ಜೂಜಾಡುತ್ತಿದ್ದವರು ಪೊಲೀಸ್ ವಶಕ್ಕೆ

Published on

ಚಾಮರಾಜನಗರ: ತಾಲೂಕಿನ ಹೊಸ ಅಣಗಳ್ಳಿ ಗ್ರಾಮದ ಸಾರ್ವಜನಿಕ ಸ್ಥಳದಲ್ಲಿ ಜೂಜಾಡುತ್ತಿದವರ ಮೇಲೆ ಪೊಲೀಸರು ದಾಳಿ ನಡೆಸಿದರು.

ಗ್ರಾಮದ ರಾಜಮ್ಮ ಎಂಬುವವರ ಮನೆಯ ಬಳಿ ಇರುವ ಸಾರ್ವಜನಿಕ ಸ್ಥಳದಲ್ಲಿ ಅಣಗಳ್ಳಿ ಗ್ರಾಮದ ಮಲ್ಲಿಕಾರ್ಜುನ್, ಪ್ರಸಾದ್ ಮೂರ್ತಿ ಹಾಗೂ ಮಹೇಶ್ ಇಸ್ಪೀಟ್ ಆಡುತ್ತಿದ್ದರು. ಖಚಿತ ಮಾಹಿತಿಯ ಮೇರೆಗೆ ಕೊಳ್ಳೇಗಾಲ ಪಟ್ಟಣ ಪೊಲೀಸ್ ಠಾಣೆಯ ಆರಕ್ಷಕ ಉಪ ನಿರೀಕ್ಷಕರಾದ ಬಿ.ವಿ.ವರ್ಷಾ ಸಿಬ್ಬಂದಿಯೊಂದಿಗೆ ದಾಳಿ ನಡೆಸಿ ಜೂಜಾಡುತ್ತಿದ್ದವರನ್ನು ಬಂಧಿಸಿ, ಜೂಜಾಟಕ್ಕೆ ಇಟ್ಟಿದ್ದ 1,590 ರೂ. ವಶಪಡಿಸಿಕೊಂಡಿದ್ದಾರೆ. ಕೊಳ್ಳೇಗಾಲ ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net