

ಬೆಳಗಾವಿ: ಕೆಎಲ್‌ಇ ಸಂಸ್ಥೆಯ ಜೆಎನ್‌ಎಂಸಿ ಉದ್ಯಾನವನದಲ್ಲಿ ಶುಕ್ರವಾರ ನನ್ನ ನಾಡು - ನನ್ನ ಹಾಡು ಅಭಿಯಾನದ ಕೋಟಿ ಕಂಠ ಗಾಯನ ಸಮೂಹ ನಾಡಗೀತೆ ಕಾರ್ಯಕ್ರಮ ಯಶಸ್ವಿಯಾಗಿ ಜರುಗಿತು.
ಅಭಿಯಾನದಲ್ಲಿ ಕುವೆಂಪು ರಚಿಸಿದ ನಾಡಗೀತೆ ಹಾಗೂ ಬಾರಿಸು ಕನ್ನಡ ಡಿಂಡಿಂವಾ, ಹುಯಿಲಗೋಳ ನಾರಾಯಣರಾಯರ ಉದಯವಾಗಲೀ ನಮ್ಮ ಚೆಲುವ ಕನ್ನಡ ನಾಡು, ಡಾ. ಡಿ.ಎಸ್. ಕರ್ಕಿ ಅವರ ಹಚ್ಚೇವು ಕನ್ನಡದ ದೀಪ, ನಾಡೋಜ ಡಾ. ಚೆನ್ನವೀರ ಕಣವಿ ಅವರ ವಿಶ್ವವಿನೂತನ ವಿದ್ಯಾಚೇತನ, ಡಾ. ಹಂಸಲೇಖಾ ಅವರ ಹುಟ್ಟಿದರೆ ಕನ್ನಡ ನಾಡಲ್ಲಿ ಹುಟ್ಟಬೇಕು ಎಂಬ ಹಾಡುಗಳನ್ನು ಹಾಡುವ ಮೂಲಕ ನೆರೆದಿದ್ದ ಪ್ರೇಕ್ಷಕರನ್ನು ರೋಮಾಂಚನಗೊಳಿಸಿದರು.
ಮುಖ್ಯ ಅತಿಥಿಗಳಾಗಿ ಕೆಎಲ್‌ಇ ಸಂಸ್ಥೆಯ ಕಾರ್ಯಾಧ್ಯಕ್ಷ, ಕೆಎಲ್‌ಇ ವಿವಿ ಕುಲಾಧಿಪತಿ ಡಾ. ಪ್ರಭಾಕರ ಕೋರೆ, ಕೆಎಲ್‌ಇ ವಿಶ್ವವಿದ್ಯಾಲಯ ಕುಲಪತಿ ಡಾ. ಎನ್.ಎಸ್.ಮಹಾಂತಶೆಟ್ಟಿ, ಕುಲಸಚಿವ ಡಾ. ವಿ.ಎ. ಕೋಠಿವಾಲೆ, ಕೆಎಲ್‌ಇ ಸಂಸ್ಥೆಯ ಡಾ. ಪ್ರಭಾಕರ ಕೋರೆ ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕ ಡಾ. ಎಂ.ವಿ.ಜಾಲಿ ಭಾಗವಹಿಸಿದ್ದರು. ಯುಎಸ್‌ಎಂ-ಕೆಎಲ್‌ಇ ನಿರ್ದೇಶಕ ಡಾ. ಎಚ್.ಬಿ. ರಾಜಶೇಖರ, ಕೆಎಲ್‌ಇ ಆಸ್ಪತ್ರೆಗಳ ಹೊಸ ಯೋಜನೆಗಳ ನಿರ್ದೇಶಕ ಡಾ. ವಿ.ಡಿ. ಪಾಟೀಲ, ಕೆ.ಎಲ್.ಇ. ವಿವಿ ಎಲ್ಲ ಅಂಗಸಂಸ್ಥೆಗಳ ಶಿಕ್ಷಕರು, ಶಿಕ್ಷಕೇತರ ಸಿಬ್ಬಂದಿ, ವಿದ್ಯಾರ್ಥಿಗಳು ಇತರರಿದ್ದರು.
ಡಾ. ಸ್ನೇಹಾ ರಾಜೂರಿಕರ, ಡಾ. ಸುನಿತಾ ಪಾಟೀಲ, ದುರ್ಗಾ ನಾಡಕರ್ಣಿ, ಜಿತೇಂದ್ರ ಸಾಬಣ್ಣವರ, ಯಾದವೇಂದ್ರ ಪ್ರಜಾರಿ, ರಾಹುಲ ಮಂಡೂಲ್ಕರ, ಸಂಗೀತ ಮಹಾವಿದ್ಯಾಲಯದ ವಿದ್ಯಾರ್ಥಿಗಳು, ಕನ್ನಡ ಬಳಗದ ವಿದ್ಯಾರ್ಥಿಗಳು, ಕೆಎಲ್‌ಇ ಹಂಚಿನಾಳ ಪ್ರಾಥಮಿಕ ಶಾಲೆ, ಜಿಎ ಹೈಸ್ಕೂಲ್ ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿ ವರ್ಗ ಎಂಪಿಎಚ್ ಮಕ್ಕಳು ಸೇರಿ 300ಕ್ಕೂ ಅಧಿಕ ಹಾಡುಗಾರರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.