

ಚಾಮರಾಜನಗರ: ಕರ್ನಾಟಕ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯಿತಿ ರಾಜ್ ಇಲಾಖೆಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಧಿಕಾರಿಗಳ ಮತ್ತು ನೌಕರರ ಕಲ್ಯಾಣ ಸಂಘ ಉದ್ಘಾಟನೆ ಮತ್ತು ರಾಜ್ಯ ಮಟ್ಟದ ಸಮಾವೇಶವನ್ನು ಜು.26 ರಂದು ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ಜಿಲ್ಲಾಧ್ಯಕ್ಷ ಶಾಂತರಾಜು ತಿಳಿಸಿದ್ದಾರೆ.
ಮೈಸೂರಿನ ಮಾನಸ ಗಂಗೋತ್ರಿ ಸೆನೆಟ್ ಭವನದಲ್ಲಿ ಬೆಳಗ್ಗೆ 10.30 ಗಂಟೆಗೆ ಪ್ರಾರಂಭವಾಗುವ ಕಾರ್ಯಕ್ರಮವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉದ್ಘಾಟಿಸುವರು. ಸಮಾಜ ಕಲ್ಯಾಣ ಸಚಿವ ಡಾ.ಎಚ್.ಸಿ.ಮಹದೇವಪ್ಪ ಭಾವಚಿತ್ರಕ್ಕೆ ಪುಷ್ಪಾರ್ಚನೆ ನೆರವೇರಿಸುವರು. ಮೈಸೂರಿನ ಉರಿಲಿಂಗ ಪರದ್ದಿಮಠದ ಶ್ರೀಜ್ಞಾನಪ್ರಕಾಶ ಸ್ವಾಮೀಜಿ ಸಾನಿಧ್ಯವಹಿಸುವರು. ಗ್ರಾಮೀಣಾಭಿವೃದ್ಧಿ, ಪಂಚಾಯಿತಿ ರಾಜ್ ಹಾಗೂ ಮಾಹಿತಿ ಮತ್ತು ಜೈವಿಕ ತಂತ್ರಜ್ಞಾನ ಸಚಿವ ಪ್ರಿಯಾಂಕ ಖರ್ಗೆ ಉಪಸ್ಥಿತರಿರುವರು. ಸಂಘದ ರಾಜ್ಯಾಧ್ಯಕ್ಷ ಎಂ.ಸುರೇಶ್‌ಕುಮಾರ್ ಅಧ್ಯಕ್ಷತೆ ಹಾಗೂ ಮೈಸೂರು ಜಿಲ್ಲಾಧ್ಯಕ್ಷ ಸಿ.ಪ್ರಕಾಶ್ ಸಹ ಅಧ್ಯಕ್ಷತೆವಹಿಸುವರು ಎಂದು ಮಾಹಿತಿ ನೀಡಿದರು.
ಕಾರ್ಯಕ್ರಮದಲ್ಲಿ ಗೃಹ ಸಚಿವ ಡಾ.ಜಿ.ಪರಮೇಶ್ವರ್, ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೋಳಿ ಹಾಗೂ ಇನ್ನಿತರೆ ಇಲಾಖೆಗಳ ಸಚಿವರು. ಸಂಸದ ಸುನೀಲ್ ಬೋಸ್, ಶಾಸಕರಾದ ಪಿ.ಎನ್.ನರೇಂದ್ರಸ್ವಾಮಿ, ಅನಿಲ್ ಚಿಕ್ಕಮಾಧು, ಎ.ಆರ್.ಕೃಷ್ಣಮೂರ್ತಿ, ದರ್ಶನ್ ಧ್ರುವನಾರಾಯಣ್, ವಿಧಾನ ಪರಿಷತ್ ಸದಸ್ಯ ಯತೀಂದ್ರ ಸಿದ್ದರಾಮಯ್ಯ ಹಾಗೂ ಇನ್ನಿತರೆ ಜನಪ್ರತಿನಿಧಿಗಳು, ಗ್ರಾಮಿಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಅಧಿಕಾರಿಗಳು, ವಿವಿಧ ಸಂಘ-ಸಂಸ್ಥೆಗಳ ಮುಖ್ಯಸ್ಥರು ಹಾಗೂ ಪದಾಧಿಕಾರಿಗಳು ಆಗಮಿಸಲಿದ್ದಾರೆ ಎಂದು ಹೇಳಿದರು.
ಈ ಕಾರ್ಯಕ್ರಮಕ್ಕೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಎಲ್ಲಾ ಅಧಿಕಾರಿಗಳು, ಸಿಬ್ಬಂದಿಗಳು ಹಾಗೂ ಗ್ರಾಮ ಪಂಚಾಯಿತಿ ಮಟ್ಟದ ಎಲ್ಲಾ ನೌಕರರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ಮನವಿ ಮಾಡಿದರು.
ಈ ಸಂದರ್ಭದಲ್ಲಿ ಸಂಘದ ಖಜಾಂಚಿ ಸಿದ್ದರಾಜು, ಪ್ರಧಾನ ಕಾರ್ಯದರ್ಶಿ ಗೋವಿಂದಯ್ಯ, ಉಪಾಧ್ಯಕ್ಷ ಮಹದೇವಸ್ವಾಮಿ, ಚಾ.ನಗರ ತಾಲೂಕು ಉಪಾಧ್ಯಕ್ಷೆ ಲಲಿತಮ್ಮ, ಪ್ರಧಾನ ಕಾರ್ಯದರ್ಶಿ ನಾಗೇಂದ್ರ, ಸಂಘಟನಾ ಕಾರ್ಯದರ್ಶಿ ಕೃಷ್ಣನಾಯಕ್, ಸತೀಶ್, ಜಗದೀಶ್, ಜನಾರ್ದನ್, ನಟರಾಜ್ ಹಾಗೂ ಇತರರು ಹಾಜರಿದ್ದರು.