ಜು.೨೦ ರಂದು ಅಭಿನಂದನಾ ಸಮಾರಂಭ, ಪುತಿಭಾ ಪುರಸ್ಕಾರ

bkt-18-2
ಬಾಗಲಕೋಟೆ ನಗರದ ಪ್ರೆಸ್‌ಕ್ಲಬ್‌ನಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಬಾಗಲಕೋಟೆ ತಾಲೂಕು ಬಣಜಿಗ ಸಮಾಜದ ಅಧ್ಯಕ್ಷ ಬಸವರಾಜ ಶೀಲವಂತ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
Published on

ಬಾಗಲಕೋಟೆ: ಚರಂತಿಮಠದ ಡಾ. ಪ್ರಭು ಸ್ವಾಮೀಜಿಗಳಿಗೆ ಗೌರವ ಅಭಿನಂದನಾ ಸನ್ಮಾನ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭ ಚರಂತಿಮಠ ಶಿವಾನುಭವ ಮಂಟಪದಲ್ಲಿ ಜು.೨೦ ರಂದು ಮಧ್ಯಾಹ್ನ ೪.೩೦ ಗಂಟೆಗೆ ಹಮ್ಮಿಕೊಳ್ಳಲಾಗಿದೆ ಎಂದು ಬಾಗಲಕೋಟೆ ತಾಲೂಕು ಬಣಜಿಗ ಸಮಾಜದ ಅಧ್ಯಕ್ಷ ಬಸವರಾಜ ಶೀಲವಂತ ಹೇಳಿದರು.

ನಗರದ ಪ್ರೆಸ್‌ಕ್ಲಬ್‌ನಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ ಬಣಜಿಗ ಸಮಾಜದ ಕ್ಷೇಮಾಭಿವೃದ್ಧಿ ಸಂಘ ಹಾಗೂ ಬಾಗಲಕೋಟೆ ತಾಲೂಕು ಬಣಜಿಗ ಸಮಾಜ ಜಂಟಿಯಾಗಿ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಬೆಳಗಾವಿ ರಾಣಿ ಚನ್ನಮ್ಮ ವಿಶ್ವ ವಿದ್ಯಾಲಯವು ಗೌರವ ಡಾಕ್ಟರೇಟ್ ಪದವಿ ನೀಡಿದ ಡಾ. ಪ್ರಭುಸ್ವಾಮೀಜಿ ಹಿನ್ನಲೆಯಲ್ಲಿ ಅವರನ್ನು ಸನ್ಮಾನಿಸಲಾಗುತ್ತಿದೆ ಎಂದರು.

ಹುಬ್ಬಳ್ಳಿಯ ಕೆ.ಎಲ್.ಇ. ತಾಂತ್ರಿಕ ವಿಶ್ವವಿದ್ಯಾಲಯದ ಸಹ ಕುಲಪತಿ ಅಶೋಕ್ ಶೆಟ್ಟರ, ಶಾಸಕ ಮಹೇಶ್ ಟೆಂಗಿನಕಾಯಿ, ಮಾಜಿ ಸಂಸದ ರಮೇಶ ಕತ್ತಿ, ರಾಜ್ಯ ಬಣಜಿಗ ಸಮಾಜದ ಅಧ್ಯಕ್ಷ ಮಲ್ಲಿಕಾರ್ಜುನ ರೂಢಗಿ, ರಾಜ್ಯ ಬಣಜಿಗ ಸಮಾಜದ ಕಾರ್ಯದರ್ಶಿ ಶಿವಾನಂದ ಬಿದರಿ ಅತಿಥಿಗಳಾಗಿ ಭಾಗವಹಿಸುವರು ಎಂದು ತಿಳಿಸಿದರು.

ಈ ವೇಳೆ ಎಸ್ಸೆಸ್ಸೆಲ್ಸಿ ಹಾಗೂ ಪಿಯುಸಿ ಯಲ್ಲಿ ಹೆಚ್ಚು ಅಂಕ ಪಡೆದ ಸಮಾಜದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಗುವುದು, ಸಮಾಜದಿಂದ ಯುವಪ್ರತಿಭೆಗಳು ಕೇವಲ ಉದ್ಯೋಗಕ್ಕಾಗಿ ಶಿಕ್ಷಣ ಪಡೆಯುವ ಬದಲು ಮೊದಲಿನಿಂದ ಬಣಜಿಗ ಸಮಾಜದ ವ್ಯಕ್ತಿಗಳು ವ್ಯವಹಾರ ಮಾಡಿಕೊಂಡು ಬಂದಿರುವುದರಿAದ ಸ್ವಂತ ಉದ್ಯಮದಾರರಾಗಿರುವ ನಿಟ್ಟಿನಲ್ಲಿ ಸಮಾಜದ ಯುವಕರ ವ್ಯವಹಾರದಲ್ಲಿ ಹಾಗೂ ಮೇಕ್ ಇನ್ ಇಂಡಿಯಾ ಬಗ್ಗೆ ಹೆಚ್ಚು ಒತ್ತುಕೊಟ್ಟು ಕೈಗಾರಿಕೆಗಳನ್ನು ಪ್ರಾರಂಭಿಸಿರುವ ಸಮುದಾಯ ಯುವ ಪ್ರತಿಭೆಗಳನ್ನು ಈ ವೇಳೆ ಗೌರವಿಸಲಾಗುವುದು ಎಂದರು.

ಸ್ವAತ ಉದ್ಯೋಗಗಳ ಬಗ್ಗೆ ಆಸಕ್ತಿಹೊಂದಿ ಕೇಂದ್ರ ಹಾಗೂ ರಾಜ್ಯ ಸರ್ಕಾರದಿಂದ ಸವಲತ್ತು ಪಡೆದು ಇತರರಿಗೆ ಉದ್ಯೋಗ ನೀಡುವಂತಾಗಬೇಕು. ಇದಕ್ಕೆ ಸಮಾಜದಿಂದ ಬೇಕಾದ ಸಹಕಾರ, ಸಲಹೆ ನೀಡುತ್ತೇವೆ ಎಂದು ಅವರು ತಿಳಿಸಿದರು.

ಬಣಜಿಗ ಸಮಾಜದ ಯಾವುದೇ ವಿದ್ಯಾರ್ಥಿ/ವಿದ್ಯಾರ್ಥಿನಿಯರಿಗೆ ಶೈಕ್ಷಣಿಕವಾಗಿ ಸಮಾಜದಿಂದ ಸಲಹೆ, ಸಹಕಾರ ಹಾಗೂ ಮಾರ್ಗದರ್ಶನ ನೀಡಲಾಗುವುದು ಎಂದು ಅವರು ಹೇಳಿದರು.

ಮುಖಂಡರಾದ ಮಲ್ಲಪ್ಪಣ್ಣ ಆರಬ್ಬಿ, ವಿಶ್ವನಾಥ ವೈಜಾಪುರ, ಮುರುಗೇಶ್ ಶಿವನಗುತ್ತಿ, ಬಸವರಾಜ ಸೊಬರದ ಮತ್ತಿತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net