ಜೂಜಾಟ ಆಡುತ್ತಿದ್ದವರ ಮೇಲೆ ದಾಳಿ

Published on

ಚಾಮರಾಜನಗರ: ತಾಲೂಕಿನ ಹೊಸ ಅಣಗಳ್ಳಿ ಗ್ರಾಮದ ಸಾರ್ವಜನಿಕ ಸ್ಥಳದಲ್ಲಿ ಜೂಜಾಟ ಆಡುತ್ತಿದವರ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ.

ಗ್ರಾಮದ ರಾಜಮ್ಮ ಎಂಬುವವರ ಮನೆಯ ಬಳಿ ಇರುವ ಸಾರ್ವಜನಿಕ ಸ್ಥಳದಲ್ಲಿ ಅಣಗಳ್ಳಿ ಗ್ರಾಮದ ಮಲ್ಲಿಕಾರ್ಜುನ್, ಪ್ರಸಾದ್ ಮೂರ್ತಿ ಹಾಗೂ ಮಹೇಶ್ ಎಂಬುವವರು ಇಸ್ಪೀಟ್ ಜೂಜಾಟ ಆಡುತ್ತಿದ್ದರು. ಖಚಿತ ಮಾಹಿತಿಯ ಮೇರೆಗೆ ಕೊಳ್ಳೇಗಾಲ ಪಟ್ಟಣ ಪೊಲೀಸ್ ಠಾಣೆಯ ಆರಕ್ಷಕ ಉಪ ನಿರೀಕ್ಷಕರಾದ ಬಿ.ವಿ.ವರ್ಷಾ ಅವರು ಸಿಬ್ಬಂದಿಗಳೊಂದಿಗೆ ದಾಳಿ ನಡೆಸಿ ಜೂಜಾಡುತ್ತಿದ್ದವರನ್ನು ಬಂಧಿಸಿ, ಜೂಜಾಟಕ್ಕೆ ಇಟ್ಟಿದ್ದ 1590 ರೂ, ಹಣವನ್ನು ವಶಪಡಿಸಿಕೊಂಡಿದ್ದಾರೆ.

ಈ ಸಂಬಂಧ ಕೊಳ್ಳೇಗಾಲ ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net