

ಕೆ.ಆರ್.ಪೇಟೆ: ತಾಲೂಕಿನ ಬೂಕನಕೆರೆ ಹೋಬಳಿಯ ಮಡವಿನಕೋಡಿ, ವಿಠಲಾಪುರ, ಗಂಜಿಗೆರೆ ಪಂಚಾಯಿತಿ ವ್ಯಾಪ್ತಿಯಲ್ಲಿ ಜೆಡಿಎಸ್ ಅಭ್ಯರ್ಥಿ ಎಚ್.ಟಿ.ಮಂಜು ಮತಯಾಚಿಸಿದರು.
ಜೆಡಿಎಸ್ ಅಭ್ಯರ್ಥಿಗೆ ಸಿಗುತ್ತಿರುವ ಬೆಂಬಲ ನೋಡಿ ಹಲವು ಪಕ್ಷಗಳು ಆತಂಕದಿಂದ ಸೀರೆ, ಹಣ, ಮೂಗುತಿ ಮುಂತಾದವುಗಳನ್ನು ಹಂಚಿ ಮತ ಪಡೆಯಲು ಮುಂದಾಗಿದ್ದಾರೆ. ಹಣದಿಂದ ಮತದಾರರನ್ನು ಖರೀದಿಸಬಹುದು ಎಂಬ ಭ್ರಮಗೆ ಮತದಾರರು ಈ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸಲಿದ್ದಾರೆ. ಮತದಾರರು ನನ್ನ ಜತೆ ಇದ್ದರೆ ಸಾಕು ನಾನು ಏನಾದರೂ ಸಾಧಿಸುತ್ತೇನೆ. ನಿಮ್ಮ ನಂಬಿಕೆಗೆ ಧಕ್ಕೆ ಬಾರದಂತೆ ಕೆಲಸ ಮಾಡಿ ತೋರಿಸುತ್ತೇನೆ ಎಂದರು.
ಮನ್ಮುಲ್ ನಿರ್ದೇಶಕ ಡಾಲು ರವಿ, ತಾಲೂಕು ಅಧ್ಯಕ್ಷ ಜಾನಕೀರಾಮು, ಮನ್ಮುಲ್ ಮಾಜಿ ನಿರ್ದೇಶಕ ಎಂ.ಬಿ.ಹರೀಶ್ ಮಾತನಾಡಿದರು. ಬೂಕನಕೆರೆ ಹೋಬಳಿ ಅಧ್ಯಕ್ಷ ನಂದೀಶ್, ಜೆಡಿಎಸ್ ತಾಲೂಕು ಕಾರ್ಯಾಧ್ಯಕ್ಷ ರಾಜೇಗೌಡ, ಉಪಾಧ್ಯಕ್ಷ ಪುಟ್ಟಸ್ವಾಮಿಗೌಡ, ಮುಖಂಡ ಹುಲ್ಲೇಗೌಡ ಇತರರಿದ್ದರು.