ಜು.04ರಂದು ಜಿಲ್ಲೆಯಲ್ಲಿ ಭಾರಿ ಮಳೆಯಾಗುವ ಸಾಧ್ಯತೆ

rain
Published on

ಹಾಸನ: ಭಾರತೀಯ ಹವಾಮಾನ ಇಲಾಖೆಯ ಸಂದೇಶದಂತೆ ಜು.04 ರಂದು ಹಾಸನ, ಕೊಡಗು ಹಾಗೂ ಬೆಳಗಾವಿ ಜಿಲ್ಲೆಗಳಲ್ಲಿ ಅತೀ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ ಎಂದು ಮುನ್ನೆಚ್ಚರಿಕೆ ನೀಡಿದ್ದು, ಜಿಲ್ಲೆಯ ಕೆಲವೊಂದು ಭಾಗಗಳಲ್ಲಿ ಭಾರಿ ಮಳೆಯಾಗುವ ಸಂಭವ ವಿದೆ. ಸಾರ್ವಜನಿಕರು ಅಗತ್ಯ ಎಚ್ಚರಿಕೆ ವಹಿಸಿ ಕೆರೆ-ಕಟ್ಟೆ ಹಾಗೂ ನದಿ ಪಾತ್ರಗಳ ಹತ್ತಿರ ಜನರು ಹೋಗದಿರಲು ಹಾಗೂ ಜಾನುವಾರುಗಳನ್ನು ಬಿಡದಿರಲು ಕೋರಿದೆ.

ಜಿಲ್ಲೆಯಲ್ಲಿ ಗುಡ್ಡ ಕುಸಿತ ಪ್ರಕರಣಗಳು ಸಂಭವಿಸುವ ಸಾಧ್ಯತೆ ಇರುವುದರಿಂದ ಹಾಗೂ ಜಿಲ್ಲೆಯ ನದಿಗಳಲ್ಲಿ ನೀರಿನ ಹರಿಯುವಿಕೆ ಹೆಚ್ಚಾಗುವುದರಿಂದ ನದಿಪಾತ್ರಗಳ ಪ್ರದೇಶದಲ್ಲಿ ವಾಸಿಸುವ ಜನರು ಸುರಕ್ಷಿತ ಸ್ಥಳಗಳಿಗೆ ತೆರಳಲು ತಿಳಿಸಿದೆ. ಹಾಸನ ಜಿಲ್ಲಾ ವ್ಯಾಪ್ತಿಯಲ್ಲಿ ಯಾವುದೇ ಅಹಿತಕರ ಘಟನೆಗಳು ಸಂಭವಿಸದಿರುವಂತೆ ಸಹಕರಿಸಲು ಈ ಮೂಲಕ ಕೋರಿದೆ.

ತುರ್ತು ಸಂದರ್ಭಗಳಲ್ಲಿ ಜಿಲ್ಲಾ ವಿಪತ್ತು ನಿರ್ವಹಣಾ ಕೊಠಡಿ ದೂರವಾಣಿ ಸಂಖ್ಯೆ: 08172-261111 ಹಾಗೂ ಉಚಿತಾ ಸಹಾಯವಾಣಿ 1077 ಗೆ ಕರೆ ಮಾಡಲು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಜಿಲ್ಲಾಧಿಕಾರಿ ಲತಾ ಕುಮಾರಿ ಅವರು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net