ವಿಜಯವಾಣಿ ಸುದ್ದಿಜಾಲ ಧಾರವಾಡ.ನಗರದ ವಿದ್ಯಾಗಿರಿ ಜೆಎಸ್‌ಎಸ್ ಕನ್ನಡ ಮಾಧ್ಯಮ ಪ್ರೌಢಶಾಲೆಯ ಎಸ್‌ಎಸ್‌ಎಲ್‌ಸಿ ಫಲಿತಾಂಶ ಶೇ. 74.55 ಆಗಿದೆ. ಸಹನಾ ರೊಟ್ಟಿಮಠ ಶೇ. 96.64 ಅಂಕ ಪಡೆದು ಶಾಲೆಗೆ ಪ್ರಥಮ ಸ್ಥಾನ ಪಡೆದಿದ್ದಾಳೆ. ದೀಪಾ ಗಂಡಗುದರಿ ಶೇ. 92.64 ದ್ವಿತೀಯ ಹಾಗೂ ರಾಹುಲ ಪೇಟಕರ ಶೇ. 88.96 ಅಂಕ ಗಳಿಸಿ ತೃತೀಯ ಸ್ಥಾನ ಪಡೆದಿದ್ದಾನೆ.