

ಹಾಸನ: ಜಿಲ್ಲೆಯಲ್ಲಿ ಇತ್ತೀಚಿನ ದಿನಗಳಲ್ಲಿ ಡೆಂೆ ಪ್ರಕರಣಗಳು ಹೆಚ್ಚಾಗುತ್ತಿದ್ದು, ವೈದ್ಯರು ನಿರ್ಲಕ್ಷೃ ಮಾಡದೆ, ಮಕ್ಕಳು ಸೇರಿದಂತೆ ಪ್ರತಿಯೊಬ್ಬರನ್ನು ಪರೀಕ್ಷೆ ಮಾಡಿ ಅವರಿಗೆ ಸೂಕ್ತ ಚಿಕಿತ್ಸೆ ನೀಡಿ ರೋಗವನ್ನು ನಿಯಂತ್ರಣಕ್ಕೆ ತರಬೇಕು ಎಂದು ಸಂಸದ ಶ್ರೇಯಸ್ ಪಟೇಲ್ ವೈದ್ಯರಿಗೆ ಕಿವಿಮಾತು ಹೇಳಿದರು.
ಜಿಲ್ಲೆಯಲ್ಲಿ ಡೆಂೆ ಪ್ರಕರಣದಿಂದ ಮೂವರು ಮಕ್ಕಳು ಅಸುನೀಗಿದ ಹಿನ್ನೆಲೆಯಲ್ಲಿ ಸಂಸದರು ನಗರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿಯಲ್ಲಿ ಗುರುವಾರ ವೈದ್ಯರ ಜತೆ ಸಭೆ ನಡೆಸಿ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಪ್ರಕರಣಗಳು ಮತ್ತು ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಮಾಹಿತಿ ಪಡೆದುಕೊಂಡರು.
ಕಳೆದ ಒಂದು ವಾರದಲ್ಲಿ ಡೆಂೆ ಮೂವರು ಮಕ್ಕಳು ಸಾವನ್ನಪ್ಪಿದ್ದಾರೆ. ಹೀಗಾಗಿ ವೈದ್ಯರು ಹೆಚ್ಚಿನ ನಿಗಾ ವಹಿಸಿ ಕೆಲಸ ಮಾಡಬೇಕು. ಡೆಂೆ ನಿಯಂತ್ರಣವಾಗುವವರೆಗೆ ಕೋವಿಡ್ ಸಂದರ್ಭದಲ್ಲಿ ಕೆಲಸ ಮಾಡಿದ ರೀತಿ ಜಿಲ್ಲೆಯಲ್ಲಿ ಈಗ ಮತ್ತೆ ಕೆಲಸ ಮಾಡಬೇಕು. ವೈದ್ಯರು ಗ್ರಾಮೀಣ, ತಾಲೂಕು ಮತ್ತು ಜಿಲ್ಲಾಮಟ್ಟದಲ್ಲಿ ನಿಗಾ ವಹಿಸಬೇಕು. ಅದರ ಜತೆಗೆ ಸಾರ್ವಜನಿಕರು ಕೂಡ ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.
ಡೆಂೆ ರೋಗದಿಂದ ಜಿಲ್ಲೆಯಲ್ಲಿ ಮೂವರು ಸಾವನ್ನಪ್ಪಿದ್ದು ಇನ್ನೂ ಕೆಲವು ಪ್ರಕರಣಗಳು ಆಡಿಟ್ ನಡೆಯುತ್ತಿದ್ದು, ವರದಿ ಬಂದ ನಂತರ ತಿಳಿಯಲಿದೆ. ಈಗಾಗಲೇ ಜಿಲ್ಲೆಯಲ್ಲಿ 213ಪ್ರಕರಣಗಳು ದಾಖಲಾಗಿದ್ದು, ಅವರೆಲ್ಲರಿಗೂ ಕೂಡ ಚಿಕಿತ್ಸೆ ನೀಡಲಾಗುತ್ತಿದೆ. ಮಕ್ಕಳಿಗೆ ಹೆಚ್ಚು ತೊಂದರೆ ಉಂಟಾಗುತ್ತಿದ್ದು ಯಾರೂ ಕೂಡ ನಿರ್ಲಕ್ಷ ವಹಿಸದೆ ಕೆಲಸ ನಿರ್ವಹಿಸಬೇಕು ಎಂದು ಸೂಚನೆ ನೀಡಿದರು.
