ಜಿಲ್ಲೆಯಲ್ಲಿ 744 ಸಕ್ರಿಯ ಪ್ರಕರಣ

carona logo
Published on

ಹಾವೇರಿ: ಶ್ರೂಶುಷಕಿ, ಹೋಂಗಾರ್ಡ್, ಬಿಎಸ್​ಎನ್​ಎಲ್, ಕೆವಿಜಿ ಬ್ಯಾಂಕ್, ಶಿಕ್ಷಣ ಇಲಾಖೆ, ಪಶುವೈದ್ಯ ಇಲಾಖೆ, ಕೆಎಸ್​ಆರ್​ಟಿಸಿ ಉದ್ಯೋಗಿ ಸೇರಿ ಜಿಲ್ಲೆಯಲ್ಲಿ ಶುಕ್ರವಾರ 139 ಜನರಿಗೆ ಕರೊನಾ ದೃಢಪಟ್ಟಿದೆ. 25 ಜನರು ಗುಣವಾಗಿದ್ದಾರೆ. ಮೂವರು ಮೃತಪಟ್ಟಿದ್ದಾರೆ ಎಂದು ಜಿಲ್ಲಾಧಿಕಾರಿ ಸಂಜಯ ಶೆಟ್ಟೆಣ್ಣನವರ ತಿಳಿಸಿದ್ದಾರೆ.

ಜಿಲ್ಲೆಯಲ್ಲಿ ಈವರೆಗೆ 2,292 ಪಾಸಿಟಿವ್ ಪ್ರಕರಣಗಳು ದೃಢಪಟ್ಟಿವೆ. ಇಂದಿನವರೆಗೆ 1,499 ಜನರು ಸೋಂಕಿನಿಂದ ಗುಣವಾಗಿ ಬಿಡುಗಡೆ ಹೊಂದಿದ್ದಾರೆ. 49 ಜನರು ಮೃತಪಟ್ಟಿದ್ದಾರೆ. ಒಟ್ಟು 744 ಸಕ್ರಿಯ ಪ್ರಕರಣಗಳಿದ್ದು, ಅದರಲ್ಲಿ 352 ಸೋಂಕಿತರು ಹೋಂ ಐಸೋಲೇಷನ್​ನಲ್ಲಿ ಹಾಗೂ 392 ಸೋಂಕಿತರು ಕೋವಿಡ್ ಕೇರ್ ಆಸ್ಪತ್ರೆ, ಕೋವಿಡ್ ಕೇರ್ ಹೆಲ್ತ್ ಸೆಂಟರ್, ಕೋವಿಡ್ ಕೇರ್ ಸೆಂಟರ್​ಗಳಲ್ಲಿ ಚಿಕಿತ್ಸೆಗೆ ದಾಖಲಾಗಿದ್ದಾರೆ. ಶುಕ್ರವಾರ ಹಾವೇರಿ ತಾಲೂಕಿನಲ್ಲಿ 38, ರಾಣೆಬೆನ್ನೂರ ತಾಲೂಕಿನಲ್ಲಿ 34, ಶಿಗ್ಗಾಂವಿ ತಾಲೂಕಿನಲ್ಲಿ 29, ಹಿರೇಕೆರೂರ ತಾಲೂಕಿನಲ್ಲಿ 13, ಬ್ಯಾಡಗಿ ತಾಲೂಕಿನಲ್ಲಿ 12, ಸವಣೂರ ತಾಲೂಕಿನಲ್ಲಿ 7, ಹಾನಗಲ್ಲ ತಾಲೂಕಿನಲ್ಲಿ 6 ಜನ ಸೇರಿ ಒಟ್ಟು 139 ಜನರಿಗೆ ಸೋಂಕು ದೃಢಪಟ್ಟಿದೆ.

ಶಿಗ್ಗಾಂವಿ ತಾಲೂಕಿನ 15, ರಾಣೆಬೆನ್ನೂರ ಹಾಗೂ ಹಾವೇರಿ ತಾಲೂಕಿನ ತಲಾ 4, ಹಾನಗಲ್ಲ ಹಾಗೂ ಹಿರೇಕೆರೂರ ತಾಲೂಕಿನ ತಲಾ ಒಬ್ಬರು 25 ಜನ ಶುಕ್ರವಾರ ಬಿಡುಗಡೆಗೊಂಡಿದ್ದಾರೆ.

