ಜೀತ ಪದ್ಧತಿ ನಿರ್ಮೂಲನೆಗೆ ಎಲ್ಲರೂ ಸಹಕರಿಸಿ:ಜಿಲ್ಲಾ ನ್ಯಾಯಾಧೀಶ ಟಿ.ಎನ್ ಇನವಳ್ಳಿ ಕರೆ

ಜೀತ ಪದ್ಧತಿ ನಿರ್ಮೂಲನೆಗೆ ಎಲ್ಲರೂ ಸಹಕರಿಸಿ:ಜಿಲ್ಲಾ ನ್ಯಾಯಾಧೀಶ ಟಿ.ಎನ್ ಇನವಳ್ಳಿ ಕರೆ
Published on

ಹಾಸನ: ಜೀತ ಪದ್ಧತಿ ತಡೆಯಲು ಕಾರ್ಖಾನೆ, ತೋಟ, ಫಾರ್ಮ್, ಹೋಟೆಲ್‌ಗಳಲ್ಲಿ, 14 ವರ್ಷದೊಳಗಿನ ಮಕ್ಕಳನ್ನು ಕಾರ್ಮಿಕರಾಗಿ ಬಳಸುವುದನ್ನು ತಡೆಗಟ್ಟುವ ಮೂಲಕ ಜೀತ ಪದ್ಧತಿ ನಿರ್ಮೂಲನೆಗೆ ಎಲ್ಲರೂ ಸಹಕರಿಸಿ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಟಿ.ಎನ್ ಇನವಳ್ಳಿ ಸಾರ್ವಜನಿಕರಿಗೆ ಕರೆ ನೀಡಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಕಾನೂನುಗಳ ಸೇವೆಗಳ ಪ್ರಾಧಿಕಾರದ ವತಿಯಿಂದ ಹಿಮ್ಸ್ ಸಭಾಂಗಣದಲ್ಲಿ ಶುಕ್ರವಾರ ಏರ್ಪಡಿಸಲಾಗಿದ್ದ ಜೀತ ಪದ್ಧತಿಯ ನಿರ್ಮೂಲನಾ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಜೀತ ಪದ್ಧತಿ ಒಂದು ಸಾಮಾಜಿಕ ಪಿಡುಗು, ಇದನ್ನು ತಡೆಯಲು ಕಾನೂನಾತ್ಮವಾಗಿ ಮಾತ್ರವಲ್ಲದೆ ಸಾಮಾಜಿಕ ಬದ್ದತೆಯಿಂದ ಕೆಲಸ ಮಾಡಬೇಕು ಎಂದರು.
14 ವರ್ಷದ ಮಕ್ಕಳನ್ನು ಜೀತ ಪದ್ದತಿಯಲ್ಲಿ ಬಳಸದೆ ಅವರಿಗೆ ಶಿಕ್ಷಣ ನೀಡಿ ಉತ್ತಮ ಜೀವನ ರೂಪಿಸಿಕೊಳ್ಳಲು ಅವಕಾಶ ಕಲ್ಪಿಸಬೇಕು ಎಂದರಲ್ಲದೆ, ಪ್ರತಿಯೊಬ್ಬರು ಸಾರ್ವಜನಿಕವಾಗಿ ಜೀತ ಪದ್ದತಿ ನಿರ್ಮೂಲನೆಗೆ ಕೈ ಜೋಡಿಸಬೇಕು ಎಂದರು.
ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಬಿ.ಕೆ.ರವಿಕಾಂತ್ ಅವರು ಕಾರ್ಯಕ್ರಮದಲ್ಲಿ ಪ್ರತಿಜ್ಞಾ ವಿಧಿ ಬೋಧಿಸಿ ನಂತರ ಮಾತನಾಡಿ, ಜೀತ ಪದ್ದತಿ ಕಾರ್ಮಿಕ ಸ್ವಾತಂತ್ರದ ಹಕ್ಕು ಉಲ್ಲಂಘಿಸುವುದು 1876 ರಲ್ಲಿ ಜೀತ ಪದ್ದತಿಯನ್ನು ಕಾನೂನಿನಲ್ಲಿ ಆಚರಣೆ ಮಾಡುವುದಕ್ಕೆ ಸಂಪೂರ್ಣ ನಿಷೇಧವಿದೆ. ಇದರ ಬಗ್ಗೆ ಸಾರ್ವಜನಿಕರಿಗೆ ಹೆಚ್ಚಿನ ಅರಿವು ಮೂಡಿಸಬೇಕು ಎಂದರು.
ಸಕಲೇಶಪುರ, ಅರಸೀಕೆರೆಯಲ್ಲಿ ಮಾನವ ಹಕ್ಕು ಉಲ್ಲಂಘನೆ ಆಗುತ್ತಿರುವುದು ಮಾನವ ಕಳ್ಳ ಸಾಗಾಣಿಕೆ ಪ್ರಕರಣಗಳು ಅತಿ ಹೆಚ್ಚಾಗಿ ಪ್ರಕರಣ ದಾಖಲಾಗುತ್ತಿವೆ ಎಂದು ತಿಳಿಸಿದರು. ಮಾನವ ಕಳ್ಳ ಸಾಗಾಣಿಕೆ ಮೂಲಕ ಜೀತ ಪದ್ದತಿಯಲ್ಲಿ ತೊಡಗಿಸಿ ಬಲವಂತವಾಗಿ ಕೆಲಸ ಮಾಡಿಸುವುದು ಅವರ ಹಕ್ಕುಗಳನ್ನು ಉಲ್ಲಂಘನೆ ಮಾಡುವುದು ಕಾನೂನಿಗೆ ವಿರುದ್ದವಾದದ್ದು ಎಂದು ಹೇಳಿದರು.
ಶಿಕ್ಷಣದ ಕೊರತೆ, ಅಲೆಮಾರಿ ಜೀವನ, ವಲಸೆ ಹೋಗುವುದು, ಶಾಲೆಯಿಂದ ಹೊರಗೆ ಉಳಿಯುವುದು, ಅನಕ್ಷರತೆ, ಆರ್ಥಿಕ ದುರ್ಬಲತೆಯಿಂದ ಜೀವನ ನಡೆಸುತ್ತಾ ಇರುವವರು ಜೀತ ಪದ್ದತಿಗೆ ಹೆಚ್ಚಾಗಿ ಒಳಗಾಗುತ್ತಿದ್ದಾರೆ ಇದನ್ನು ತಡೆಯಬೇಕು ಎಂದು ಅವರು ಹೇಳಿದರು.
ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿ ಕೆ.ಟಿ ಶಾಂತಲಾ, ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಚಂದ್ರಶೇಖರ್, ಮತ್ತಿತರರು ಉಪಸ್ಥಿತರಿದ್ದರು ಹಾಜರಿದ್ದರು.

ಜಾಥಾಕ್ಕೆ ಚಾಲನೆ:
ಜೀತ ಪದ್ದತಿ ನಿರ್ಮೂಲನ ದಿನಾಚರಣೆ ಅಂಗವಾಗಿ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಡಿಸಿ ಸಿ.ಸತ್ಯಭಾಮಾ ಅವರು ಜಾಥಾ ಚಾಲನೆ ನೀಡಿದರು.ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಬಿ.ಕೆ.ರವಿಕಾಂತ್, ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಚಂದ್ರಶೇಖರ್ ಮತ್ತಿತರರು ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net