

ಬೆಳಗಾವಿ: ನಗರವೂ ಸೇರಿದಂತೆ ಜಿಲ್ಲೆಯ ವಿವಿಧೆಡೆ ಮಂಗಳವಾರವೂ ಮಳೆ ಮುಂದುವರಿದಿದೆ. ಇದರಿಂದ ಜನಜೀವನ ಅಸ್ತವ್ಯಸ್ತವಾಗಿದೆ. ಬೆಳಗಾವಿ ನಗರ, ಖಾನಾಪುರ, ಕಿತ್ತೂರು, ಹುಕ್ಕೇರಿ, ಗೋಕಾಕ, ಸವದತ್ತಿ ಸೇರಿ ಬಹುತೇಕ ಕಡೆಗಳಲ್ಲಿ ನಿರಂತರ ಜಿಟಿಜಿಟಿ ಮಳೆಯಾಗುತ್ತಿದೆ.
ಖಾನಾಪುರ ಪಶ್ಚಿಮ ಘಟ್ಟದಲ್ಲಿ ಧಾರಾಕಾರವಾಗಿ ಸುರಿಯುತ್ತಿರುವ ಮಳೆಯಿಂದ ಹಿಡಕಲ್ ಡ್ಯಾಂ ಮತ್ತು ಮಲಪ್ರಭಾ ಜಲಾಶಯದ ಒಳಹರಿವಿನ ಪ್ರಮಾಣ ಏರಿಕೆಯಾಗಿದೆ. ಮಂಗಳವಾರ ಬೆಳಗ್ಗೆ ವೇಳೆಗೆ ಹಿಡಕಲ್ ಜಲಾಶಯಕ್ಕೆ 9,229 ಕ್ಯೂಸೆಕ್ ಹಾಗೂ ಮಲಪ್ರಭಾ ಜಲಾಶಯಕ್ಕೆ 2,111 ಕ್ಯೂಸೆಕ್ ಒಳಹರಿವು ದಾಖಲಾಗಿದೆ.