ಜೆಎನ್ ಯು ದಾಂದಲೆ ಖಂಡಿಸಿ ಎಬಿವಿಪಿ ಪ್ರತಿಭಟನೆ

IMG-20200107-WA0013.jpg
Published on

ಹಾಸನ: ಜೆಎನ್ ಯು ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿಗಳ ಮೇಲಿನ ಹಲ್ಲೆ ಖಂಡಿಸಿ ಎಬಿವಿಪಿ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ಶುಲ್ಕ ಹೆಚ್ಚಳ ವಿರೋಧಿಸಿ ಶಾಂತಿಯುತ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ಮುಸುಕುಧಾರಿಗಳು ಹಲ್ಲೆ ನಡೆಸಿದ್ದಾರೆ.‌ ದೆಹಲಿ ಸರ್ಕಾರ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸುತ್ತಿಲ್ಲ ಎಂದು ಆರೋಪಿಸಿದರು.

ಘಟನೆಯನ್ನು ಎಬಿವಿಪಿ ಮೇಲೆ ಹೊರಿಸಲು ವಾಮ ಪಂಥೀಯರು ಪ್ರಯತ್ನಿಸುತ್ತಿದ್ದಾರೆ.

ದೇಶದ್ರೋಹಿಗಳು ಮುಖಕ್ಕೆ ಬಟ್ಟೆ ಕಟ್ಟಿಕೊಂಡು ಬಂದು ಹಲ್ಲೆ ನಡೆಸಿದ್ದಾರೆ. ಎಬಿವಿಪಿ ಮೇಲೆ ತಪ್ಪು ಹೊರಿಸುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net