗಳ ಅಧಿಕಾರಿ ಹಾಗೂ ಸಿಬ್ಬಂದಿಗೆ ಅಂಚೆ ಪತ್ರದ ಮೂಲಕ ಮತದಾನ ಮಾಡಲು ಅವಕಾಶ ಕಲ್ಪಿಸಿದೆ. ಈ ಸಂಬಂಧ ರಾಜಕೀಯ ಪಕ್ಷದವರು ತಮ್ಮ ಪ್ರತಿನಿಧಿಯನ್ನು ನೇಮಿಸಬೇಕು ಎಂದು ತಿಳಿಸಿದರು.


ಅಗತ್ಯ ಸೇವೆಗಳ ಇಲಾಖೆಗಳಡಿ ಬರುವ ಗೈರು ಹಾಜರಿ ಮತದಾರರಿಗೆ ಪೋಸ್ಟಲ್ ವೋಟಿಂಗ್ ಸೆಂಟರ್ ಅನ್ನು ಜಿಲ್ಲೆಯಲ್ಲಿ ಮೇ 2ರಿಂದ 4ರವರೆಗೆ ಬೆಳಗ್ಗೆ 9ರಿಂದ ಸಂಜೆ 5ರವರೆಗೆ ತೆರೆಯಲಾಗುವುದು ಎಂದು ತಿಳಿಸಿದರು.


ಅಭ್ಯರ್ಥಿಯ ಪರವಾಗಿ ಅನಧಿಕೃತವಾಗಿ ಪ್ರಚಾರ ಮಾಡಿದರೆ ಕಾನೂನು ರೀತಿ ಕ್ರಮ ಕೈಗೊಳ್ಳಲಾಗುವುದು. ಅಭ್ಯರ್ಥಿಗಳಿಗೆ ರಕ್ಷಣೆ ಬೇಕಾದರೆ ಗಮನಕ್ಕೆ ತಂದರೆ ಪೊಲೀಸ್ ಇಲಾಖೆಯಿಂದ ರಕ್ಷಣೆ ನೀಡಲು ಕ್ರಮ ವಹಿಸಲಾಗುವುದು ಎಂದು ತಿಳಿಸಿದರು.
ಅಪರ ಜಿಲ್ಲಾಧಿಕಾರಿ ಕವಿತಾ ರಾಜರಾಮ್, ಚುನಾವಣಾ ತಹಸೀಲ್ದಾರ್ ರಾಮಪ್ರಸಾದ್ ಹಾಗೂ ರಾಜಕೀಯ ಪಕ್ಷದ ಮುಖಂಡರು ಪಾಲ್ಗೊಂಡಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net