ಜೂ.೨೧ ರಂದು ಅಂತರರಾಷ್ಟ್ರೀಯ ಯೋಗ ದಿನಾಚರಣೆ

bkt-15-2
ಬಾಗಲಕೋಟೆ ಜಿಲ್ಲಾಽಕಾರಿಗಳ ಸಭಾಂಗಣದಲ್ಲಿ ಗುರುವಾರ ಅಪರ ಜಿಲ್ಲಾಽಕಾರಿ ರಮೇಶ ಕಳಸದ ಅಧ್ಯಕ್ಷತೆಯಲ್ಲಿ ಯೋಗ ದಿನಾಚರಣೆ ಕುರಿತು ಪೂರ್ವಭಾವಿ ಸಭೆ ಜರುಗಿತು.
Published on

ಬಾಗಲಕೋಟೆ: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಆಯುಷ ಇಲಾಖೆ ಸಹಯೋಗದಲ್ಲಿ ಜೂ.೨೧ ಅಂತರರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ ಎಂದು ಅಪರ ಜಿಲ್ಲಾಽಕಾರಿ ರಮೇಶ ಕಳಸದ ಹೇಳಿದರು.

ಜಿಲ್ಲಾಽಕಾರಿಗಳ ಸಭಾಂಗಣದಲ್ಲಿ ಗುರುವಾರ ಈ ಕುರಿತು ಜರುಗಿದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಅಂದು ಬೆಳಗ್ಗೆ ೬ ರಿಂದ ೮ ಗಂಟೆವರೆಗೆ ಯೋಗ ಪ್ರಾತ್ಯಕ್ಷಿಕೆ ಜರುಗಲಿದೆ. ಸೇವಾದಳದ ಮಹೇಶ ಪತ್ತಾರ ಯೋಗ ತರಬೇತಿ ನೀಡಲಿದ್ದಾರೆ. ಸದರಿ ಕಾರ್ಯಕ್ರಮದಲ್ಲಿ ಯೋಗ ನಿರತ ಸಂಘ ಸಂಸ್ಥೆಗಳು, ಎನ್‌ಸಿಸಿ ಕೆಡೆಟ್, ಹೋಮ್‌ಗಾರ್ಡ್ಸ, ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯ, ಎನ್‌ವೈಕೆ ಸೇವಾದಳದವರು ಪಾಲ್ಗೊಳ್ಳಲಿದ್ದಾರೆ. ಜಿಲ್ಲಾ ಮಟ್ಟದ ಎಲ್ಲ ಅಽಕಾರಿ, ಸಿಬ್ಬಂದಿಗಳು ಹಾಗೂ ಸಾರ್ವಜನಿಕರು ಪಾಲ್ಗೊಳ್ಳಬೇಕು ಎಂದು ಜಿಲ್ಲಾಽಕಾರಿ ಮನವಿ ಮಾಡಿದರು.

ಜಿಲ್ಲಾ ಕ್ರೀಡಾಂಗಣ ವ್ಯಾಪ್ತಿಯಲ್ಲಿ ಬರುವ ಶಾಲೆಯ ಮಕ್ಕಳನ್ನು ಈ ಯೋಗ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವಂತೆ ಮಾಡಲು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರಿಗೆ ತಿಳಿಸಲಾಯಿತು. ನವನಗರದ ವ್ಯಾಪ್ತಿಯ ವಿವಿಧ ಇಲಾಖೆಯಡಿಯಲ್ಲಿರುವ ವಸತಿ ಶಾಲೆಗಳ ಮಕ್ಕಳೂ ಸಹ ಯೋಗ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವಂತೆ ಮಾಡಬೇಕು ಎಂದು ಸಂಬಂಽಸಿದ ಅಽಕಾರಿಗಳಿಗೆ ಸೂಚಿಸಲಾಯಿತು. ಆಶಾ, ಅಂಗನವಾಡಿ ಕಾರ್ಯಕರ್ತೆಯರು ಪಾಲ್ಗೊಳ್ಳುವಂತೆ ಮಾಡಬೇಕು ಎಂದು ಅಪರ ಜಿಲ್ಲಾಽಕಾರಿಗಳು ತಿಳಿಸಿದರು.

ಕಾರ್ಯಕ್ರಮಕ್ಕೆ ಸಂಬಂಽಸಿದಂತೆ ಪ್ರೊಟೋಕಾಲ್ ಪ್ರಕಾರ ಆಮಂತ್ರಣ ಪತ್ರಿಕೆ ಮುದ್ರಣ ಮಾಡಲು ತಿಳಿಸಲಾಯಿತು. ಜಿಲ್ಲಾ ಕ್ರೀಡಾಂಗಣವನ್ನು ಸ್ವಚ್ಛವಾಗಿಡುವಂತೆ ನಗರಸಭೆ ಆಯುಕ್ತರಿಗೆ ತಿಳಿಸಿದರು. ಯೋಗ ಕಾರ್ಯಕ್ರಮದಲ್ಲಿ ಭಾಗವಹಿಸುವ ಎಲ್ಲರೂ ಯೋಗ ಮಾಡಲು ಸಡಿಲು ಬಿಳಿ ಬಣ್ಣದ ಬಟ್ಟೆ, ಟ್ಯಾಶೂಟ್ ಹಾಗೂ ಹಾಸಿಗೆ ತರುವಂತೆ ಸಭೆಯಲ್ಲಿ ತಿಳಿಸಲಾಯಿತು. ಕಾರ್ಯಕ್ರಮಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಮಾಡಿ ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ಅಪರ ಜಿಲ್ಲಾಽಕಾರಿಗಳು ಕರೆ ನೀಡಿದರು. ಈ ಸಂದರ್ಭದಲ್ಲಿ ಪ್ರಚಾರದ ಕರಪತ್ರ ಹಾಗೂ ಪೋಸ್ಟರಗಳನ್ನು ಬಿಡುಗಡೆ ಮಾಡಲಾಯಿತು.

ಜಿಲ್ಲಾ ಆಯುಷ್ ಅಽಕಾರಿ ಅಕ್ಕಮಹಾದೇವಿ ಗಾಣಿಗೇರ ಕಾರ್ಯಕ್ರಮದ ರೂಪು-ರೇಶೆಗಳ ಬಗ್ಗೆ ವಿವರಿಸಿದರು. ಸಭೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಽಕಾರಿ ಡಾ.ಜಯಶ್ರೀ ಎಮ್ಮಿ, ಜಿಲ್ಲಾ ಪಂಚಾಯಿತಿ ಯೋಜನಾಽಕಾರಿ ಸಿ.ಆರ್.ಮುಂಡರಗಿ, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಕೃಷ್ಣಪ್ಪ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ನಂದಾ ಹನಮರಟ್ಟಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕಿ ಅಕ್ಕಮಹಾದೇವಿ ಕೆ.ಎಚ್, ತಹಸೀಲ್ದಾರ ಅಮರೇಶ ಪಮ್ಮಾರ, ಆಯುಷ ಇಲಾಖೆಯ ಹಿರಿಯ ವೈದ್ಯಾಽಕಾರಿ ಸಿ.ಪಿ.ರಕ್ಕಸಗಿ ಸೇರಿದಂತೆ ವಿವಿಧ ಇಲಾಖೆಯ ಅಽಕಾರಿಗಳು, ವಿವಿಧ ಸಂಘ ಸಂಸ್ಥೆಗಳ ಪದಾಽಕಾರಿಗಳು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net