ಜಿಲ್ಲೆಯಲ್ಲಿ ಶಾಂತಿ-ಸುವ್ಯವಸ್ಥೆ ಕಾಪಾಡಿ

bkt-9-15
ಬಾಗಲಕೋಟೆ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಪಿ.ಸುನೀಲ್‌ಕುಮಾರ ಅಧ್ಯಕ್ಷತೆಯಲ್ಲಿ ಸಕ್ಕರೆ ಕಾರ್ಖಾನೆ ಮಾಲೀಕರು, ಪ್ರತಿನಿಽಗಳ ಸಭೆ ಜರುಗಿತು. ಎಸ್ಪಿ ಜಯಪ್ರಕಾಶ ಹಕ್ಕರಕಿ, ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ, ಉಪವಿಭಾಗಾಧಿಕಾರಿ ಸಿದ್ದು ಹುಲ್ಲೊಳ್ಳಿ, ಆಹಾರ ಇಲಾಖೆಯ ಜಂಟಿ ನಿರ್ದೇಶಕ ಚನಬಸಪ್ಪ ಕೊಡ್ಲಿ ಇದ್ದರು.
Published on

ಜಿಲ್ಲೆಯಲ್ಲಿ ಶಾಂತಿ-ಸುವ್ಯವಸ್ಥೆ ಕಾಪಾಡಿ
ಬಾಗಲಕೋಟೆ: ಜಿಲ್ಲೆಯ ವಿವಿಧ ಸಕ್ಕರೆ ಕಾರ್ಖಾನೆ ಮಾಲೀಕರು ಹಾಗೂ ರೈತರು ಶಾಂತಿ, ಸುವ್ಯವಸ್ಥೆಗೆ ದಕ್ಕೆ ಬರದಂತೆ ಪ್ರಸಕ್ತ ಹಂಗಾಮಿಗೆ ಕಬ್ಬಿನ ದರ ಘೋಷಣೆಯ ಸಮಸ್ಯೆಯನ್ನು ಶಾಂತರೀತಿಯಿಂದ ಬಗೆಹರಿಸಿಕೊಳ್ಳುವಂತೆ ಜಿಲ್ಲಾಧಿಕಾರಿ ಪಿ.ಸುನೀಲ್‌ಕುಮಾರ ತಿಳಿಸಿದರು.
ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಬುಧವಾರ ಸಕ್ಕರೆ ಕಾರ್ಖಾನೆ ಮಾಲೀಕರ ಜೊತೆ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ರೈತರು ಹಾಗೂ ಸಕ್ಕರೆ ಕಾರ್ಖಾನೆಯ ಮಾಲೀಕರು, ವ್ಯವಸ್ಥಾಪಕ ನಿರ್ದೇಶಕರುಗಳು ಕಾನೂನು ಸುವ್ಯವಸ್ಥೆಗೆ ಧಕ್ಕೆ, ಶಾಂತಿಗೆ ಭಂಗ, ಹಾನಿ, ಸಾರ್ವಜನಿಕರ ಆಸ್ತಿ, ಪಾಸ್ತಿಗೆ ಧಕ್ಕೆಯಾಗಬಾರದು ಎಂಬುವುದೇ ಜಿಲ್ಲಾಡಳಿತ ಆಶಯವಾಗಿದ್ದು, ಕಾರ್ಖಾನೆಯವರ ಕೋರಿಕೆಯಂತೆ ಕಾರ್ಖಾನೆಗಳಿಗೆ ಭದ್ರತೆ ನೀಡುವುದಾಗಿ ಭರವಸೆ ನೀಡಿದರು.
ಜಿಲ್ಲೆಯ ಕಬ್ಬು ಬೆಳೆಗಾರರು ಬೆಳೆದ ಕಬ್ಬಿನ ಕಟಾವು ಮತ್ತು ಸಾಗಾಣಿಕೆಯನ್ನು ಸುಗಮವಾಗಿಸುವ ದೃಷ್ಠಿಯಿಂದ ಆಯಾ ಕಾರ್ಖಾನೆಯ ವ್ಯಾಪ್ತಿಯಲ್ಲಿ ಬರುವ ಕಾರ್ಖಾನೆ ಮತ್ತು ರೈತರಿಗೆ ಸಂಬಂಧಪಟ್ಟ ದ್ವಿಪಕ್ಷೀಯ ಒಪ್ಪಂದವನ್ನು ಮಾಡಿಕೊಳ್ಳಬೇಕು. ಸಕ್ಕರೆ ಕಾರ್ಖಾನೆಗಳವರು ನೋಂದಾಯಿತ ಕಬ್ಬು ಬೆಳೆಯುವ ಕ್ಷೇತ್ರಕ್ಕೆ ಪ್ರತಿ ಕಬ್ಬು ಬೆಳೆಗಾರರ ಜೇಷ್ಠತೆಯ ಆಧಾರದ ಮೇಲೆ ಕಬ್ಬು ಕಟಾವು ಅವಧಿಯನ್ನು ನಿಗಧಿಪಡಿಸಿ, ಕಬ್ಬು ಕಟಾವಿನ ಆದ್ಯತಾ ಪಟ್ಟಿಯನ್ನು ಕಾರ್ಖಾನೆಯ ಸೂಚನಾ ಫಲಕಕ್ಕೆ ಪ್ರಕಟಿಸಬೇಕು. ಇದರಿಂದ ಕಬ್ಬು ಕಟಾವು ಮತ್ತು ಸಾಗಾಣಿಕೆ ಮಾಡಲು ಅನಾವಶ್ಯಕವಾಗಿ ಕಬ್ಬು ಬೆಳೆಗಾರರಿಗೆ ಆಗುವ ತೊಂದರೆಯನ್ನು ಹೋಗಲಾಡಿಸಲು ಅನುಕೂಲವಾಗುತ್ತದೆ ಎಂದರು.
ಕಬ್ಬಿನ ಬಿಲ್ಲನ್ನು ಪಾವತಿ ಮಾಡುವ ಸಂಬಂಧ ಕಬ್ಬು ಬೆಳೆಗಾರರಿಗೆ ನಿರ್ಧಿಷ್ಟವಾದ ಬ್ಯಾಂಕಿನಲ್ಲಿಯೇ ಖಾತೆಯನ್ನು ಹೊಂದಲು ಕಡ್ಡಾಯ ಅಥವಾ ಒತ್ತಾಯ ಮಾಡಲು ಕಾರ್ಖಾನೆಗಳಿಗೆ ಅವಕಾಶ ಇರುವುದಿಲ್ಲ. ಒಂದು ವೇಳೆ ರೈತರ ಹೆಸರಿನಲ್ಲಿ ಉಳಿತಾಯ ಖಾತೆಯನ್ನು ತೆರೆಯುವ ಪೂರ್ವದಲ್ಲಿ ಸಂಬಂಽಸಿದ ರೈತರಿಂದ ನಿರಾಕ್ಷೇಪಣಾ ಪತ್ರ ಪಡೆಯಬೇಕು. ಪ್ರತಿವರ್ಷ ಕಬ್ಬು ಕಟಾವು ಮತ್ತು ಸಾಗಾಣಿಕೆ ವೆಚ್ಚಗಳ ಸಂಬಂಧ ಮಾರ್ಗಸೂಚಿಗಳನ್ನು ನೀಡಲಾಗುತ್ತಿದ್ದು, ಪ್ರಸಕ್ತ ಹಂಗಾಮಿಗೆ ಹೊರಡಿಸಲಾಗುವ ಕಬ್ಬು ಕಟಾವು ಮತ್ತು ಸಾಗಾಣಿಕೆ ಅಂದಾಜು ವೆಚ್ಚಗಳ ವಿವರಗಳನ್ನು ಪರಿಗಣನೆಗೆ ತೆಗೆದುಕೊಂಡು ಕಬ್ಬು ಕಟಾವು ಮತ್ತು ಸಾಗಾಣಿಕೆ ವೆಚ್ಚವನ್ನು ಅನುಷ್ಠಾನಗೊಳಿಸಲು ಸೂಚಿಸಿದರು.

