ಜಿಲ್ಲೆಯಲ್ಲಿ ಪ್ರತ್ಯೇಕ ರಸ್ತೆ ಅಪಘಾತ ಇಬ್ಬರು ಸಾವು

ಜಿಲ್ಲೆಯಲ್ಲಿ ಪ್ರತ್ಯೇಕ ರಸ್ತೆ ಅಪಘಾತ ಇಬ್ಬರು ಸಾವು
Published on

ಹಾಸನ : ಅರಸೀಕೆರೆ ಹಾಗು ಹಾಸನ ತಾಲ್ಲೂಕಿನಲ್ಲಿ ಶುಕ್ರವಾರ ಸಂಭವಿಸಿದ ಪ್ರತ್ಯೇಕ ರಸ್ತೆ ಅಪಘಾತದಲ್ಲಿ ಇಬ್ಬರು ಮೃತಪಟ್ಟು ಮತ್ತಿಬ್ಬರು ಗಾಯಗೊಂಡಿರುವ ಘಟನೆ ನಡೆದಿದೆ.
ಅರಸೀಕೆರೆ ತಾಲೂಕಿನ ಹೊನ್ನೇನಹಳ್ಳಿ ಗೇಟ್ ಸಮೀಪ ಕಾರು ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರ ಮೃತಪಟ್ಟಿದ್ದು ಇಬ್ಬರು ಗಾಯಗೊಂಡಿದ್ದಾರೆ. ಕರಿಮಾರನಹಳ್ಳಿ ಗ್ರಾಮದ ರಮೇಶ (55) ಮೃತರು. ಪತ್ನಿ ಹೇಮಲತಾ ಹಾಗು ಪುತ್ರ ದುವಿತ್‌ನನ್ನು ಬೈಕ್‌ನಲ್ಲಿ ಕೂರಿಸಿಕೊಂಡು ತೆರಳುತ್ತಿದ್ದಾಗ ಎದುರುಗಡೆಯಿಂದ ಬಂದ ಕಾರು ಡಿಕ್ಕಿಯಾಗಿದೆ. ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ರಮೇಶ ಅವರಿಗೆ ಹಾಸನದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ ಬೆಂಗಳೂರಿನ ಆಸ್ಪತ್ರೆಗೆ ಕರೆದೊಯ್ಯುತ್ತಿದ್ದಾಗ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ. ಗಾಯಾಳುಗಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಗಂಡಸಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮತ್ತೊಂದು ಪ್ರಕರಣದಲ್ಲಿ ಕಾರು ಮತ್ತು ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟಿರುವ ಘಟನೆ ಹಾಸನ ತಾಲೂಕಿನ ಬೋಗಾರನಹಳ್ಳಿ ಸಮೀಪ ನಡೆದಿದೆ. ತಾಲ್ಲೂಕಿನ ದೊಡ್ಡ ಆಲದಹಳಳಿ ಗ್ರಾಮದ ಚಂದು (22) ಮೃತ ಯುವಕ. ಪುರದಮ್ಮ ದೇವಸ್ಥಾನದಲ್ಲಿ ಊಟ ಮುಗಿಸಿಕೊಂಡು ವಾಪಾಸ್ ಬರುತ್ತಿದ್ದಾಗ ಎದುರುಗಡೆಯಿಂದ ಬಂದ ಕಾರು ಡಿಕ್ಕಿಯಾಗಿದೆ. ತಲೆ ಹಾಗು ಮೈಕೈಗೆ ಬಲವಾದ ಏಟು ಬಿದ್ದಿದ್ದರಿಂದ ಆಸ್ಪತ್ರೆಗೆ ಕರೆತರುತ್ತಿದ್ದಾಗ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ. ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net