ಚಾಮರಾಜನಗರ: ಭಾರತದ ಮಾಜಿ ಉಪ ಪ್ರಧಾನಿ, ಹಸಿರು ಕ್ರಾಂತಿಯ ಹರಿಕಾರ ಡಾ. ಬಾಬು ಜಗಜೀವನ ರಾಮ್ ಅವರ 39ನೇ ಪುಣ್ಯ ಸ್ಮರಣೆಯ ಕಾರ್ಯಕ್ರಮವನ್ನು ಜುಲೈ 6 ರಂದು ಹಮ್ಮಿಕೊಳ್ಳಲಾಗಿದೆ.
ಅಂದು ಬೆಳಿಗ್ಗೆ 11 ಗಂಟೆಗೆ ನಗರದ ಜಿಲ್ಲಾಡಳಿತ ಭವನದ ಆವರಣದಲ್ಲಿರುವ ಡಾ. ಬಿ.ಆರ್. ಅಂಬೇಡ್ಕರ್ ರವರ ಪುತ್ಥಳಿಗೆ ಮಾಲಾರ್ಪಣೆ ಮಾಡಲಾಗುವುದು ಹಾಗೂ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಡಾ. ಬಾಬು ಜಗಜೀವನರಾಮ್ ರವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಗೌರವ ನಮನ ಸಲ್ಲಿಸಲಾಗುವುದು ಎಂದು ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.