ಜೀವದಾನಕ್ಕೆ ಸರಿಸಮನಾದ ರಕ್ತದಾನ ಶ್ರೇಷ್ಠ

13-pnp 2
Published on

ಪಾಂಡವಪುರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಏಡ್ಸ್ ನಿಯಂತ್ರಣ ಮತ್ತು ಪ್ರತಿಬಂಧಕ ಘಟಕ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ತಾಲೂಕು ಆರೋಗ್ಯಾಕಾರಿಗಳ ಕಚೇರಿ ಸಹಯೋಗದಲ್ಲಿ ಸ್ವಯಂ ಪ್ರೇರಿತ ರಕ್ತದಾನಿಗಳ ದಿನಾಚರಣೆ ಪ್ರಯುಕ್ತ ಮಂಗಳವಾರ ರಕ್ತದಾನ ಶಿಬಿರ ನಡೆಯಿತು.


ಪಟ್ಟಣದ ಕನ್ನಡ ಸಾಹಿತ್ಯ ಭವನದಲ್ಲಿ ಆಯೋಜಿಸಲಾಗಿದ್ದ ರಕ್ತದಾನ ಶಿಬಿರದಲ್ಲಿ ವಿವಿಧ ಕಾಲೇಜುಗಳ ವಿದ್ಯಾರ್ಥಿನಿಯರು, ಅಂಗನವಾಡಿ, ಆಶಾ ಕಾರ್ಯಕರ್ತೆಯರು, ರಕ್ತದಾನಿಗಳು ರಕ್ತದಾನ ಮಾಡಿದರು. ಶಿಬಿರದಲ್ಲಿ 40 ಯೂನಿಟ್ ರಕ್ತ ಸಂಗ್ರಹವಾಯಿತು.


ಶಿಬಿರಕ್ಕೆ ಚಾಲನೆ ನೀಡಿದ ಅಪರ ಜಿಲ್ಲಾಕಾರಿ ಎಚ್.ಎಲ್.ನಾಗರಾಜು ಮಾತನಾಡಿ, ತುರ್ತು ಸಂದರ್ಭಗಳಲ್ಲಿ ವ್ಯಕ್ತಿಯ ಪ್ರಾಣ ಉಳಿಸಲು ರಕ್ತದ ಅವಶ್ಯಕತೆ ಇದೆ. ಹೀಗಾಗಿ ಪ್ರತಿಯೊಬ್ಬರು ರಕ್ತದಾನದ ಮೂಲಕ ಜೀವ ಉಳಿಸುವ ಕೆಲಸ ಮಾಡಬೇಕು. ಜಿಲ್ಲೆಯಲ್ಲಿ ರಕ್ತದ ಕೊರತೆ ತೀವ್ರವಾಗಿದ್ದು, ಮಿಮ್ಸ್ ಆಸ್ಪತ್ರೆಯಲ್ಲಿ ಪ್ರತಿ ತಿಂಗಳಿಗೆ 1500 ಜನರಿಗೆ ರಕ್ತದ ಅವಶ್ಯಕತೆ ಎದುರಾಗುತ್ತದೆ. ವಿವಿಧ ಮೂಲಗಳಿಂದ ಸಂಗ್ರವಾಗುವ ರಕ್ತ ಶೇ.56ರಷ್ಟು ಮಾತ್ರ ಇದೆ. ಇನ್ನೂ ಶೇ.44 ರಷ್ಟು ರಕ್ತದ ಕೊರತೆ ಇದೆ. ಜೀವದಾನಕ್ಕೆ ಸರಿಸಮಾನವಾದ ರಕ್ತದಾನ ಶ್ರೇಷ್ಠವಾದದು ಎಂದು ತಿಳಿಸಿದರು.


ಪಾಂಡವಪುರ ಉಪವಿಭಾಗೀಯ ಆಸ್ಪತ್ರೆಯನ್ನು ಮೇಲ್ದರ್ಜೆಗೇರಿಸಿ ಜಿಲ್ಲಾ ಮಟ್ಟದ ಸೌಲಭ್ಯ ನೀಡುವ ಪ್ರಯತ್ನ ನಡೆಯುತ್ತಿದೆ. ಇದರಿಂದ ರೋಗಿಗಳು ಜಿಲ್ಲಾ ಕೆಂದ್ರಕ್ಕೆ ತೆರಳುವುದು ತಪ್ಪುತ್ತದೆ. ತಾಲೂಕಿನ ಹೆಚ್ಚು ರೋಗಿಗಳು ಚಿಕಿತ್ಸೆಗಾಗಿ ಮೈಸೂರು ಮತ್ತು ಮಂಡ್ಯಕ್ಕೆ ತೆರಳುತ್ತಿದ್ದಾರೆ. ಜಿಲ್ಲಾ ಅಸ್ಪತ್ರೆಗಳ ಒತ್ತಡ ಕಡಿಮೆ ಕಡಿಮೆ ಮಾಡಲು ಇಲ್ಲಿನ ಆಸ್ಪತ್ರೆಯನ್ನು ಮೇಲ್ದರ್ಜೆಗೇರಿಸುವ ಅವಶ್ಯಕತೆ ಇದೆ. ಇದಕ್ಕಾಗಿ ಜಿಲ್ಲಾಡಳಿತ ಸಂಪೂರ್ಣ ಸಹಕಾರ ನೀಡಲಿದೆ. ಚುನಾಯಿತ ಪ್ರತಿನಿಗಳು ಈ ಬಗ್ಗೆ ಅಗತ್ಯ ಕ್ರಮ ವಹಿಸಬೇಕಿದೆ. ಜಿಲ್ಲಾ ಕೆಂದ್ರದಲ್ಲಿ ಕೇವಲ ಮೂರು ರಕ್ತನಿ ಕೇಂದ್ರಗಳಿದ್ದು, ಪಾಂಡವಪುರದಲ್ಲಿ ರಕ್ತನಿ ಕೇಂದ್ರ ಸ್ಥಾಪನೆಯಾಗಬೇಕು ಎಂದು ಹೇಳಿದರು.


ತಹಸೀಲ್ದಾರ್ ಕೆ.ಸಿ.ಸೌಮ್ಯಾ, ಉಪವಿಭಾಗೀಯ ಆಸ್ಪತ್ರೆ ಆಡಳಿತಾಕಾರಿ ಡಾ.ಕುಮಾರ್, ಜಿಲ್ಲಾ ಕ್ಷಯರೋಗ ನಿರ್ಮೂಲನಾಕಾರಿ ಡಾ.ಎಂ.ಎನ್.ಆಶಾಲತಾ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ನಾಗರಾಜು, ಪುರಸಭೆ ಮುಖ್ಯಾಕಾರಿ ವೀಣಾ, ಕಸಾಪ ಅಧ್ಯಕ್ಷ ಮೇನಾಗರ ಪ್ರಕಾಶ್, ಹಾರೋಹಳ್ಳಿ ಧನ್ಯಕುಮಾರ್, ಹಿರಿಯ ಆರೋಗ್ಯ ನಿರೀಕ್ಷಕ ಪುಟ್ಟಸ್ವಾಮಿ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net