ಜೂಜಾಡುತ್ತಿದ್ದವರ ಮೇಲೆ ದಾಳಿ

Published on

ಚಾಮರಾಜನಗರ: ಸಾರ್ವಜನಿಕ ಸ್ಥಳದಲ್ಲಿ ಜೂಜಾಡುತ್ತಿದ್ದವರ ಮೇಲೆ ಮಂಗಳವಾರ ಪೋಲೀಸರು ದಾಳಿ ನಡೆಸಿದ್ದು, ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.

ತಾಲೂಕಿನ ಮಾದಾಪುರದಿಂದ ಹಂಡರಕಳ್ಳಿ ಗ್ರಾಮಕ್ಕೆ ಹೋಗುವ ಮುಖ್ಯರಸ್ತೆಯ ಬಳಿ ಸಾರ್ವಜನಿಕ ಸ್ಥಳದಲ್ಲಿ ಅಕ್ರಮವಾಗಿ ಜೂಜಾಟ ಆಡುತ್ತಿದ್ದವರ ಮೇಲೆ ಪೊಲೀಸರು ದಾಳಿ ನಡೆಸಿದ್ದು, ಸುಮಾರು 30,000 ರೂ, ಹಣವನ್ನು ವಶಪಡಿಸಿಕೊಂಡಿದ್ದಾರೆ. ಈ ಸಂಬಂಧ ಪೂರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net