ಜಿಲ್ಲೆಯಲ್ಲೂ ಬಿಜೆಪಿ ಪರ-ವಿರೋಧದ ಧ್ವನಿ

B.Y.Vijayendra
Published on

ಚಾಮರಾಜನಗರ: ರಾಜ್ಯ ಬಿಜೆಪಿಯಲ್ಲಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಮತ್ತು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ನಡುವಿನ ತಿಕ್ಕಾಟ ನಡೆಯುತ್ತಿದ್ದರೆ ಜಿಲ್ಲಾ ಬಿಜೆಪಿಯಲ್ಲೂ ಪರ-ವಿರೋಧದ ಧ್ವನಿ ಎದ್ದಿದೆ.

ರಾಜ್ಯ ಬಿಜೆಪಿಯಲ್ಲಿ ಗುಂಪುಗಾರಿಕೆ, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮತ್ತು ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಿರುದ್ಧ ವಾಗ್ದಾಳಿ ಮಾಡುತ್ತಿರುವ ಬಸನಗೌಡ ಪಾಟೀಲ ಯತ್ನಾಳ್‌ಗೆ ವರಿಷ್ಠರು ಶೋಕಾಸ್ ನೋಟಿಸ್ ಕೊಟ್ಟ ಬೆಳವಣಿಗೆಯ ಬೆನ್ನಲ್ಲೇ, ವಿಜಯೇಂದ್ರ ಪರ ಜಿಲ್ಲಾ ಘಟಕಗಳ ಅಧ್ಯಕ್ಷರು ಸೋಮವಾರ ಸಭೆ ನಡೆಸಿದ್ದರು. ಯತ್ನಾಳ್ ವಿರುದ್ಧ ಕ್ರಮಕ್ಕೆ ಒತ್ತಾಯಿಸುವ ನಿರ್ಧಾರವನ್ನು ಕೈಗೊಂಡರು. ಜಿಲ್ಲೆಯ ಅಧ್ಯಕ್ಷ ಸಿ.ಎಸ್.ನಿರಂಜನ್‌ಕುಮಾರ್ ಸಹ ಯತ್ನಾಳ್ ನಡೆಯನ್ನು ಖಂಡಿಸಿ ಬಿ.ವೈ.ವಿಜಯೇಂದ್ರ ಪರ ನಿಂತಿದ್ದಾರೆ. ಇನ್ನು ಯತ್ನಾಳ್ ಪರವಾಗಿ ರೈತ ಮುಖಂಡ ಅಮ್ಮನಪುರ ಮಲ್ಲೇಶ್ ಬ್ಯಾಟಿಂಗ್ ಮಾಡುತ್ತಿದ್ದಾರೆ.

ಸಿ.ಎಸ್.ನಿರಂಜನ್‌ಕುಮಾರ್ ಅವರು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಮತ್ತು ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರಿಗೆ ಆಪ್ತರು. ಹಳೇ ಮೈಸೂರು ಭಾಗದಲ್ಲಿ ಬಿ.ಎಸ್.ಯಡಿಯೂರಪ್ಪ ಅವರಿಗೆ ದೊಡ್ಡ ಬೆಂಬಲಿಗರ ಪಡೆಯೇ ಇದೆ. ಜಿಲ್ಲೆಯಲ್ಲಿ ಯತ್ನಾಳ್ ಟೀಕೆಗಳನ್ನು ಒಪ್ಪುವ ಗುಂಪು ಇರುವುದನ್ನೂ ತಳ್ಳಿಹಾಕುವಂತಿಲ್ಲ.

ಯತ್ನಾಳ್‌ಗೆ ೇರಾವ್ ಹಾಕಿದ್ರು:

