ಜೂ.೨೨ ರಂದು ಸರ್ಕಾರಿ ನೌಕರ ಸಂಘದಿಂದ ಪ್ರತಿಭಾ ಪುರಸ್ಕಾರ

19BGK05
ಬಾಗಲಕೋಟೆ ನಗರದ ಪ್ರೆಸ್‌ಕ್ಲಬ್‌ನಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಮಲ್ಲಿಕಾರ್ಜುನ ಬಳ್ಳಾರಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಸಂಘದ ಪದಾಽಕಾರಿಗಳಾದ ಸಂಜೀವ ಸತ್ಯರಡ್ಡಿ , ಗೋಪಾಲ ನೀಲನಾಯಕ, ವಿಠ್ಠಲ ವಾಲಿಕಾರ, ಸುರೇಶ ಇಂಜಗನೇರಿ, ಅನಿಲಕುಮಾರ ಇದ್ದರು.
Published on

ಬಾಗಲಕೋಟೆ: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಘಟಕದಿಂದ ೨೦೨೩-೨೪ನೇ ಸಾಲಿನ ಸದಸ್ಯರ ವಾರ್ಷಿಕ ಮಹಾಸಭೆ, ನೌಕರರ ಮಕ್ಕಳ ಪ್ರತಿಭಾ ಪುರಸ್ಕಾರ, ನೂತನವಾಗಿನ ನಿರ್ಮಿಸಿದ ಮಳಿಗೆಗಳ ಉದ್ಘಾಟನೆ ಹಾಗೂ ರಾಜ್ಯ, ಕೇಂದ್ರ ಸರ್ಕಾರಿ ನೌಕರರ ಮತ್ತು ಖಾಸಗಿ ನೌಕರರ ಗೃಹ ನಿರ್ಮಾಣ ಸಹಕಾರಿ ಸಂಘದ ಸರ್ವ ಸದಸ್ಯರ ವಾರ್ಷಿಕ ಮಹಾಸಭೆಯ ಜೂ.೨೨ ರಂದು ಬೆಳಿಗ್ಗೆ ೧೦.೩೦ ಗಂಟೆಗೆ ನವನಗರದ ಕಲಾಭವನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಮಲ್ಲಿಕಾರ್ಜುನ ಬಳ್ಳಾರಿ ಹೇಳಿದರು.

ನಗರದ ಪ್ರೆಸ್‌ಕ್ಲಬ್‌ನಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದಾಜು ಮೂರು ಸಾವಿರಕ್ಕಿಂತ ಹೆಚ್ಚು ನೌಕರರು ಪಾಲ್ಗೊಳ್ಳಲಿದ್ದು, ಜಿಲ್ಲೆಯ ೮೪ ಎಸ್ಸೆಸ್ಸೆಲ್ಸಿ, ೧೬೬ ಪಿಯುಸಿಯಲ್ಲಿ ಶೇ.೯೦ ರಷ್ಟು ಫಲಿತಾಂಶ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮಾಡಲಾಗುವುದು. ಅಂದಿನ ಕಾರ್ಯಕ್ರಮಕ್ಕೆ ಸರ್ಕಾರಿ ನೌಕರರು, ಖಾಸಗಿ ನೌಕರರ ಗೃಹ ನಿರ್ಮಾಣ ಸಹಕಾರಿ ಸಂಘದ ಸದಸ್ಯರು ಭಾಗವಹಿಸಬೇಕು ಎಂದು ಹೇಳಿದರು.

ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ .ತಿಮ್ಮಾಪುರ ಉದ್ಘಾಟಿಸಲಿದ್ದಾರೆ. ಪ್ರತಿಭಾ ಪುರಸ್ಕಾರ ವಿತರಣೆಯನ್ನು ಶಾಸಕ ಎಚ್.ವೈ.ಮೇಟಿ ಮಾಡಲಿದ್ದಾರೆ. ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿ ಮಳಿಗೆ ಉದ್ಘಾಟಿಸಲಿದ್ದಾರೆ ಎಂದರು.

ವಿಧಾನ ಪರಿಷತ್ ಸದಸ್ಯ ಪ್ರಕಾಶ ಹುಕ್ಕೇರಿ, ಶಾಸಕರಾದ ಜೆ.ಟಿ.ಪಾಟೀಲ, ವಿಜಯಾನಂದ ಕಾಶಪ್ಪನವರ್, ಸಿದ್ದು ಸವದಿ, ಜಗದೀಶ ಗುಡಗುಂಟಿ, ಭೀಮಸೇನ ಚಿಮ್ಮನಕಟ್ಟಿ, ಸಂಸದ ಪಿ.ಸಿ. ಗದ್ದಿಗೌಡರ, ರಾಜ್ಯಸಭಾ ಸದಸ್ಯ ನಾರಾಯಣಸಾ ಭಾಂಡಗೆ, ವಿಧಾನ ಪರಿಷತ್ ಸದಸ್ಯರಾದ ಹಣಮಂತ ನಿರಾಣಿ, ಸುನೀಲಗೌಡ ಪಾಟೀಲ, ಪಿ.ಎಚ್.ಪೂಜಾರ, ಉಮಾಶ್ರೀ, ಜಿಲ್ಲಾಧಿಕಾರಿ ಜಾನಕಿ ಕೆ.ಎಂ., ಜಿ.ಪಂ.ಸಿಇಒ ಶಶಿಧರ ಕುರೇರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಮರನಾಥ ರೆಡ್ಡಿ ಆಗಮಿಸುವರು ಎಂದರು.

ಸಂಘದ ಪದಾಧಿಕಾರಿಗಳಾದ ಸಂಜೀವ ಸತ್ಯರಡ್ಡಿ , ಗೋಪಾಲ ನೀಲನಾಯಕ, ವಿಠ್ಠಲ ವಾಲಿಕಾರ, ಸುರೇಶ ಇಂಜಗನೇರಿ, ಅನಿಲಕುಮಾರ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net