

ಹಾಸನ: ದಲಿತ ಚಳುವಳಿಗೆ 50 ವರ್ಷದ ಸುವರ್ಣ ಮಹೋತ್ಸವದ ಅಂಗವಾಗಿ ಹಾಗೂ ಪ್ರೊ.ಬಿ.ಕೃಷ್ಣಪ್ಪ ಅವರ ಹುಟ್ಟುಹಬ್ಬದ ಅಂಗವಾಗಿ ಜೂ.29 ರಂದು ನಗರದ ಅಂಬೇಡ್ಕರ್ ಭವನದಲ್ಲಿ ರಾಜ್ಯ ಮಟ್ಟದ ಸ್ವಾಭಿಮಾನಿ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ಸಂಘಟನೆ ರಾಜ್ಯ ಸಂಘಟನಾ ಸಂಚಾಲಕ ಸೋಮಶೇಖರ್ ತಿಳಿಸಿದರು.
ದಲಿತರ ಹಕ್ಕುಗಳ ರಕ್ಷಣೆ ಹಾಗೂ ಹಿತಾಸಕ್ತಿಗಾಗಿ ಹುಟ್ಟಿಕೊಂಡ ದಲಿತ ಚಳುವಳಿ ಆರಂಭವಾಗಿ ಇಂದಿಗೆ 50 ವರ್ಷ ಪೂರ್ಣಗೊಂಡಿದ್ದು ಕಳೆದ ಐವತ್ತು ವರ್ಷಗಳಿಂದ ದಲಿತರ ಕ್ಷೇಮಾಭಿವೃದ್ಧಿಗೆ ಚಳುವಳಿಗಳ ಮೂಲಕ ಅನೇಕ ಹೋರಾಟಗಳು ನಡೆದಿವೆ.ಚಳುವಳಿ ಇಲ್ಲದೆ ಇದ್ದರೆ ಇಂದಿಗೂ ದಲಿತರು ಸಾಮಾಜಿಕ ನ್ಯಾಯ ಪಡೆಯಲು ಸಾಧ್ಯ ಇರಲಿಲ್ಲ, ಚಳುವಳಿಗಳ ಮೂಲಕ ದಲಿತ ಜನಾಂಗದ ಅನೇಕ ಸಮಸ್ಯೆಗಳ ಬಗ್ಗೆ ಹೋರಾಟ ಗಳು ನಡೆದಿವೆ, ಜೊತೆಗೆ ಇಂತಹ ಎಲ್ಲಾ ಹೋರಾಟಗಳಲ್ಲಿ ನಾಯಕತ್ವ ವಹಿಸಿಕೊಂಡು ಯಶಸ್ವಿ ಗೊಳಿಸಿ ದಲಿತ ನಾಯಕ ಎಂದೇ ಖ್ಯಾತಿ ಪಡೆದುಕೊಂಡಿರುವ ಪ್ರೊ. ಬಿ. ಕೃಷ್ಣಪ್ಪ ಅವರ ಜನ್ಮ ದಿನಾಚರಣೆಯನ್ನು ಇದೇ ಕಾರ್ಯಕ್ರಮದಲ್ಲಿ ಆಯೋಜಿಸಲಾಗಿದೆ ಗುರುವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.
ಕಾರ್ಯಕ್ರಮದ ಉದ್ಘಾಟನೆಯನ್ನು ಸಹಕಾರಿ ಸಚಿವರು ಹಾಗೂ ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಕೆ. ಎನ್ ರಾಜಣ್ಣ ನೆರವೇರಿಸಲಿದ್ದು, ಸಮಾಜ ಕಲ್ಯಾಣ ಸಚಿವ ಡಾ. ಎಚ್.ಸಿ ಮಹದೇವಪ್ಪ ಅವರು ಡಾ. ಬಾಬಾಸಾಹೇಬ್ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಲಿದ್ದಾರೆ.ನೂತನ ಸಂಸದ ಶ್ರೇಯಸ್ ಪಟೇಲ್ ಅವರು ಪ್ರೊ. ಬಿ. ಕೃಷ್ಣಪ್ಪ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಲಿದ್ದಾರೆ, ಜಿಲ್ಲೆಯ ಎಲ್ಲಾ ದಲಿತ ಸಮುದಾಯದ ಮುಖಂಡರು ಹಾಗೂ ಸಂಘಟನೆಗಳ ಮುಖಂಡರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮ ಯಶಸ್ವಿ ಗೊಳಿಸಬೇಕು ಇದು ಎಂದು ಮನವಿ ಮಾಡಿದರು
ಪತ್ರಿಕಾಗೋಷ್ಠಿಯಲ್ಲಿ ದಲಿತ ಮುಖಂಡರಾದ ಎಚ್.ಕೆ ಸಂದೇಶ್, ರಾಜಶೇಖರ್, ಚಂದ್ರಣ್ಣ, ವಾಸು, ವಿಜಯ್ ಕುಮಾರ್