ಚಾಮರಾಜನಗರ ಜಿಲ್ಲೆಗೂ ಯತ್ನಾಳ್‌ಗೂ ಮರೆಯಲಾಗದ ಘಟನೆಯೊಂದು ಕೊಂಡಿಯಾಗಿದೆ. 2021ರಲ್ಲಿ ಜಿಲ್ಲಾ ಪ್ರವಾಸ ಕೈಗೊಂಡಿದ್ದ ಯತ್ನಾಳ್‌ಗೆ ವೀರಶೈವ ಸಮುದಾಯದ ಮುಖಂಡರು ಮತ್ತು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅಭಿಮಾನಿಗಳು ೇರಾವ್ ಹಾಕಿದ್ದರು. ನಗರದ ಹರಳಕೋಟೆ ಆಂಜನೇಯ ಸ್ವಾಮಿ ದೇವಾಲಯದ ಸಮೀಪ ಯತ್ನಾಳ್‌ಗೆ ೇರಾವ್ ಹಾಕಿದ್ದ ಪ್ರತಿಭಟನಾಕಾರರು ೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದರು. ಅಂದಿನ ಸಿಎಂ ಬಿ.ಎಸ್.ಯಡಿಯೂರಪ್ಪ ವಿರುದ್ಧ ಯಾವುದೇ ಹೇಳಿಕೆ ನೀಡಬಾರದು, ಸಮಾಜವನ್ನು ಒಡೆಯುವ ಕೆಲಸ ಮಾಡಬಾರದು ಎಂದು ಒತ್ತಾಯಿಸಿದ್ದರು. ಸ್ಥಳದಲ್ಲಿದ್ದ ಪೊಲೀಸರು ಪ್ರತಿಭಟನಾಕಾರರನ್ನು ಚದುರಿಸಿ ಯತ್ನಾಳ್‌ಗೆ ಭದ್ರತೆ ನೀಡಿ ಕಳುಹಿಸಿಕೊಟ್ಟಿದ್ದರು.

ಮಹಾಸಭಾದಿಂದ ಖಂಡನೆ ವಿಶ್ವಗುರು ಬಸವಣ್ಣನವರ ಕುರಿತು ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂದು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಜಿಲ್ಲಾ ಘಟಕ ಖಂಡಿಸಿದೆ. ಈ ಕುರಿತು ಜಿಲ್ಲಾಧ್ಯಕ್ಷ ಮೂಡ್ಲುಪುರ ನಂದೀಶ್ ‘ವಿಜಯವಾಣಿ’ಯೊಂದಿಗೆ ಮಾತನಾಡಿ, ವೈಯಕ್ತಿಕ ರಾಗ, ದ್ವೇಷಗಳಿದ್ದರೆ ಪಕ್ಷದೊಳಗೆ ಸರಿಪಡಿಸಿಕೊಳ್ಳಬೇಕು. ಪಕ್ಷದ ವರಿಷ್ಠರು ಇದರ ಕುರಿತು ಸೂಕ್ತ ಕ್ರಮ ಕೈಗೊಳ್ಳಬೇಕು. ಆದರೆ, ಇವರ ರಾಜಕೀಯಕ್ಕೆ ಸಾಂಸ್ಕೃತಿಕ ನಾಯಕ ಬಸವಣ್ಣನವರನ್ನು ಎಳೆದು ತಂದು ಅವಮಾನ ಮಾಡುವ ಯತ್ನಾಳ್‌ಗೆ ಧಿಕ್ಕಾರ ಎಂದಿದ್ದಾರೆ. ಯತ್ನಾಳ್ ತನ್ನ ನಡವಳಿಕೆಯನ್ನು ಇದೇ ರೀತಿ ಮುಂದುವರಿಸಿದರೆ, ಈ ಹಿಂದೆ ಯತ್ನಾಳ್ ಜಿಲ್ಲೆಗೆ ಬಂದಿದ್ದಾಗ ಪ್ರತಿಭಟನೆ ನಡೆಸಿದ್ದೆವು. ಮತ್ತೆ ನಾವು ಜಿಲ್ಲೆಯಲ್ಲಿ ಯತ್ನಾಳ್ ವಿರುದ್ಧ ಹೋರಾಟ ಮಾಡಬೇಕಾಗುತ್ತದೆ. ಬಸವಣ್ಣನ ಬಗ್ಗೆ ಹೇಳಿಕೆ ನೀಡಿರುವುದು ಮಹಾನ್ ತಪ್ಪು. ಇದಕ್ಕೆ ಕ್ಷಮೆಯಾಚಿಸಬೇಕು. ಇಲ್ಲದಿದ್ದರೆ ಹೋರಾಟ ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ.

