ಜೆಎಸ್‌ಎಸ್ ಕಾಲೇಜಿನಲ್ಲಿ ಸಾಂಸ್ಕೃತಿಕ ಹಬ್ಬ ಇಂದು

Published on

ಚಾಮರಾಜನಗರ: ಜೆಎಸ್‌ಎಸ್ ಮಹಿಳಾ ಕಾಲೇಜಿನಲ್ಲಿ ಮೇ.6 ರಂದು ಸಾಂಸ್ಕೃತಿಕ ಹಬ್ಬ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಬೆಳಗ್ಗೆ 10 ಗಂಟೆಗೆ ಪ್ರಾರಂಭವಾಗುವ ಸಮಾರಂಭವನ್ನು ಜಿಲ್ಲಾ ಪಂಚಾಯಿತಿ ಸಿಇಓ ಮೋನಾರೋತ್ ಉದ್ಘಾಟಿಸುವರು.

ಚಾಮರಾಜನಗರ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಎಂ.ಆರ್.ಗಂಗಾಧರ್ ಅಧ್ಯಕ್ಷತೆ ವಹಿಸುವರು. ಕುಲಸಚಿವ ಆರ್.ಲೋಕನಾಥ್ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು. ಜೆಎಸ್‌ಎಸ್ ಶಿಕ್ಷಣ ಸಂಸ್ಥೆಗಳ ಸಾರ್ವಜನಿಕ ಸಂಪರ್ಕಾಧಿಕಾರಿ ಆರ್.ಎಂ.ಸ್ವಾಮಿ, ಪ್ರಾಂಶುಪಾಲ ಡಾ.ಎನ್.ಮಹದೇವಸ್ವಾಮಿ, ಪದವಿ ಪೂರ್ವ ಮಹಿಳಾ ಕಾಲೇಜಿನ ಪ್ರಾಂಶುಪಾಲ ದೇವರಾಜಮೂರ್ತಿ ಉಪಸ್ಥಿತರಿರುವರು ಎಂದು ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net