ಜೆಜೆಎಂ ಬಗ್ಗೆ ಮನವರಿಕೆ ಮಾಡಿ

13 YERRISWAMY 07
Published on

ಬಳ್ಳಾರಿ : ಗ್ರಾಮೀಣ ಜನರಿಗೆ ಕುಡಿಯುವ ನೀರನ್ನು ಒದಗಿಸುವ ಈ ಮಹತ್ವಾಕಾಂಕ್ಷಿ ಯೋಜನೆ ಕುರಿತು ಜನರಿಗೆ ಮನವರಿಕೆ ಮಾಡಿಕೊಡಬೇಕಿದೆ ಎಂದು ಜಿಪಂ ಸಿಇಒ ರಾಹುಲ್ ಶರಣಪ್ಪ ಸಂಕನೂರು ಹೇಳಿದರು.
ನಗರದ ಖಾಸಗಿ ಹೋಟೆಲ್ ಸಭಾಂಗಣದಲ್ಲಿ ಜೆಜೆಎಂ ಅನುಷ್ಠಾನದ ಬಗ್ಗೆ ಗುರುವಾರ ಆಯೋಜಿಸಿದ್ದ ಒಂದು ದಿನದ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು. ಹೀಗಾಗಿ ಕಾರ್ಯಾಗಾರ ಆಯೋಜಿಸಲಾಗಿದ್ದು, ಜಿಲ್ಲೆಯ ಅಧಿಕಾರಿಗಳು, ಸಿಬ್ಬಂದಿಯು ಸರಿಯಾದ ಮಾಹಿತಿ ಪಡೆದುಕೊಳ್ಳಬೇಕು. ಯೋಜನೆಯ ಬಗ್ಗೆ ಕಾರ್ಯಗಾರದಲ್ಲಿ ಪಡೆದುಕೊಂಡ ಸಮಗ್ರ ವಿವರದೊಂದಿಗೆ ಕಾರ್ಯ ಯೋಜನೆ ರೂಪಿಸಿಕೊಂಡು ಯೋಜನೆ ಅನುಷ್ಠಾನಕ್ಕೆ ಸಹಕರಿಸಬೇಕು
ಬೆಂಗಳೂರು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಉಪಕಾರ್ಯದರ್ಶಿ ಜಾಫರ್ ಶರೀಫ್ ಸುತಾರ ಮಾತನಾಡಿ, ಕ್ಷೇತ್ರ ಮಟ್ಟದಲ್ಲಿನ ಕಾರ್ಯಕ್ರಮಗಳ ಜತೆಗೆ ಜಲ ಜೀವನ್ ಮಿಷನ್ ಯೋಜನೆಯಡಿಯಲ್ಲಿ ಅನುಷ್ಠಾನವಾಗುತ್ತಿರುವ ಕಾಮಗಾರಿಗಳ ಬಗ್ಗೆಯು ಸಂಪೂರ್ಣವಾದ ಮಾಹಿತಿ ಹೊಂದಿರಬೇಕು. ಯೋಜನೆಯ ಬಗ್ಗೆ ಯಾವುದೇ ನ್ಯೂನತೆಗಳಿದ್ದರೆ ಸಾಧ್ಯವಾದಷ್ಟು ತಮ್ಮ ಹಂತದಲ್ಲಿಯೇ ಬಗೆಹರಿಸಲು ಶ್ರಮಿಸಬೇಕು. ಅದೇ ರೀತಿ ಯೋಜನೆಯ ಮಹತ್ವವನ್ನು ತಿಳಿಸಿ ಆ ಯೋಜನೆಯು ಅನುಷ್ಠಾನ ಮಟ್ಟದಲ್ಲಿ ಎಲ್ಲರ ಜತೆ ಸೇರಿ ಕೆಲಸ ಮಾಡಿದರೆ ಮಾತ್ರ ಈ ಯೋಜನೆಯು ಯಶಸ್ವಿಯಾಗುತ್ತದೆ ಎಂದು ತಿಳಿಸಿದರು.
ಕಾರ್ಯಗಾರದಲ್ಲಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ರಾಜ್ಯ ಮಟ್ಟದ ಸಂಪನ್ಮೂಲ ವ್ಯಕ್ತಿ ಜಗದೀಶ ಸಿ., ಶಿಬಿರಾರ್ಥಿಗಳಿಗೆ ಜಲ ಜೀವನ್ ಮಿಷನ್ ಯೋಜನೆ ಅನುಷ್ಠಾನದ ಕುರಿತು ತರಬೇತಿ ನೀಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net