ಭದ್ರತೆ ಕಲ್ಪಿಸಲು ಕಾರ್ಖಾನೆ ಪ್ರತಿನಿಧಿಗಳು ಆಗ್ರಹ: ನವೆಂಬರ ೭ ರಂದು ಕಾರ್ಖಾನೆಗೆ ಕೆಲ ರೈತರ ಜೊತೆ ಬಂದ ಕಿಡಿಗೇಡಿಗಳು ಗಲಾಟೆ ಮಾಡಿ ಕಾರ್ಖಾನೆಗೆ ಹಾಗೂ ಆಡಳಿತ ಮಂಡಳಿ ಸಿಬ್ಬಂದಿಗಳಿಗೆ ಹಾನಿಯನ್ನುಂಟು ಮಾಡಿರುವ ಬಗ್ಗೆ ಕಾರ್ಖಾನೆ ಪ್ರತಿನಿಧಿಗಳು ಸಭೆಗೆ ತಿಳಿಸಿದರು. ಇದಕ್ಕೆ ಜಿಲ್ಲೆಯ ಎಲ್ಲಾ ಸಕ್ಕರೆ ಕಾರ್ಖಾನೆಯವರು ತಮಗೆ ಜೀವಕ್ಕೆ ಹಾನಿಯಾಗುವ ಸ್ಥಿತಿ ಬಂದಿದ್ದು, ತಮಗೆ ಭದ್ರತೆಯನ್ನು ನೀಡಲು ಜಿಲ್ಲಾಡಳಿತಕ್ಕೆ ಮನವಿ ಮಾಡಿಕೊಂಡರು.

ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ, ಉಪವಿಭಾಗಾಽಕಾರಿ ಸಿದ್ದು ಹುಲ್ಲೊಳ್ಳಿ, ಆಹಾರ ಇಲಾಖೆಯ ಜಂಟಿ ನಿರ್ದೇಶಕ ಚನಬಸಪ್ಪ ಕೊಡ್ಲಿ, ಜಿಲ್ಲಾ ಕೃಷಿ ಜಂಟಿ ನಿರ್ದೇಶಕಿ ಚೇತನಾ ಪಾಟೀಲ, ಆಹಾರ ಇಲಾಖೆಯ ಲೆಕ್ಕಾಧಿಕಾರಿ ಆರ್.ಎಸ್.ಚೌದರಿ ಸೇರಿದಂತೆ ಜಿಲ್ಲೆಯ ಎಲ್ಲ ಸಕ್ಕರೆ ಕಾರ್ಖಾನೆಗಳ ಮಾಲೀಕರು, ವ್ಯವಸ್ಥಾಪಕ ನಿರ್ದೇಶಕರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net