

ಹನೂರು: ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಜು.25ರಂದು ಪತ್ರಿಕಾ ದಿನಾಚರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ಅಧ್ಯಕ್ಷ ಮಹಾದೇಶ್ ತಿಳಿಸಿದರು.
ಹನೂರು ಪಟ್ಟಣದ ಲೋಕೋಪಯೋಗಿ ವಸತಿ ಗೃಹದಲ್ಲಿ ಪತ್ರಿಕಾ ದಿನಾಚರಣೆ ಕಾರ್ಯಕ್ರಮ ಸಂಬಂಧ ಗುರುವಾರ ಆಯೋಜಿಸಿದ್ದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು. ಪ್ರತಿ ವರ್ಷವೂ ತಾಲೂಕು ಸಂಘದ ವತಿಯಿಂದ ಪತ್ರಿಕಾ ದಿನಾಚರಣೆ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗುತ್ತಿದೆ. ಆದರೆ ಈ ಬಾರಿ ವಿಶೇಷವಾಗಿ ಮಹಿಳೆಯರ ಪ್ರಮುಖ ಸಮಸ್ಯೆಗಳನ್ನು ಬಗೆಹರಿಸುವ ಸಲುವಾಗಿ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌಧರಿ, ಸಂಸದ ಸುನೀಲ್ ಬೋಸ್, ಶಾಸಕ ಎಂ.ಆರ್.ಮಂಜುನಾಥ್, ಮಾಜಿ ಶಾಸಕ ಆರ್.ನರೇಂದ್ರ, ಕಾರ್ಯ ನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು, ಜಿಲ್ಲಾಧ್ಯಕ್ಷ ದೇವರಾಜ ಕಪ್ಪಸೋಗೆ , ಪ್ರಧಾನ ಕಾರ್ಯದರ್ಶಿ ಪ್ರಸಾದ್ ಲಕ್ಕೂರು, ರಾಜ್ಯ ಸಮಿತಿ ಸದಸ್ಯ ಗೂಳಿಪುರ ನಂದೀಶ್, ತಹಸೀಲ್ದಾರ್ ವೈ.ಕೆ ಗುರುಪ್ರಸಾದ್ ಅವರನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಲು ತೀರ್ಮಾನಿಸಲಾಯಿತು.
ಇದೇ ವೇಳೆ ಪತ್ರಕರ್ತರಾದ ಪ್ರಭುಸ್ವಾಮಿ, ಅಭಿಲಾಶ್, ರಮೇಶ್, ಸುರೇಶ್ ಅಜ್ಜೀಪುರ ಅವರನ್ನು ಪ್ರಸ್ತಿಗೆ ಆಯ್ಕೆ ಮಾಡಲಾಯಿತು. ಪತ್ರಕರ್ತ ಹಾಗೂ ಉರಗ ತಜ್ಞ ಮಧು ಹಾಗೂ ಮಹದೇವಸ್ವಾಮಿ ಅವರನ್ನು ಸನ್ಮಾನಿಸಲು ನಿರ್ಧರಿಸಲಾಯಿತು. ಸಭೆಯಲ್ಲಿ ಗೌರವಾಧ್ಯಕ್ಷ ದೇವರಾಜು ನಾಯ್ಡು, ಪ್ರಧಾನ ಕಾರ್ಯದರ್ಶಿ ಬಸವರಾಜು, ಸಹ ಕಾರ್ಯದರ್ಶಿ ಗೋವಿಂದ, ಖಜಾಂಚಿ ಮಹದೇವಸ್ವಾಮಿ, ಜಿಲ್ಲಾ ನಿರ್ದೇಶಕರಾದ ಪ್ರಭುಸ್ವಾಮಿ, ಸುರೇಶ್ ನಿರ್ದೇಶಕರಾದ ಸೋಮಶೇಖರ್, ಮಧು ಸದಸ್ಯರುಗಳಾದ ರಾಜೇಶ್, ಮಹದೇವಸ್ವಾಮಿ, ಅಭಿಲಾಶ್, ವಿಜಯಕುಮಾರ್, ಮಹಾದೇವ, ನಿರಂಜನ್, ರವಿ, ಶಿವಕುಮಾರ್, ನಾಗೇಂದ್ರ, ಲಿಂಗರಾಜು ಕರಿಯನಪುರ, ಛಾಯಾಗ್ರಾಹಕ ಶಿವಶಂಕರ್ ಇತರರು ಇದ್ದರು.