ಜಿಲ್ಲೆಯಾದ್ಯಂತ ದತ್ತ ಭಕ್ತರಿಂದ ಮಾಲಾಧಾರಣೆ

6 ckm 2
ಚಿಕ್ಕಮಗಳೂರಿನ ಶ್ರೀಕಾಮಧೇನು ಗಣಪತಿ ದೇವಾಲಯದಲ್ಲಿ ದತ್ತಜಯಂತಿ ಅಂಗವಾಗಿ ಪಂಚಮಿ ದಿನದಂದು ಸಿ.ಟಿ.ರವಿ ಸೇರಿದಂತೆ ಹಿಂದುಪರ ಸಂಘಟನೆಗಳ ಮುಖಂಡರು ಹಾಗೂ ಕಾರ್ಯಕರ್ತರು ದತ್ತಮಾಲಾಧಾರಣೆ ಮಾಡಿದರು.
Published on

ಚಿಕ್ಕಮಗಳೂರು: ವಿಶ್ವಹಿಂದೂ ಪರಿಷತ್ ಹಾಗೂ ಭಜರಂಗದಳ ಆಯೋಜನೆ ಮಾಡಿರುವ ದತ್ತ ಜಯಂತಿ ಉತ್ಸವದ ಅಂಗವಾಗಿ ಪಂಚಮಿ ದಿನವಾದ ಶುಕ್ರವಾರ ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಸೇರಿದಂತೆ ಸಂಘ ಪರಿವಾರದ ಮುಖಂಡರು ನಗರದ ಶ್ರೀ ಕಾಮಧೇನು ಗಣಪತಿ ದೇವಾಲಯದಲ್ಲಿ ದತ್ತಮಾಲೆ ಧಾರಣೆ ಮಾಡಿದರು. ದತ್ತಮಾಲೆ ಧಾರಣೆ ಮೂಲಕ ದತ್ತಜಯಂತಿ ಉತ್ಸವಕ್ಕೆ ಅದ್ಧೂರಿ ಚಾಲನೆ ಸಿಕ್ಕಿದೆ.

ನಗರದ ಶ್ರೀ ಕಾಮಧೇನು ಗಣಪತಿ ದೇವಾಲಯದಲ್ಲಿ ಶುಕ್ರವಾರ ಬೆಳಗ್ಗೆ ಗಣಹೋಮ ಹಾಗೂ ವಿಶೇಷ ಪೂಜೆ ಸಲ್ಲಿಸಿದ ಬಳಿಕ ಸಿ.ಟಿ.ರವಿ, ವಿಶ್ವ ಹಿಂದೂ ಪರಿಷತ್ ಹಾಸನ ವಿಭಾಗದ ಸಹ ಕಾರ್ಯದರ್ಶಿ ರಘು ಸಕಲೇಶಪುರ, ವಿಭಾಗೀಯ ಸಹ ಕಾರ್ಯದರ್ಶಿ ಆರ್.ಡಿ.ಮಹೇಂದ್ರ, ಜಿಲ್ಲಾ ಉಪಾಧ್ಯP್ಷÀ ಯೋಗೀಶ್ ರಾಜ್ ಅರಸ್, ಕಾರ್ಯದರ್ಶಿ ರಂಗನಾಥ್, ಮುಖಂಡರಾದ ಅಮಿತ್‌ಗೌಡ, ಶ್ಯಾಮ್ ವಿ.ಗೌಡ, ಕೃಷ್ಣ ಹಾಗೂ ಕಾರ್ಯಕರ್ತರು ಮಾಲಾಧಾರಣೆ ಮಾಡಿದರು.

ಚಿಕ್ಕಮಗಳೂರು ಜಿಲ್ಲಾ ಕೇಂದ್ರ ಮಾತ್ರವಲ್ಲದೆ ಶೃಂಗೇರಿ, ಕೊಪ್ಪ ಸೇರಿದಂತೆ ಜಿಲ್ಲೆಯಾದ್ಯಂತ ದತ್ತ ಭಕ್ತರು ದತ್ತಮಾಲಾಧಾರಣೆ ಮಾಡಿದರು. ದತ್ತ ಜಯಂತಿಯ ಹಿನ್ನಲೆಯಲ್ಲಿ ಶುಕ್ರವಾರ ದತ್ತಮಾಲಾ ಧಾರಣೆ ಪ್ರಕ್ರಿಯೆ ಆರಂಭಗೊAಡಿದ್ದು, ಡಿ. ೧೨ರಂದು ಚಿಕ್ಕಮಗಳೂರಿನಲ್ಲಿ ಮಹಿಳೆಯರಿಂದ ಸಂಕೀರ್ತನಾ ಯಾತ್ರೆ ನಡೆಯಲಿದೆ. ಡಿ. ೧೩ರಂದು ಚಿಕ್ಕಮಗಳೂರು ನಗರದಲ್ಲಿ ಶೋಭಾಯಾತ್ರೆ, ಡಿ. ೧೪ರಂದು ರಾಜ್ಯದ ವಿವಿಧೆಡೆಯಿಂದ ದತ್ತಪೀಠಕ್ಕೆ ದತ್ತಭಕ್ತರು ಆಗಮಿಸಲಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net