ಜೀವನದಲ್ಲಿ ಗುರಿ ಇರಲಿ

20230707_120430
Published on

ವಿಜಯವಾಣಿ ಸುದ್ದಿಜಾಲ ಧಾರವಾಡ
ಪ್ರತಿಯೊಬ್ಬ ವಿದ್ಯಾರ್ಥಿಯು ಗುರಿ, ಕನಸು ಇಟ್ಟುಕೊಂಡು ನನಸಾಗಿಸಲು ಪ್ರಯತ್ನ ಮಾಡಬೇಕು ಎಂದು ಹುಬ್ಬಳ್ಳಿ ಸಿಐಡಿ ಅರಣ್ಯ ವಿಭಾಗದ ಡಿವೈಎಸ್ಪಿ ಮುತ್ತಣ್ಣ ಸರವಗೋಳ ಅಭಿಪ್ರಾಯಪಟ್ಟರು.
ನಗರದ ಕರ್ನಾಟಕ ವಿಜ್ಞಾನ ಕಾಲೇಜಿನ ಅಪರಾಧಶಾಸ್ತ್ರ ಮತ್ತು ವಿಧಿ ವಿಜ್ಞಾನ ವಿಭಾಗ ವತಿಯಿಂದ ಏರ್ಪಡಿಸಿದ್ದ ಸಮಾರಂಭದಲ್ಲಿ ಅವರು ಮಾತನಾಡಿದರು.
ಜೀವನದಲ್ಲಿ ನಿರ್ದಿಷ್ಟ ಗುರಿ ಹೊಂದಿರಬೇಕಲ್ಲದೆ, ಸತತ ಅಧ್ಯಯನದಲ್ಲಿ ತೊಡಗಿಕೊಳ್ಳಬೇಕು. ಕರ್ನಾಟಕ ಕಾಲೇಜಿನ ಗ್ರಂಥಾಲಯ ವಿಶೇಷವಾಗಿದೆ. ಇಲ್ಲಿ ಗ್ರಂಥ ಭಂಡಾರದಲ್ಲಿ ಉತ್ತಮ ಪುಸ್ತಕ ಸಂಗ್ರಹವಿದೆ. ವಿದ್ಯಾರ್ಥಿಗಳು ಅದರ ಪ್ರಯೋಜನ ಪಡೆಯಬೇಕು. ವಿದ್ಯಾರ್ಥಿಗಳು ಸಂವಿಧಾನ, ಪ್ರಜಾಪ್ರಭುತ್ವ, ಕ್ರೀಡೆ ಪ್ರತಿ ವಿಷಯದ ಜ್ಞಾನ ಬೆಳೆಸಿಕೊಳ್ಳಬೇಕು ಎಂದರು.
ಕಾಲೇಜಿನ ಪ್ರಾಚಾರ್ಯ ಪ್ರೊ. ಜಗದೀಶ ಕಲ್ಯಾಣ ಮಾತನಾಡಿ, ಜೀವನದಲ್ಲಿ ಕಷ್ಟಪಟ್ಟಾಗ ಮಾತ್ರ ಸಾಧನೆ ಸಾಧ್ಯ. ವಿದ್ಯಾರ್ಥಿಗಳು ಉತ್ತಮ ಅಧ್ಯಯನಕ್ಕೆ ಸಲಹೆ ಅವಶ್ಯಕ. ವಿದ್ಯಾರ್ಥಿಗಳು ಅಂಕ ಗಳಿಕೆ ಮಾತ್ರ ಸೀಮಿತವಾಗದೆ, ಮಾದರಿ ವ್ಯಕ್ತಿತ್ವ ಬೆಳೆಸಿಕೊಳ್ಳಬೇಕು ಎಂದರು.
ಡಾ. ಡಬ್ಲೂೃ.ಎಚ್. ರಾಮದಾಸ, ಡಾ. ಪಿ.ಎನ್. ಸಂಗಳದ, ಡಾ. ಪ್ರಭಾಕರ ಕಾಂಬಳೆ, ಪಿ.ಪಿ. ಪಾಟೀಲ, ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net