ಜೆಡಿಎಸ್ ಗೆ ಬಹುಮತ ಖಚಿತ

JDS Prachar
Published on

ಬೀದರ್: ನಗರಸಭೆಯ ಚುನಾವಣೆಯಲ್ಲಿ ಜೆಡಿಎಸ್ ಸ್ಪಷ್ಟ ಬಹುಮತದಿಂದ ಗೆದ್ದು ಅಧಿಕಾರಕ್ಕೇರಲಿದೆ ಎಂದು ಶಾಸಕ ಬಂಡೆಪ್ಪ ಖಾಶೆಂಪುರ ವಿಶ್ವಾಸ ವ್ಯಕ್ತಪಡಿಸಿದರು.

ನಗರದ ವಾಡ್೯ 19, 24, 25, 27 ಸೇರಿ ವಿವಿಧೆಡೆ ಪಕ್ಷದ ಅಭ್ಯರ್ಥಿಗಳ ಪರ ಪ್ರಚಾರ ನಡೆಸಿದ ಅವರು, ಉತ್ತಮ ಹಾಗೂ ಜನಪರ ಆಡಳಿತಕ್ಕಾಗಿ ಸ್ಥಳೀಯರು ಈ ಸಲ ಪೂರ್ಣ ಬಹುಮತ ನೀಡಲಿದ್ದಾರೆ. 20ಕ್ಕೂ ಅಧಿಕ ವಾಡ್೯ ಗಳಲ್ಲಿ ನಮ್ಮ ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದಾರೆ ಎಂದು ಹೇಳಿದರು.

ಜೆಡಿಎಸ್ ರೈತರ, ಬಡವರ, ಶ್ರಮಿಕರ ಪರವಾಗಿರುವ ಪಕ್ಷವಿದೆ. ನಾವು ಅಧಿಕಾರದಲ್ಲಿದ್ದಾಗ ಬಡವರ, ರೈತರ ಪರವಾದ ಅನೇಕ ಯೋಜನೆ ಜಾರಿಗೊಳಿಸಿದ್ದೇವೆ. ಸಾಲ ಮನ್ನಾದಿಂದ ರೈತರ ಬದುಕು ಹಸನಾಗಿದೆ. ನಗರಸಭೆಯಲ್ಲಿ ಬಹುಮತದೊಂದಿಗೆ ಅಧಿಕಾರಕ್ಕೆ ಬಂದರೆ ಮಾದರಿ ನಗರವನ್ನಾಗಿ ಮಾಡುವ ನಿಟ್ಟಿನಲ್ಲಿ ಶ್ರಮಿಸಲಾಗುವುದು ಎಂದು ಹೇಳಿದರು.

ಜೆಡಿಎಸ್ ಜಿಲ್ಲಾಧ್ಯಕ್ಷ ರಮೇಶ ಪಾಟೀಲ್ ಸೋಲಪುರ, ವಿವಿಧ ವಾಡ್೯ಗಳ ಜೆಡಿಎಸ್ ಅಭ್ಯರ್ಥಿಗಳು, ಮುಖಂಡರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net