ಜೆಎಸ್‌ಎಸ್ ಕಾಲೇಜಿನಲ್ಲಿ ಆರೋಗ್ಯ ಉಚಿತ ತಪಾಸಣೆ

13gpt1
Published on


ಚಾಮರಾಜನಗರ : ಗುಂಡ್ಲುಪೇಟೆ ಪಟ್ಟಣದ ಜೆಎಸ್‌ಎಸ್ ಕಾಲೇಜಿನಲ್ಲಿ ಭಾನುವಾರ ಉಚಿತ ಆರೋಗ್ಯ ತಪಾಸಣಾ ಶಿಬಿರ ಏರ್ಪಡಿಸಲಾಗಿತ್ತು.
ಶಿಬಿರದಲ್ಲಿ ಹೃದಯ ಸಂಬಂಧಿ ಸಮಸ್ಯೆಗಳು ಕಿವಿ, ಮೂಗು ಮತ್ತು ಗಂಟಲು ತೊಂದರೆಗಳು, ಕಣ್ಣಿನ ತೊಂದರೆ, ರಕ್ತ ದೊತ್ತಡ ಹಾಗೂ ಮಧುಮೇಹ ಮತ್ತಿತರ ರೋಗಗಳಿಗೆ ಸಂಬಂಧಿಸಿದಂತೆ ತಜ್ಞ ವೈದ್ಯರು ರೋಗಿಗಳ ತಪಾಸಣೆ ನಡೆಸಿದರು.


ಗುಂಡ್ಲುಪೇಟೆ ಪಟ್ಟಣ ಹಾಗೂ ತಾಲೂಕಿನ ವಿವಿಧ ಗ್ರಾಮಗಳ 400ಕ್ಕೂ ಹೆಚ್ಚು ಜನರು ಶಿಬಿರಕ್ಕೆ ಆಗಮಿಸಿ ಪರೀಕ್ಷೆ ಮಾಡಿಸಿಕೊಂಡರು. ತಜ್ಞ ವೈದ್ಯರಾದ ಡಾಕ್ಟರ್ ತಿಪ್ಪೇಸ್ವಾಮಿ, ಡಾಕ್ಟರ್ ಪೂರ್ಣಿಮಾ, ಡಾಕ್ಟರ್ ಪ್ರಕಾಶ್, ಜೆಎಸ್‌ಎಸ್ ಪದವಿ ಕಾಲೇಜಿನ ಪ್ರಾಂಶುಪಾಲೆ ಡಾ. ಮಹದೇವಮ್ಮ, ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಎಚ್.ಪಿ. ಬಸವರಾಜಪ್ಪ, ಶಿಬಿರದ ಸಂಚಾಲಕ ಕೀರ್ತಿ ಕುಮಾರ್ ಸೇರಿದಂತೆ ಮೈಸೂರು ಜೆಎಸ್‌ಎಸ್ ಆಸ್ಪತ್ರೆಯ ವೈದ್ಯರು, ಸಿಬ್ಬಂದಿ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net