ಯತ್ನಾಳ್ ನಡೆ ಇಡೀ ರಾಜ್ಯದಲ್ಲಿ ಗೊಂದಲ ಸೃಷ್ಟಿ ಮಾಡುತ್ತಿದೆ. ರಾಷ್ಟ್ರೀಯ ನಾಯಕರೆಲ್ಲರೂ ಸೇರಿ ಬಿ.ವೈ.ವಿಜಯೇಂದ್ರ ಅವರನ್ನು ಅಧ್ಯಕ್ಷರನ್ನಾಗಿ ಮಾಡಿದ್ದಾರೆ. ಇದಕ್ಕೆ ಬೆಲೆ ಕೊಡಬೇಕಾಗಿರುವುದು ಪ್ರತಿಯೊಬ್ಬರ ಕರ್ತವ್ಯ. ಯತ್ನಾಳ್ ಮಾಡುತ್ತಿರುವುದು ಸರಿಯಲ್ಲ ಎಂದು ಹಲವು ಸಲ ಹೇಳಿದ್ದೇವೆ. ಮಂಗಳವಾರ ಪಕ್ಷದ ವರಿಷ್ಠರು ಬಂದಿದ್ದರು. ಅವರ ಮುಂದೆಯೂ ಇದನ್ನು ಪ್ರಸ್ತಾಪ ಮಾಡಿದ್ದೇವೆ. ಮುಂದಿನ ದಿನಗಳಲ್ಲಿ ಯತ್ನಾಳ್ ಹೊಂದಾಣಿಕೆಯಿಂದ ಹೋಗುತ್ತಾರೆ ಎನ್ನುವ ನಿರೀಕ್ಷೆಯಲ್ಲಿದ್ದೇವೆ. ಸಿ.ಎಸ್.ನಿರಂಜನ್‌ಕುಮಾರ್, ಜಿಲ್ಲಾಧ್ಯಕ್ಷ, ಬಿಜೆಪಿ, ಚಾಮರಾಜನಗರ ಯತ್ನಾಳ್‌ಗೆ ಚಾಮರಾಜನಗರದಿಂದ ಬೀದರ್‌ವರೆಗೂ ಬೆಂಬಲವಿದೆ. ಬಿ.ಎಸ್.ಯಡಿಯೂರಪ್ಪ ಅವರಿಗೆ ಪಕ್ಷ ಸಾಕಷ್ಟು ಅವಕಾಶ ನೀಡಿದೆ. ಅಚಾನಕ್ ಆಗಿ ಬಿ.ವೈ.ವಿಜಯೇಂದ್ರ ಅಧ್ಯಕ್ಷರಾಗಿದ್ದಾರೆ. ಇವರು ಕಾಂಗ್ರೆಸ್ ವಿರುದ್ಧ ಹೋರಾಟ ರೂಪಿಸುವಲ್ಲಿ ವಿಲರಾಗಿದ್ದಾರೆ. ಹೈಕಮಾಂಡ್ ಕೂಡಲೇ ರಾಜ್ಯಾಧ್ಯಕ್ಷರ ಬದಲಾವಣೆ ಮಾಡಬೇಕೆಂಬ ಯತ್ನಾಳ್‌ಗೆ ನಮ್ಮ ಬೆಂಬಲವಿದೆ. ಜಿಲ್ಲಾಧ್ಯಕ್ಷ ನಿರಂಜನ್ ಕೂಡ ಕಾಂಗ್ರೆಸ್ ವಿರುದ್ಧ ಹೋರಾಟ ನಡೆಸುವಲ್ಲಿ ವಿಲರಾಗಿದ್ದಾರೆ. ದಾವಣೆಗೆರೆಯಲ್ಲಿ ಯತ್ನಾಳ್ ಮಾಡುವ ಸಮಾವೇಶಕ್ಕೆ ಜಿಲ್ಲೆಯಿಂದ ಸಾವಿರಾರು ಸಂಖ್ಯೆಯಲ್ಲಿ ಜನರು ಭಾಗವಹಿಸುತ್ತೇವೆ. ಅಮ್ಮನಪುರ ಮಲ್ಲೇಶ್, ಬಿಜೆಪಿ ರೈತ ಮುಖಂಡ, ಚಾಮರಾಜನಗರ

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net