ಮೂವರ ಸಾವು: ಹಾವೇರಿ ತಾಲೂಕಿನ ದೇವಗಿರಿ ಗ್ರಾಮದ 50 ವರ್ಷದ ಪುರುಷ ತೀವ್ರ ಉಸಿರಾಟದ ತೊಂದರೆಯಿಂದ ಆ. 13ರಂದು ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದರು. ರ್ಯಾಪಿಡ್ ಆಂಟಿಜನ್ ಕಿಟ್ ಪರೀಕ್ಷೆಯಲ್ಲಿ ಪಾಸಿಟಿವ್ ದೃಢಪಟ್ಟಿದ್ದು, ಅಂದೇ ಮೃತಪಟ್ಟಿದ್ದಾರೆ. ರಾಣೆಬೆನ್ನೂರ ಸಿದ್ದೇಶ್ವರ ನಗರದ 70 ವರ್ಷದ ವೃದ್ಧ ತೀವ್ರ ಉಸಿರಾಟದ ತೊಂದರೆಯಿಂದ ಆ. 11ರಂದು ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದರು.ಆ. 13ರಂದು ಮೃತಪಟ್ಟಿದ್ದಾರೆ. ಶಿಗ್ಗಾಂವಿ ತಾಲೂಕಿನ ಬಂಕಾಪುರದ 60 ವರ್ಷದ ವೃದ್ಧ ತೀವ್ರ ಉಸಿರಾಟದ ತೊಂದರೆಯಿಂದ ಆ. 14ರಂದು ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದರು. ಈ ಸಂದರ್ಭದಲ್ಲಿ ರ್ಯಾಪಿಡ್ ಆಂಟಿಜನ್ ಕಿಟ್ ಪರೀಕ್ಷೆಯಲ್ಲಿ ಪಾಸಿಟಿವ್ ದೃಢಪಟ್ಟಿದ್ದು, ಅಂದೇ ಮೃತಪಟ್ಟಿದ್ದಾರೆ.

ಸಾರ್ವಜನಿಕ ಗಣೇಶ ಮೂರ್ತಿ, ಪಂಜಾ ಪ್ರತಿಷ್ಠಾಪನೆ ನಿಷೇಧ: ಹಾವೇರಿ: ಕರೊನಾ ಸೋಂಕಿನ ಹರಡುವಿಕೆ ತಡೆಗಟ್ಟುವ ಹಿನ್ನೆಲೆಯಲ್ಲಿ ಸಾರ್ವಜನಿಕರ ಹಿತದೃಷ್ಟಿಯಿಂದ ಸಾರ್ವಜನಿಕ ಸ್ಥಳಗಳಲ್ಲಿ ಗಣೇಶಮೂರ್ತಿ ಪ್ರತಿಷ್ಠಾಪನೆ ಹಾಗೂ ಮೊಹರಂ ಪಂಜಾಗಳನ್ನು ನಿಷೇಧಿಸಿ ಜಿಲ್ಲಾಧಿಕಾರಿ ಸಂಜಯ ಶೆಟ್ಟೆಣ್ಣವರ ಆದೇಶ ಹೊರಡಿಸಿದ್ದಾರೆ. ಇದಕ್ಕೆ ಅನುಮತಿ ನೀಡದಂತೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಮತ್ತು ಗ್ರಾಪಂ, ಹೆಸ್ಕಾಂ ಹಾಗೂ ಲೋಕೋಪಯೋಗಿ ಇಲಾಖೆ ಅಧಿಕಾರಿಗಳಿಗೆ ಸೂಚಿಸಿ ಆದೇಶಿಸಲಾಗಿದೆ. ಕಾನೂನು ಬಾಹಿರವಾಗಿ ಪಿಒಪಿ ಗಣಪತಿಗಳ ತಯಾರಕೆ ಹಾಗೂ ಮಾರಾಟಗಾರರ ಮೇಲೆ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಹಾಗೂ ಸ್ಥಳೀಯ ಸಂಸ್ಥೆಗಳು ನಿಯಮಾನುಸಾರ ಕಟ್ಟುನಿಟ್ಟಿನ ಕ್ರಮಕೈಗೊಳ್ಳಲು ಆದೇಶಿಸಲಾಗಿದೆ. ಜಿಲ್ಲೆಯಲ್ಲಿ ಗಣೇಶ ಮತ್ತು ಮೊಹರಂ ಹಬ್ಬದ ಸಂಬಂಧ ಯಾವುದೇ ಮೆರವಣಿಗೆ, ರ್ಯಾಲಿ, ಜಾಥಾ ಕಾರ್ಯಕ್ರಮಗಳಿಗೆ ಹಾಗೂ ಡಿಜೆ ಸೌಂಡ್ ಸಿಸ್ಟ್ಂ ಬಳಕೆಗೆ ಅನುಮತಿ ಇರುವುದಿಲ್ಲ. ಈ ಆದೇಶಗಳನ್ನು ಉಲ್ಲಂಘಿಸುವವರ ವಿರುದ್ಧ ಭಾರತೀಯ ದಂಡ ಸಂಹಿತೆಯ ಕಲಂ ಹಾಗೂ ವಿಪತ್ತು ನಿರ್ವಹಣಾ ಕಾಯ್ದೆ ಪ್ರಕಾರ ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಸಿದ್ದಾರೆ.</

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net