ಡೆಂೆ ಪ್ರಕರಣಗಳು ಎಲ್ಲಿ ಹೆಚ್ಚು ಕಂಡು ಬಂದಿದೆ ಅಲ್ಲಿ ನಗರಸಭೆ, ಸ್ಥಳೀಯ ಸಂಸ್ಥೆಗಳು,ಆರೋಗ್ಯ ಇಲಾಖೆಯ ಸಹಯೋಗದಲ್ಲಿ ರೋಗವನ್ನು ನಿಯಂತ್ರಣಕ್ಕೆ ತರುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಿ. ಅಲ್ಲದೆ ಆಸ್ಪತ್ರೆಯಲ್ಲಿಯೂ ಡೆಂೆ ರೋಗಕ್ಕೆ ಸಂಬಂಧಿಸಿದಂತೆ ಹಾಸಿಗೆಗಳನ್ನು ಸಿದ್ಧಪಡಿಸಿಕೊಳ್ಳುವುದು, ತಜ್ಞ ವೈದ್ಯರು ಪ್ರತಿನಿತ್ಯ ಆಸ್ಪತ್ರೆಯಲ್ಲಿ ಇರಬೇಕು. ರೋಗಿಗಳ ಪರೀಕ್ಷೆ ನಡೆಸಿ ಅವರಿಗೆ ಸೂಕ್ತ ಚಿಕಿತ್ಸೆ ನೀಡಬೇಕು. ಒಂದು ವೇಳೆ ಹೆಚ್ಚಿನ ಚಿಕಿತ್ಸೆ ಅವಶ್ಯಕತೆ ಇದ್ದಲ್ಲಿ ಅವರನ್ನು ಜಿಲ್ಲಾಸ್ಪತ್ರೆಗೆ ಶಿಫಾರಸ್ಸು ಮಾಡಬೇಕು ಎಂದು ಹೇಳಿದರು.
ಶೀಘ್ರದಲ್ಲಿ ಜಿಲ್ಲೆಯ ಎಲ್ಲಾ ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಸ್ವಚ್ಛತೆಗೆ ಆದ್ಯತೆ ನೀಡುವುದರ ಜತೆಗೆ ಜನರನ್ನು ಜಾಗೃತಗೊಳಿಸುವ ನಿಟ್ಟಿನಲ್ಲಿ ಅವರಿಗೆ ಸೂಚನೆ ನೀಡಲಾಗುವುದು. ಆಶಾ ಕಾರ್ಯಕರ್ತೆಯರು ಜಾಗೃತಿ ಹೆಸರಿನಲ್ಲಿ ಫೋಟೋ ಮತ್ತು ಡಾಕ್ಯುಮೆಂಟರಿಗೋಸ್ಕರ ಕೆಲಸ ಮಾಡದೆ ಹಳ್ಳಿ ಹಳ್ಳಿಗಳಲ್ಲಿ ಮನೆ ಮನೆಗೆ ತೆರಳಿ ಲಾರ್ವಾ ಪತ್ತೆ ಮತ್ತು ಸಮೀಕ್ಷೆ ನಡೆಸುವ ಕೆಲಸವನ್ನು ಮಾಡಬೇಕು ಎಂದು ಹೇಳಿದರು.
ಈ ಸಂದರ್ಭದಲ್ಲಿ ಡಿ.ಎಚ್.ಒ. ಡಾ.ಶಿವಸ್ವಾಮಿ, ಹಿಮ್ಸ್ ನ ನಿರ್ದೇಶಕ ಡಾ.ಸಂತೋಷ್, ಹಿಮ್ಸ್ ಆಸ್ಪತ್ರೆಯ ಜಿಲ್ಲಾ ಶಸ್ತ್ರಚಿಕಿತ್ಸಕ ಡಾ. ಲೋಕೇಶ್ ಸೇರಿದಂತೆ ತಾಲೂಕು ಟಿಎಚ್‌ಒಗಳು, ವೈದ್ಯರು ಹಾಜರಿದ್ದರು.
33 ಮಕ್ಕಳು ಚಿಕಿತ್ಸೆಗಾಗಿ ದಾಖಲು
ಇತ್ತೀಚಿನ ದಿನಗಳಲ್ಲಿ 18 ವರ್ಷ ಒಳಪಟ್ಟ ಮಕ್ಕಳಲ್ಲಿ ಡೆಂೆ ರೋಗ ಹೆಚ್ಚಾಗಿ ಕಾಣಿಸುತ್ತಿದ್ದು ಈಗಾಗಲೇ ಜಿಲ್ಲೆಯಲ್ಲಿ 33 ಮಕ್ಕಳು ಚಿಕಿತ್ಸೆಗಾಗಿ ದಾಖಲಾಗಿದ್ದಾರೆ. ಅವರಲ್ಲಿ ಎಂಟು ಮಕ್ಕಳು ತೀವ್ರ ನಿಘ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಶಾಲಾ-ಕಾಲೇಜು ಹಂತದಲ್ಲಿ ಜ್ವರದಿಂದ ಬಳಲುತ್ತಿರುವ ಮಕ್ಕಳನ್ನು ತಕ್ಷಣವೇ ಪರೀಕ್ಷೆ ನಡೆಸಿ ಅವರಿಗೆ ಸೂಕ್ತ ಚಿಕಿತ್ಸೆಯನ್ನು ನೀಡಬೇಕು. ಸಾರ್ವಜನಿಕರು ಜ್ವರ ಬಂದ ನಂತರ ಮೆಡಿಕಲ್‌ನಲ್ಲಿ ಮಾತ್ರೆ ತೆಗೆದುಕೊಳ್ಳದೆ ತಜ್ಞ ವೈದ್ಯರನ್ನು ಭೇಟಿ ಮಾಡಿ ಪರೀಕ್ಷೆ ಮಾಡಿಸಿಕೊಳ್ಳಿ ಎಂದು ಡಿಎಚ್‌ಒ ಡಾ.ಶಿವಸ್ವಾಮಿ ತಿಳಿಸಿದರು.
