ಮೈಸೂರು: ನಿವೃತ್ತ ಪೊಲೀಸ್ ಅಧಿಕಾರಿಗಳ ಸಂಘದ ವಾರ್ಷಿಕ ಸಭೆ ಜು.29ರಂದು ಆಯೋಜಿಸಲಾಗಿದೆ.
ಲಲಿತಮಹಲ್ ರಸ್ತೆಯಲ್ಲಿರುವ ಪೊಲೀಸ್ ಭವನದಲ್ಲಿ ಅಂದು ಬೆಳಗ್ಗೆ 10ಕ್ಕೆ ಸಭೆ ಆರಂಭಗೊಳ್ಳಲಿದ್ದು, ಪೊಲೀಸ್ ಕಮೀಷನರ್ ಬಿ.ರಮೇಶ್ ಬಾನೋತ್ ಅವರು ಉದ್ಘಾಟಿಸಲಿದ್ದಾರೆ. ಸಂಘದ ಅಧ್ಯಕ್ಷ ಎಂ.ಸಿ.ಮರಿಸ್ವಾಮಿ ಅಧ್ಯಕ್ಷತೆ ವಹಿಸಲಿದ್ದು, ನಿವೃತ್ತ ಡಿಸಿಪಿ ಬಿ.ಎಂ.ನಾಣಯ್ಯ ಇತರರು ಭಾಗವಹಿಸಲಿದ್ದಾರೆ ಎಂದು ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.