ಜೂ.28 ರಂದು ಬೃಹತ್ ಪ್ರತಿರೋಧ ಸಮಾವೇಶ

Published on

ಚಾಮರಾಜನಗರ: ಕೇಂದ್ರ ಸರ್ಕಾರದ ನೂತನ ವಕ್ಫ ತಿದ್ದುಪಡಿ ಕಾಯ್ದೆಯನ್ನು ವಿರೋಧಿಸಿ ಜೂ.28 ರಂದು ಬೃಹತ್ ಪ್ರತಿರೋಧ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಮುಸ್ಲಿಂ ಒಕ್ಕೂಟದ ಸದಸ್ಯ ಅಬ್ರಾರ್ ಅಹಮ್ಮದ್ ತಿಳಿಸಿದರು.

ನಗರದ ಡಾ.ಬಿ.ಆರ್.ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣದ ಸಮೀಪದಲ್ಲಿರುವ ಈದ್ಗಾ ಮೈದಾನದಲ್ಲಿ ಮಧ್ಯಾಹ್ನ 2.30 ಗಂಟೆಗೆ ಪ್ರಾರಂಭವಾಗುವ ಸಮಾವೇಶದಲ್ಲಿ ಸಂಸದ ಸುನೀಲ್ ಬೋಸ್, ಜಿಲ್ಲೆಯ ಶಾಸಕರಾದ ಸಿ.ಪುಟ್ಟರಂಗಶೆಟ್ಟಿ, ಎ.ಆರ್.ಕೃಷ್ಣಮೂರ್ತಿ, ಎಚ್.ಎಂ.ಗಣೇಶ್ ಪ್ರಸಾದ್, ಬೆಂಗಳೂರಿನ ಶಿವಾಜಿನಗರ ಕ್ಷೇತ್ರದ ಶಾಸಕ ರಿಜ್ವಾನ್ ಹರ್ಷದ್, ಕಾಂಗ್ರೆಸ್ ಮುಖಂಡ ಲಕ್ಷ್ಮಣ್, ಎಸ್‌ಡಿಪಿಐ ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್, ಖ್ಯಾತ ಅಂಕಣಕಾರ ಶಿವಸುಂದರ್, ಜಿಲ್ಲಾ ಮುಸ್ಲಿಂ ಮುಖಂಡರು, ದಲಿತ ಮತ್ತು ಪ್ರಗತಿಪರ ಸಂಘಟನೆಗಳ ಮುಖಂಡರು ಹಾಗೂ ಕಾರ್ಯಕರ್ತರು ಭಾಗವಹಿಸಲಿದ್ದಾರೆ ಎಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ನೂತ ವಕ್ಫ ತಿದ್ದುಪಡಿ ಕಾಯ್ದೆಯನ್ನು ಜಾರಿಗೆ ತಂದಿರುವುದು ಸಂವಿಧಾನ ವಿರೋಧಿಯಾಗಿದೆ. ಈ ಕರಾಳ ವಕ್ಫ ತಿದ್ದುಪಡಿ ಕಾಯ್ದೆ ಸಂವಿಧಾನ ನೀಡಿರುವ ಮೂಲಭೂತ ಹಕ್ಕುಗಳನ್ನು ಕಸಿದುಕೊಂಡಿದೆ. ಈ ಕಾಯ್ದೆಯನ್ನು ವಿರೋಧಿಸಿ ಆಯೋಜಿಸಿರುವ ಸಮಾವೇಶಕ್ಕೆ ಪ್ರಜ್ಞಾವಂತ ಜನರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಮನವಿ ಮಾಡಿದರು.

ಗೋಷ್ಠಿಯಲ್ಲಿ ಮದೀನಾ ಮಸೀದಿಯ ಅಧ್ಯಕ್ಷ ನಯೀಮ್ ಉಲ್ ಹಕ್, ಧರ್ಮ ಗುರು ಮೌಲಾನಾ ಅಬ್ದುಲ್ ಖಾದರ್, ಮುಖಂಡ ಸೈಯದ್ ರಫಿ, ಮಹಮ್ಮದ್ ಅಸ್ಗರ್ (ಮುನ್ನಾ), ಇಮ್ರಾನ್ ಅಹಮ್ಮದ್ ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net