ಬಳ್ಳಾರಿ : ನಗರದ ಜೋಳದರಾಶಿ ದೊಡ್ಡನಗೌಡ ರಂಗಮಂದಿರದಲ್ಲಿ ಕನ್ನಡ ಮತ್ತು ಸಂಸ್ಕ್ರತಿ ಇಲಾಖೆ ಪ್ರಾಯೋಜಕತ್ವದಲ್ಲಿ ಟಿ.ಎಚ್.ಎಂ. ಸಾಂಸ್ಕ್ರತಿಕ ಕಲಾ ಟ್ರಸ್ಟ್ ವತಿಯಿಂದ ಆ.11 (ಭಾನುವಾರ ) ರಂದು ಸಾಂಸ್ಕ್ರತಿಕ ಕಲರವ ಹಮ್ಮಿಕೊಳ್ಳಲಾಗಿದೆ ಎಂದು ಟ್ರಸ್ಟ್ ಅಧ್ಯಕ್ಷ ಟಿ.ಎಚ್.ಎಂ. ಬಸವರಾಜ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಎಸ್ಪಿ ಡಾ.ವಿ.ಜೆ. ಶೋಭಾರಾಣಿ, ಡಿಸಿ ಪ್ರಶಾಂತ ಕುಮಾರ ಮಿಶ್ರಾ, ಜಿಪಂ ಸಿಇಒ ರಾಹುಲ್ ಶರಣಪ್ಪ ಸಂಕನೂರು, ವಿಎಸ್‌ಕೆ ವಿವಿ ಕುಲಸಚಿವ ಎಸ್.ಎನ್. ರುದ್ರೇಶ್‌ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಕನ್ನಡ ಸಂಸ್ಕ್ರತಿ ಇಲಾಖೆಯ ಸಹಾಯಕ ನಿರ್ದೇಶಕ ಬಿ.ನಾಗರಾಜ, ಬಳ್ಳಾರಿ ಕಲ್ಚರಲ್ ಆಕ್ಟಿವಿಟೀಸ್ ಅಸೋಸಿಯೇಷನ್ ಅಧ್ಯಕ್ಷ ಶೀಲಾ ಬ್ರಹ್ಮಯ್ಯ, ಸಾಹಿತಿ ರಂಗ ನಿರ್ದೇಶಕ ಕೆ.ಜಗದೀಶ ಸೇರಿದಂತೆ ಇತರ ಮುಖ್ಯ ಗಣ್ಯರು ಉಪಸ್ಥಿತರಿಲಿದ್ದಾರೆ. ವಿವಿಧ ಸಾಂಸ್ಕ್ರತಿಕ ಕಾರ್ಯಕ್ರಮಗಳು ನಡೆಯಲಿವೆ ಎಂದು ತಿಳಿಸಿದ್ದಾರೆ.