ಜು. 29ರಂದು ಶ್ರೀಹಡಪದ ಅಪ್ಪಣ್ಣ ಜಯಂತಿ

Published on

ಚಾಮರಾಜನಗರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದೊಂದಿಗೆ ಶಿವಶರಣ ಶ್ರೀಹಡಪದ ಅಪ್ಪಣ್ಣ ಜಯಂತಿ ಕಾರ್ಯಕ್ರಮವನ್ನು ಜು.29 ರಂದು ಬೆಳಗ್ಗೆ 11 ಗಂಟೆಗೆ ನಗರದ ವರನಟ ಡಾ. ರಾಜ್ ಕುಮಾರ್ ಜಿಲ್ಲಾ ರಂಗಮಂದಿರದಲ್ಲಿ ಆಯೋಜಿಸಲಾಗಿದೆ.

ಪಶುಸಂಗೋಪನೆ, ರೇಷ್ಮೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ವೆಂಕಟೇಶ್ ಕಾರ್ಯಕ್ರಮ ಉದ್ಘಾಟಿಸುವರು. ಎಂಎಸ್‌ಐಎಲ್ ಅಧ್ಯಕ್ಷ ಹಾಗೂ ಶಾಸಕ ಸಿ.ಪುಟ್ಟರಂಗಶೆಟ್ಟಿ ಅಧ್ಯಕ್ಷತೆ ವಹಿಸುವರು. ಲೋಕಸಭಾ ಸದಸ್ಯ ಸುನೀಲ್ ಬೋಸ್ ಘನ ಉಪಸ್ಥಿತಿ ವಹಿಸುವರು.

ಶಾಸಕ ಎ.ಆರ್.ಕೃಷ್ಣಮೂರ್ತಿ, ಎಚ್.ಎಂ.ಗಣೇಶ್‌ಪ್ರಸಾದ್, ಎಂ.ಆರ್.ಮಂಜುನಾಥ್, ಡಾ.ಡಿ.ತಿಮ್ಮಯ್ಯ, ಸಿ.ಎನ್. ಮಂಜೇಗೌಡ, ಮಧು ಜಿ.ಮಾದೇಗೌಡ, ಕೆ.ವಿವೇಕಾನಂದ, ಕಾವೇರಿ ಜಲಾನಯನ ಯೋಜನೆ ಅಚ್ಚುಕಟ್ಟು ಪ್ರದೇಶಾಭಿವೃಧ್ದಿ ಪ್ರಾಧಿಕಾರದ ಅಧ್ಯಕ್ಷ ಪಿ.ಮರಿಸ್ವಾಮಿ, ನಗರಸಭೆ ಅಧ್ಯಕ್ಷ ಎಸ್.ಸುರೇಶ್, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಜಿಲ್ಲಾಧ್ಯಕ್ಷ ಎಚ್.ವಿ.ಚಂದ್ರು, ಚಾಮರಾಜನಗರ-ರಾಮಸಮುದ್ರ ನಗರಾಭಿವೃಧ್ದಿ ಪ್ರಾಧಿಕಾರದ ಅಧ್ಯಕ್ಷ ಮಹಮ್ಮದ್ ಅಸ್ಗರ್ (ಮುನ್ನ), ಪ್ರಗತಿಪರ ವಿಚಾರವಾದಿಗಳಾದ ಅರಕಲವಾಡಿ ನಾಗೇಂದ್ರ ಮುಖ್ಯ ಭಾಷಣ ಮಾಡುವರು ಎಂದು ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net