ಚಾಮರಾಜನಗರ: ಜಿಲ್ಲಾ ದಲಿತ ಮತ್ತು ಪ್ರಗತಿಪರ ಸಂಘಟನೆಗಳ ಒಕ್ಕೂಟದ ವತಿಯಿಂದ ಜು.19 ರಂದು ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಸಂಯೋಜಕ ದಿ.ಕೆ.ಎಂ.ನಾಗರಾಜು(ಕೆಂಪನಪುರ) ಅವರ ನುಡಿನಮನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ನಗರದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಬೆಳಗ್ಗೆ 11 ಗಂಟೆಗೆ ಪ್ರಾರಂಭವಾಗುವ ಕಾರ್ಯಕ್ರಮದಲ್ಲಿ ಜಿಲ್ಲೆಯ ಎಲ್ಲಾ ದಲಿತ ಸಂಘರ್ಷ ಸಮಿತಿ, ಪ್ರಗತಿಪರ ಸಂಘಟನೆಗಳು, ರೈತ ಸಂಘಟನೆಗಳು, ಕನ್ನಡಪರ ಸಂಘಟನೆಗಳು, ಕಲಾವಿದರು, ಸಾಹಿತಿಗಳು ಹಾಗೂ ಹಿತೈಷಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಜಿಲ್ಲಾ ದಲಿತ ಮತ್ತು ಪ್ರಗತಿಪರ ಸಂಘಟನೆಗಳ ಒಕ್ಕೂಟದ ವತಿಯಿಂದ ಪ್ರಕಟಣೆಯಲ್ಲಿ ತಿಳಿಸಿದೆ.