ಜು.2ರಂದು ಶಾಸಕ ಸ್ವರೂಪ್‌ಗೆ ಅಭಿನಂದನೆ

ಜು.2ರಂದು ಶಾಸಕ ಸ್ವರೂಪ್‌ಗೆ ಅಭಿನಂದನೆ
Published on

ಹಾಸನ:  ವಿಧಾನಸಭಾ ಕ್ಷೇತ್ರದ ನೂತನ ಶಾಸಕರಾಗಿ ಆಯ್ಕೆ ಆಗಿರುವ ಎಚ್.ಪಿ. ಸ್ವರೂಪ್ ಪ್ರಕಾಶ್ ಅವರಿಗೆ ದಲಿತ ಸಂಘರ್ಷ ಸಮಿತಿ ವತಿಯಿಂದ ನಗರದ ಅಂಬೇಡ್ಕರ್ ಭವನದಲ್ಲಿ ಜುಲೈ 2 ರಂದು ಅಭಿಂದನಾ ಸಮಾರಂಭ ಹಮ್ಮಿಕೊಳ್ಳಲಾಗಿದೆ ಎಂದು ದಲಿತ ಸಂಘರ್ಷ ಸಮಿತಿಯ ಜಿಲ್ಲಾಧ್ಯಕ್ಷ ಎಚ್.ಕೆ. ಸಂದೇಶ್ ಹೇಳಿದರು.

ಕೋಮುವಾದಿ ಬಿಜೆಪಿ ಕಿತ್ತು ಹಾಕುವ ನಿಟ್ಟಿನಲ್ಲಿ, ಸಾಧ್ಯವಿರುವ ರಾಜ್ಯದ ಎಲ್ಲ ಕಡೆ ದಲಿತ ಸಂಘಟನೆಗಳು ಒಗ್ಗೂಡಿ ಕೆಲಸ ಮಾಡುವಂತೆ ಕರೆ ನೀಡಿದ ಹಿನ್ನೆಲೆಯಲ್ಲಿ ಎಲ್ಲರೂ ಒಗ್ಗೂಡಿ ಕೆಲಸ ಮಾಡಿದ್ದೇವೆ ಎಂದು ಬುಧವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಬಿಜೆಪಿ ಸೋಲಿಸಲು ಶ್ರಮ ವಹಿಸಿರುವ ಎಲ್ಲಾ ಮುಖಂಡರು ಹಾಗೂ ಕಾರ್ಯಕರ್ತರಿಗೂ ಕೂಡ ಇದೇ ಸಂದರ್ಭದಲ್ಲಿ ಅಭಿನಂದನೆ ಸಲ್ಲಿಸಲಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ದಲಿತ ಸಮುದಾಯದ ಮುಖಂಡರು ಹಾಗೂ ಕಾರ್ಯಕರ್ತರು ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕು ಎಂದು ಮನವಿ ಮಾಡಿದರು.

ಸುದ್ದಿಗೋಷ್ಠಿಯಲ್ಲಿ ದಸಂಸ ಮುಖಂಡರಾದ ಕೆ.ಈರಪ್ಪ, ಸಂದೇಶ್, ವೀರಭದ್ರಪ್ಪ, ಮಂಜಯ್ಯ, ಅರುಣ್ ಜಯರಾಂ, ನಿಟ್ಟೂರು ಸ್ವಾಮಿ, ವಕೀಲ ಕ್ರಾಂತಿ ಪ್ರಸಾದ್ ತ್ಯಾಗಿ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net