ಜಿಲ್ಲೆಯಲ್ಲಿ ಮತ್ತೆ ನಾಲ್ಕು ಪಾಸಿಟಿವ್

16-gdg-5
Published on

ಗದಗ : ಜಿಲ್ಲೆಯಲ್ಲಿ ಕರೊನಾ ಮಹಾಮಾರಿ ಆರ್ಭಟ ಮತ್ತೆ ಮುಂದುವರಿದಿದ್ದು, ಮಂಗಳವಾರ ನಾಲ್ಕು ಪಾಸಿಟಿವ್ ಕೇಸ್ ಪತ್ತೆಯಾಗಿವೆ.

ಕಳೆದ ವಾರ ಮಹಾರಾಷ್ಟ್ರದಿಂದ ಬಂದು ಕ್ವಾರಂಟೈನ್​ನಲ್ಲಿದ್ದ 26 ವರ್ಷದ ಮಹಿಳೆ, 11 ವರ್ಷದ ಬಾಲಕಿ, 3 ವರ್ಷದ ಬಾಲಕ ಹಾಗೂ ಅನಾರೋಗ್ಯದಿಂದ ಬಳಲುತ್ತಿದ್ದ ಕೋಟುಮಚಗಿ ಗ್ರಾಮದ 58 ವರ್ಷದ ಪುರುಷನಿಗೆ ಸೋಂಕು ತಗುಲಿದೆ.

ಕೋಟುಮಚಗಿ ಗ್ರಾಮದ 58 ವರ್ಷದ ವ್ಯಕ್ತಿಗೆ ಸೋಂಕು ಸೋಂಕು ಹೇಗೆ ತಗುಲಿತು ಎಂಬುದನ್ನು ಪತ್ತೆ ಹಚ್ಚುವ ಕಾರ್ಯ ಮುಂದುವರಿದಿದೆ. ಅವರೊಂದಿಗೆ ಪ್ರಥಮ ಹಾಗೂ ದ್ವಿತೀಯ ಸಂರ್ಪಕದಲ್ಲಿದ್ದವರ ಪತ್ತೆ ಕಾರ್ಯ ಮುಂದುವರಿದಿದೆ. ಆರೋಗ್ಯ ಮತ್ತು ಆಶಾ ಕಾರ್ಯಕರ್ತೆಯರು ಗ್ರಾಮದ ಮನೆಮನೆಗೆ ತೆರಳಿ ಸರ್ವೆ ಕಾರ್ಯ ಆರಂಭಿಸಿದ್ದಾರೆ.

ಕೋಟುಮಚಗಿ ಗ್ರಾಮವನ್ನು ಕಂಟೇನ್ಮೆಂಟ್ ಪ್ರದೇಶ ಎಂದು ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಘೊಷಣೆ ಮಾಡಿದ್ದಾರೆ. ಗ್ರಾಮದಲ್ಲಿ ಪೊಲೀಸರು ಭದ್ರತಾ ಕಾರ್ಯ ಆರಂಭಿಸಿದ್ದಾರೆ.

15 ವರದಿ ಬರಬೇಕಿದೆ : ಗದಗ: ಜಿಲ್ಲೆಯ ಕೋವಿಡ್-19 ಸೋಂಕು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಮಂಗಳವಾರ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಅಂಕಿ ಅಂಶಗಳನ್ನು ಬಿಡುಗಡೆ ಮಾಡಿದ್ದಾರೆ. ಇದುವರೆಗೆ ಜಿಲ್ಲೆಯಲ್ಲಿ 7154 ಜನರು ನಿಗಾಕ್ಕೆ ಒಳಗಾಗಿದ್ದು, 23 ಜನರನ್ನು ಆಸ್ಪತ್ರೆಯಲ್ಲಿ ಪ್ರತ್ಯೇಕವಾಗಿ ನಿಗಾದಲ್ಲಿ ಇರಿಸಲಾಗಿದೆ. 7673 ಜನರ ಗಂಟಲ ದ್ರವದ ಮಾದರಿಯನ್ನು ಪರೀಕ್ಷೆಗಾಗಿ ಸಂಗ್ರಹಿಸಲಾಗಿದೆ.

7605 ಮಾದರಿಗಳು ನೆಗೆಟಿವ್ ಬಂದಿದ್ದು, 15 ಸ್ಯಾಂಪಲ್​ಗಳ ವೈದ್ಯಕೀಯ ವರದಿ ಬರಬೇಕಿದೆ. ಜಿಲ್ಲೆಯಲ್ಲಿ ಒಟ್ಟು 53 ಕರೊನಾ ಪಾಸಿಟಿವ್ ಕೇಸ್​ಗಳ ಪೈಕಿ ಇಬ್ಬರು ಮೃತಪಟ್ಟಿದ್ದಾರೆ. 41 ಜನರು ಗುಣವಾಗಿದ್ದಾರೆ. 10 ಸಕ್ರಿಯ ಪ್ರಕರಣಗಳಿದ್ದು, ಸೋಂಕಿತರು ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ತಿಳಿಸಿದ್ದಾರೆ.

ಗುಣವಾದ ಇಬ್ಬರ ಬಿಡುಗಡೆ

ಕೋವಿಡ್ 19 ಸೋಂಕಿನಿಂದ ಗುಣವಾಗಿರುವ ಇಬ್ಬರು ಮಂಗಳವಾರ ಜಿಲ್ಲಾಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. 59 ವರ್ಷದ ಪುರುಷ ಹಾಗೂ 49 ವರ್ಷದ ಮಹಿಳೆ ಮಹಾರಾಷ್ಟ್ರದಿಂದ ಜೂ. 6ರಂದು ಆಗಮಿಸಿದ್ದರು. ಅದೇ ದಿನ ಇಬ್ಬರನ್ನೂ ಜಿಮ್್ಸ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಚಿಕಿತ್ಸೆಯ ನಂತರ ಜೂ. 15ರಂದು ಇಬ್ಬರ ಗಂಟಲ ದ್ರವದ ಮಾದರಿ ಪರೀಕ್ಷೆ ನಡೆಸಲಾಗಿದ್ದು ವರದಿ ನೆಗೆಟಿವ್ ಬಂದಿದೆ. ಹೀಗಾಗಿ ಅವರನ್ನು ಮಂಗಳವಾರ ಜಿಲ್ಲಾಸ್ಪತ್ರೆಯಿಂದ ಬಿಡುಗಡೆ ಮಾಡುತ್ತಿದ್ದೇವೆ. ಮುಂದಿನ 14 ದಿನಗಳ ಕಾಲ ಬಿಡುಗಡೆಗೊಂಡ ವ್ಯಕ್ತಿಗಳನ್ನು ಹೋಂ ಕ್ವಾರಂಟೈನ್​ನಲ್ಲಿ ಇರಿಸಲಾಗುವುದು ಎಂದು ಜಿಮ್್ಸ ನಿರ್ದೇಶಕ ಡಾ. ಪಿ.ಎಸ್.ಭೂಸರಡ್ಡಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net