ಜು. 13 ರಂದು ಜಿಲ್ಲಾ ಮಟ್ಟದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ:ಈ .ಕೃಷ್ಣೇಗೌಡ

ಜು. 13 ರಂದು ಜಿಲ್ಲಾ ಮಟ್ಟದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ:ಈ .ಕೃಷ್ಣೇಗೌಡ
Published on

ಹಾಸನ: ಜಿಲ್ಲಾ ಸರ್ಕಾರಿ ನೌಕರರ ಸಂಘದ ವತಿಯಿಂದ ಜಿಲ್ಲೆಯ ಸರ್ಕಾರಿ ನೌಕರರ ಮಕ್ಕಳು ಎಸ್.ಎಸ್.ಎಲ್.ಸಿ ಹಾಗೂ ಪಿಯುಸಿಯಲ್ಲಿ ಅತಿ ಹೆಚ್ಚು ಅಂಕಗಳಿಸಿದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಜು. 13 ರಂದು ಜಿಲ್ಲಾ ಮಟ್ಟದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಏರ್ಪಡಿಸಲಾಗಿದೆ ಎಂದು ಜಿಲ್ಲಾಧ್ಯಕ್ಷ ಈ .ಕೃಷ್ಣೇಗೌಡ ತಿಳಿಸಿದರು .
ಕಾರ್ಯಕ್ರಮವನ್ನು ನಗರದ ಹಾಸನಾಂಬ ಕಲಾಕ್ಷೇತ್ರದಲ್ಲಿ ಜು. 13 ರಂದು ಮದ್ಯಾಹ್ನ 3 ಗಂಟೆಗೆ ಏರ್ಪಡಿಸಲಾಗಿದೆ. ಪ್ರತಿಭಾ ಪುರಸ್ಕಾರದಲ್ಲಿ ಜಿಲ್ಲೆಯ 8 ತಾಲೂಕಿನಿಂದ ಎಸ್‌ಎಸ್‌ಎಲ್‌ಸಿ ಯಲ್ಲಿ 220 ಮತ್ತು ಪಿಯುಸಿಯಲ್ಲಿ 215 ಸೇರಿ ಒಟ್ಟು 435 ಪ್ರತಿಭಾವಂತ ವಿದ್ಯಾರ್ಥಿಗಳು ಆಯ್ಕೆ ಮಾಡಲಾಗಿದೆ ಎಂದರು.
ಪ್ರತಿಭಾ ಪುರಸ್ಕಾರಕ್ಕೆ ಆಗಮಿಸುವ ವಿದ್ಯಾರ್ಥಿಗಳು ಅಂಕಪಟ್ಟಿ ಹಾಗೂ ಗುರುತಿನ ಚೀಟಿಯನ್ನು ತರುವುದು ಕಡ್ಡಾಯವಾಗಿದೆ. ಕಾರ್ಯಕ್ರಮಕ್ಕೆ ಜಿಲ್ಲೆಯ ಎಲ್ಲಾ ಕ್ಷೇತ್ರದ ಶಾಸಕರು ಅತಿಥಿಗಳಾಗಿ ಆಗಮಿಸುವರು. ಜಿಲ್ಲಾಧಿಕಾರಿ ಸಿ.ಸತ್ಯಭಾಮಾ, ಜಿ.ಪಂ ಸಿಇಓ ಪೂರ್ಣಿಮಾ, ಎಸ್.ಪಿ. ಮೊಹಮ್ಮದ್ ಸುಜಿತಾ ಭಾಗವಹಿಸುವರು. ವಿದ್ಯಾರ್ಥಿಗಳು ಪೋಷಕರು ಸೇರಿದಂತೆ ಸರ್ಕಾರಿ ನೌಕರರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಸುವಂತೆ ಮನವಿ ಮಾಡಿದರು.
7 ನೇ ವೇತನ ಆಯೋಗ ಜಾರಿ ಮಾಡಲು ಸರ್ಕಾರ ಮೀನಾಮೇಷ ಮಾಡುತ್ತಿದೆ. ಈ ಸಂಬಂಧ ಈಗಾಗಲೆ ಚಿಕ್ಕಮಗಳೂರಿನಲ್ಲಿ ಕಾರ್ಯಕಾರಿ ಸಮಿತಿ ಸಭೆ ನಡೆಸಲಾಗಿದ್ದು, ಸುಮಾರು 2ಸಾವಿರ ಸರ್ಕಾರಿ ನೌಕರರು ಭಾಗಿಯಾಗಿದ್ದರು. ವಿದಾನ ಮಂಡಲ ಅಧಿವೇಷನ ಆರಂಭಗೊಳ್ಳಲಿದ್ದು, ವಿಚಾರ ಪ್ರಸ್ತಾಪಿಸುವಂತೆ ಜನಪ್ರತಿನಿದಿಗಳಿಗೆ ಮನವಿ ಮಾಡಲಾಗುವುದು. ಸರ್ಕಾರಕ್ಕೆ ಜು. 29 ರ ವರೆಗೆ ಗಡುವು ನೀಡಲಾಗಿದ್ದು, ಅಷ್ಟರೊಳಗೆ 7ನೇ ವೇತನ ಜಾರಿ ಮಾಡದಿದ್ದರೆ ಎಲ್ಲಾ ಸರ್ಕಾರಿ ನೌಕರರು ಜು. 29 ರಂದು ಸರ್ಕಾರಿ ಕಚೇರಿಗಳನ್ನು ಬಂದ್ ಮಾಡುವ ಮೂಲಕ ಅನಿರ್ದಿಷ್ಟಾವಧಿ ಮುಷ್ಕರ ನಡೆಸಲಾಗುವುದು ಎಂದು ತೀರ್ಮಾನಿಸಲಾಗಿದೆ ಎಂದು ಎಚ್ಚರಿಸಿದರು.
ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಸರಕಾರಿ ನೌಕರರ ಸಂಘದ ಗೌರವಾಧ್ಯಕ್ಷ ಕುಮಾರಸ್ವಾಮಿ, ರಾಜ್ಯ ಸಂಘಟನಾ ಕಾರ್ಯದರ್ಶಿ ಡಾ. ಲಕ್ಷ್ಮೀಕಾಂತ್, ಲೆಕ್ಕ ಪರಿಶೋಧಕ ವೈ.ಜೆ. ಶಂಕರಯ್ಯ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net