ಸಭೆಗೆ ಬಾರದ ಅಧಿಕಾರಿಗಳಿಗೆ ನೋಟಿಸ್
ಸಂಸದ ಶ್ರೇಯಸ್ ಪಟೇಲ್ ಅವರು ಆರೋಗ್ಯ ಇಲಾಖೆಯ ಅಧಿಕಾರಿಗಳು ಮತ್ತು ವೈದ್ಯರೊಂದಿಗೆ ಸಂಸದರಾದ ಮೇಲೆ ನಡೆದ ಮೊದಲ ಸಭೆ ಇದಾಗಿತ್ತು. ಈ ಸಭೆಗೆ ಕೆಲವು ವೈದ್ಯಾಧಿಕಾರಿಗಳು ಗೈರಾಗಿದ್ದರು. ಅವರ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ ಸಂಸದರು, ‘ಯಾರು ಇಂದಿನ ಸಭೆಗೆ ಬಂದಿಲ್ಲ ಅವರಿಗೆ ನೋಟಿಸ್ ನೀಡಿ ಮತ್ತು ಸರಿಯಾಗಿ ಕರ್ತವ್ಯ ನಿರ್ವಹಿಸದೆ ಇರುವವರು ವಿರುದ್ಧ ಸೂಕ್ತ ಕ್ರಮ ತೆಗೆದುಕೊಳ್ಳಿ,’ ಎಂದು ಡಿಎಚ್‌ಒಗೆ ಸಂಸದರು ತಾಕಿತ್ತು ಮಾಡಿದರು.
ಮಾಹಿತಿ ನೀಡಲು ತಡವರಿಸಿದ ಅಧಿಕಾರಿಗಳು
ಡೆಂೆ ರೋಗದ ಪ್ರಕರಣಗಳ ದಾಖಲಾತಿ ಮತ್ತು ಇನ್ನಿತರೆ ವಿವರಗಳನ್ನು ನೀಡುವಲ್ಲಿ ಆರೋಗ್ಯ ಇಲಾಖೆ ಅಧಿಕಾರಿಗಳು ತಡವರಿಸಿದರು. ಜತೆಗೆ ಆರೋಗ್ಯ ಮತ್ತು ಕುಟುಂಬ ಇಲಾಖೆಯ ಡೆಂೆ ನಿಯಂತ್ರಣ ಅಧಿಕಾರಿ ನಾಗಪ್ಪ ಅವರಿಗೆ ಸಂಸದರು ಬಿಸಿ ಮುಟ್ಟಿಸಿದರು. ನೀವು ಈ ರೀತಿ ನಿಧಾನವಾಗಬಾರದು, ಚುರುಕಾಗಿ ಕೆಲಸ ಮಾಡಿ ಮತ್ತು ಮಾಹಿತಿಯನ್ನು ಸರಿಯಾಗಿ ನೀಡಬೇಕು ಇದರಿಂದ ತಪ್ಪು ಸಂದೇಶ ರವಾನೆ ಆಗಬಾರದು. ಎಷ್ಟು ಪ್ರಕರಣಗಳು ದಾಖಲಾಗಿವೆ, ಎಷ್ಟು ಜನ ಮೃತಪಟ್ಟಿದ್ದಾರೆ, ವರದಿ ಯಾವ ಕಾರಣಕ್ಕೆ ನಿಧಾನವಾಗುತ್ತಿದೆ ಎಂಬೆಲ್ಲಾ ಪ್ರಶ್ನೆಗಳಿಗೆ ಅವರು ತಬ್ಬಿಬ್ಬಾದರು.
ಹೊಂದಾಣಿಕೆ ಕೊರತೆ
ಡೆಂೆ ಪ್ರಕರಣಗಳ ದಾಖಲಾತಿಗೆ ಸಂಬಂಧಿಸಿದಂತೆ ಆಸ್ಪತ್ರೆಯ ವೈದ್ಯರು ನೀಡಿರುವ ವರದಿಯಲ್ಲಿ ಒಂದು ಲೆಕ್ಕ ಮತ್ತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿಗಳು ನೀಡಿರುವ ವರದಿಯಲ್ಲಿ ಮತ್ತೊಂದು ಲೆಕ್ಕ ಇರುವುದನ್ನು ಕಂಡು ಸಂಸದರು ಅಸಮಾಧಾನ ವ್ಯಕ್ತಪಡಿಸಿದರು. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮತ್ತು ಹಿಂಸೆ ಇವೆರಡೂ ಕೂಡ ಹೊಂದಾಣಿಕೆಯಿಂದ ಕೆಲಸ ಮಾಡಬೇಕು ಆದರೆ ಇಲ್ಲಿ ಹೊಂದಾಣಿಕೆ ಕೊರತೆ ಎದ್ದು ಕಾಣುತ್ತಿದೆ. ಮುಂದಿನ ದಿನಗಳಲ್ಲಿ ಈ ರೀತಿ ಆಗದಂತೆ ನಿಗಾ ವಹಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.