

ಹಾಸನ: ಜಿಲ್ಲಾ ಪ್ರಾಥಮಿಕ ಶಾಲಾ ಶಿಕ್ಷಕರ ಕೋ-ಆಪರೇಟಿವ್ ಸೊಸೈಟಿಯ ಮೊದಲನೆ ವಾರ್ಷಿಕ ಮಹಾಸಭೆಯ ಅಂಗವಾಗಿ ಜು.20ರಂದು ನಗರದ ಕನ್ನಡ ಸಾಹಿತ್ಯ ಪರಿಷತ್ತು ಭವನದಲ್ಲಿ ಪ್ರತಿಭಾ ಪುರಸ್ಕಾರ ಹಾಗೂ ನಿವೃತ್ತ ಶಿಕ್ಷಕರಿಗೆ ಸನ್ಮಾನ ಸಮಾರಂಭವನ್ನು ಏರ್ಪಡಿಸಲಾಗಿದೆ ಎಂದು ಸೊಸೈಟಿ ಅಧ್ಯಕ್ಷ ಡಿ.ರಮೇಶ್ ತಿಳಿಸಿದರು.
ಎಸ್.ಎಸ್.ಎಲ್.ಸಿ ಮತ್ತು ಪಿ.ಯು.ಸಿಯಲ್ಲಿ ಶೇ.90ಕ್ಕಿಂತ ಹೆಚ್ಚು ಅಂಕ ಪಡೆದ ಷೇರುದಾರ ಪ್ರಾಥಮಿಕ ಶಾಲಾ ಶಿಕ್ಷಕರ ಮಕ್ಕಳಿಗೆ ಪ್ರತಿಭಾ ಪುರಸ್ಕಾರಕ್ಕೆ 98 ವಿದ್ಯಾರ್ಥಿಗಳು ನೋಂದಾವಣೆ ಮಾಡಿಕೊಂಡಿದ್ದಾರೆ.ಸೊಸೈಟಿಯ ಷೇರುದಾರ ನಿವೃತ್ತ ಶಿಕ್ಷಕರಿಗೆ ಸನ್ಮಾನ ಕಾರ್ಯಕ್ರಮ, ಸೊಸೈಟಿಯ 10ಕ್ಕಿಂತ ಹೆಚ್ಚು ಷೇರು ಪಡೆದ ಹಾಗೂ 1 ಲಕ್ಷಕ್ಕಿಂತ ಹೆಚ್ಚು ಎಫ್.ಡಿ ಇಟ್ಟಂತಹ ಷೇರುದಾರರಿಗೆ ಸನ್ಮಾನ ಕಾರ್ಯಕ್ರಮ ಏರ್ಪಡಿಸಲಾಗಿದೆ ಎಂದು ಗುರುವಾರ ಸುಧ್ದಿಗೋಷ್ಠಿಯಲ್ಲಿ ಹೇಳಿದರು.
ಈ ಕಾರ್ಯಕ್ರಮದ ಉದ್ಘಾಟನೆಯನ್ನು ಶಾಸಕ ಎಚ್.ಪಿ.ಸ್ವರೂಪ್ ಪ್ರಕಾಶ್,ಮಕ್ಕಳಿಗೆ ಪ್ರತಿಭಾ ಪುರಸ್ಕಾರವನ್ನ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎನ್.ರಾಜಣ್ಣ ನೆರವೇರಿಸಲಿದ್ದಾರೆ. ಸಂಸದ ಶ್ರೇಯಸ್ ಪಟೇಲ್, ಡಿ. ರಮೇಶ್ ಇತರರು ಆಗಮಿಸಲಿದ್ದಾರೆ ಎಂದರು.
ಇದುವರೆಗೆ ನಮ್ಮ ಸೊಸೈಟಿಗೆ 1343ಕ್ಕೂ ಹೆಚ್ಚು ಪ್ರಾಥಮಿಕ ಶಾಲಾ ಶಿಕ್ಷಕರು ಷೇರುದಾರರು ಇದ್ದು, ಅದರಲ್ಲಿ 65ಲಕ್ಷ ಸಾಲ ನೀಡಲಾಗಿದೆ. ಜಿಲ್ಲೆಯ ಪ್ರಾಥಮಿಕ ಶಾಲಾ ಶಿಕ್ಷಕರಿಗಾಗಿ, ಶಿಕ್ಷಕರಿಗೋಸ್ಕರ, ಶಿಕ್ಷಕರಿಂದ ಪಾರದರ್ಶಕವಾಗಿ ಉತ್ತಮ ಕಾರ್ಯ ನಿರ್ವಹಿಸುತ್ತಿದ್ದೇವೆ. ಮುಂದಿನ ದಿನಗಳಲ್ಲಿ ಸಾಲದ ಮೊತ್ತ ಹೆಚ್ಚಳ ಶಿಕ್ಷಕರಿಗೆ ಕ್ಯಾಂಟೀನ್ ತೆರೆಯುವುದರ ಜೊತೆಗೆ ಶಿಕ್ಷಕರ ಅವರ ಕುಟುಂಬಕ್ಕೆ ಸಹಕಾರ ನೀಡುವುದು ನಮ್ಮ ಸೊಸೈಟಿಯ ಉದ್ದೇಶವಾಗಿದೆ ಎಂದು ಅಭಿಪ್ರಯಿಸಿದರು.
ಸುದ್ದಿಗೋಷ್ಠಿಯಲ್ಲಿ ಗೌರವ ಕಾರ್ಯದರ್ಶಿ ತಮ್ಮಣ್ಣ ಶೆಟ್ಟಿ, ನಿರ್ದೇಶಕ ಬಿ.ಎಚ್.ರಾಜು, ಎಚ್.ಆರ್.ಪೂರ್ಣೇಶ್, ದಿನೇಶ್, ಶುಭ ಮಂಗಳ, ಶ್ರೀನಿವಾಸ್ ಇತರರು ಇದ್ದರು.